ಗದಗ | ಸೂಪರ್ ಮಾರುಕಟ್ಟೆ ಕಾಂಪೌಂಡ್‌, ಪಿಲ್ಲರುಗಳಲ್ಲಿ ಬಿರುಕು: ಕಳಪೆ ಕಾಮಗಾರಿ ಆರೋಪ

Date:

Advertisements

ಗದಗ-ಬೆಟಗೇರಿ ಅವಳಿ ನಗರದಲ್ಲಿ ಎರಡು ಮೂರು ದಿನಗಳ ಹಿಂದೆ ಬಿರುಗಾಳಿ ಸಹಿತ ಸುರಿದ ಭಾರೀ ಮಳೆಗೆ ಬೆಟಗೇರಿ ಬಸ್‌ ನಿಲ್ದಾಣದ ಪಕ್ಕದಲ್ಲಿರುವ ಸೂಪರ್ ಹೈಟೆಕ್ ತರಕಾರಿ ಮಾರುಕಟ್ಟೆಯ ಕಾಂಪೌಂಡ್ ಬಿರುಕು ಬಿಟ್ಟಿದೆ. ಪಿಲ್ಲರಗಳು ಬಿರುಕು ಬಿಟ್ಟು ವಾಲಿವೆ. ಅಲ್ಲಿರುವ ನೂರಾರು ಮಂದಿ ತರಕಾರಿ ವ್ಯಾಪಾರಿಗಳು ಆತಂಕ ವ್ಯಕ್ತಪಡಿಸಿ, ಕಳಪೆ ಕಾಮಗಾರಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ನಗರಸಭೆ ವತಿಯಿಂದ ಅಂದಾಜು 2 ಕೋಟಿ ರೂ ವೆಚ್ಚದಲ್ಲಿ ಸೂಪರ್ ಹೈಟೆಕ್ ಮಾರುಕಟ್ಟೆ ನಿರ್ಮಾಣ ಮಾಡಿದ್ದು, 120 ವ್ಯಾಪಾರ ಮಳಿಗೆಗಳಿವೆ. ವ್ಯಾಪಾರಸ್ಥರಿಗೆ ಸಾಕಷ್ಟು ಅನುಕೂಲವಾಗಿತ್ತು. ಇದೀಗ ಮಾರುಕಟ್ಟೆ ಪಿಲ್ಲರುಗಳು ಬಿರುಕು ಬಿಟ್ಟಿರುವುದರಿಂದ ವ್ಯಾಪಾರಸ್ಥರಲ್ಲಿ, ಮಾರುಕಟ್ಟೆಗೆ ಬರುವ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ.

ಪಿಲ್ಲರ್ ಗಳಿಗೆ ಅಳವಡಿಸಲಾದ ತಗಡುಗಳನ್ನು ಸದ್ಯ ತೆರವುಗೊಳಿಸಲಾಗಿದ್ದು, ಮಾರುಕಟ್ಟೆ ಸುತ್ತಲೂ ಬ್ಯಾರಿಕೇಡ್ ಅಳವಡಿಸಲಾಗಿದೆ. ತರಕಾರಿ ಮಾರುಕಟ್ಟೆಯಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದ್ದು, ಪಿಲ್ಲರ್‌ಗಳು ಯಾವಾಗ ಕುಸಿದುಬಿಡುತ್ತವೆ ಎಂಬ ಭಯ ವ್ಯಾಪಾರಸ್ಥರನ್ನು ಕಾಡಲಾರಂಭಿಸಿದೆ. ನಗರಸಭೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisements
WhatsApp Image 2025 04 29 at 7.33.39 PM

ಮಾರುಕಟ್ಟೆ ಉದ್ಘಾಟನೆಯಾಗಿ ಏಳೇ ತಿಂಗಳಿಗೆ ಪಿಲ್ಲರುಗಳು ವಾಲಿವೆ. ತಾತ್ಕಾಲಿಕವಾಗಿ ಪ್ರತಿ ಪಿಲ್ಲರಿಗೂ ತಂತಿಯನ್ನು ಬಿಗಿಯಲಾಗಿದೆ. ಇಷ್ಟು ದೊಡ್ಡ ಮಾರುಕಟ್ಟೆಯ ಕಟ್ಟಡವನ್ನು ಹೊರುವಷ್ಟು ಪಿಲ್ಲರ್‌ಗಳಲ್ಲಿ ಸಾಮರ್ಥ್ಯ ಇಲ್ಲ. ಸಾಮಾನ್ಯ ಮನೆಗಳಿಗೆ ಇರುವ ಪಿಲ್ಲರ್ ಪ್ರಮಾಣದಲ್ಲಿ ನಿರ್ಮಿಸಲಾಗಿದೆ. ಹೀಗಿದ್ದಾಗ ಭಾರ ಹೊರಲು ಹೇಗೆ ಸಾಧ್ಯ. ಇಡೀ ಮಾರುಕಟ್ಟೆಯ ಕಟ್ಟಡವೇ ಕಳಪೆ ಕಾಮಗಾರಿಯಾಗಿದೆ ಎನ್ನುತ್ತಿದ್ದಾರೆ ಸ್ಥಳೀಯರು.

ಬಿರುಗಾಳಿ ಸಹಿತ ಮಳೆಗೆ ಬಿರುಕು ಬಿಟ್ಟ ಪಿಲ್ಲರುಗಳು ವಾಲುತ್ತಿರುವುದರಿಂದ ಮಾರುಕಟ್ಟೆಯಲ್ಲಿ ತರಕಾರಿ ವ್ಯಾಪಾರಸ್ಥರು ಮಾರುಕಟ್ಟೆಯ ಮುಂದಿನ ಬಯಲು ಜಾಗದಲ್ಲಿ ವ್ಯಾಪಾರ ಮಾಡುತ್ತಿದ್ದು, ಮಳೆಯಾದರೆ ವ್ಯಾಪಾರ ಮಾಡಲು ತೊಂದರೆ ಆಗುತ್ತದೆ. ಈ ರೀತಿ ಮಾರುಕಟ್ಟೆ ಕಳೆಪೆ ಕಾಮಗಾರಿ ಮಾಡಿದ್ದರಿಂದ ಬೀದಿಗೆ ಬಂದಿದ್ದೇವೆ ಎಂದು ವ್ಯಾಪಾರಸ್ಥರು ಹೇಳುತ್ತಾರೆ.

WhatsApp Image 2025 04 29 at 7.32.37 PM

ಈ ಕುರಿತು ಈದಿನ.ಕಾಮ್ ಜೊತೆಗೆ ತರಕಾರಿ ವ್ಯಾಪಾರಸ್ಥೆ ಮಮತಾ ಮಾತನಾಡಿ, “ಹೆಸರಿಗಷ್ಟೇ ಹೈಟೆಕ್ ಮಾರುಕಟ್ಟೆ ಆಗೈತಿ. ಮಾರುಕಟ್ಟೆ ಸರಿಯಾಗಿ ಕಟ್ಟದೆ ಇದ್ದಿದ್ದರಿಂದ ಹಿಂಗೆಲ್ಲ ಬಿರುಕು ಬಿಟ್ಟೈತಿ, ಈಗ ನಾವು ಬಿಸಲಾಗ, ಮಳ್ಯಾಗ ಯಾಪಾರ ಮಾಡಾಕಂತೀವಿ. ಮಳಿಯಾದ್ರ ಯಾಪಾರ ಎಲ್ಲ ಬಂದ ಆಗತೈತಿ. ರಿಪೇರಿ ಮಾಡಿದಾಗ ಬರೀರಂತ ಹೇಳ್ತರ. ಬೇಗ ರೆಡಿ ಮಾಡಿದ್ರ ಯಾಪಾರ ಮಾಡಾಕ ಅನುಕೂಲ ಆಗುತ್ತ” ಎಂದು ಹೇಳಿದರು.

ಇದನ್ನೂ ಓದಿ: ಗದಗ | ಮನರೇಗಾ ಯೋಜನೆಯಡಿ ಸ್ವಾವಲಂಬಿ ಬದುಕು; ಮುಂಡವಾಡದ ವೃದ್ಧ ದಂಪತಿಯ ಶ್ರಮಗಾಥೆ

ಗದಗ-ಬೆಟಗೇರಿಯ ಸೂಪರ್ ಹೈಟೆಕ್ ತರಕಾರಿ ಮಾರುಕಟ್ಟೆಯಲ್ಲಿ ಕಾಣಿಸಿಕೊಂಡಿರುವ ಬಿರುಕುಗಳು ಕೇವಲ ಕಟ್ಟಡದ ತಾಂತ್ರಿಕ ದೌರ್ಬಲ್ಯವಲ್ಲ, ಅಭಿವೃದ್ಧಿ ಹೆಸರಿನಲ್ಲಿ ನಡೆಯುತ್ತಿರುವ ಅಸ್ಥಿರ ಕಾಮಗಾರಿಗಳ ಕಳಪೆ ಗುಣಮಟ್ಟದ ಸಂಕೇತವೂ ಆಗಿದೆ. ನೂರಾರು ವ್ಯಾಪಾರಿಗಳ ದಿನನಿತ್ಯದ ಬದುಕಿಗೆ ಆಧಾರವಾದ ಈ ಮಾರುಕಟ್ಟೆಯ ಭದ್ರತೆ ಸವಾಲು ಎದುರಿಸುತ್ತಿರುವುದು ಆತಂಕಕಾರಿ. ಸಾರ್ವಜನಿಕ ಹಣದ ಸರಿಯಾದ ಬಳಕೆ, ಕಟ್ಟಡದ ಗುಣಮಟ್ಟದ ಮೇಲ್ವಿಚಾರಣೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ತಕ್ಷಣದ ಕ್ರಮ ಅಗತ್ಯವಾಗಿದೆ. ಬಿರುಗಾಳಿ-ಮಳೆಯೆಂದು ಕಾರಣ ಹೇಳದೆ, ಇದನ್ನು ಒಂದು ಎಚ್ಚರಿಕೆ ಎಂದು ಪರಿಗಣಿಸಿ, ಭವಿಷ್ಯದಲ್ಲಿ ಇಂತಹ ಅಪಾಯಗಳು ಉಂಟಾಗದಂತೆ ಕ್ರಮ ಕೈಗೊಳ್ಳಬೇಕಾಗಿದೆ.

SHARANAPPA H SANGANALA
ಶರಣಪ್ಪ ಎಚ್ ಸಂಗನಾಳ
+ posts

ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಶರಣಪ್ಪ ಎಚ್ ಸಂಗನಾಳ
ಶರಣಪ್ಪ ಎಚ್ ಸಂಗನಾಳ
ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X