ಜಮ್ಮು ಕಾಶ್ಮೀರ ಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿ ರದ್ದತಿ ಹಾಗೂ ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಭಜಿಸಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ಸುಪ್ರೀಂ ಕೋರ್ಟ್ ಜುಲೈ 11ರಂದು ನಡೆಸಲಿದೆ.
ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರ ನೇತೃತ್ವದ ಸಂವಿಧಾನ ಪೀಠವು ಕೊಲಿಜಿಯಂ ನ್ಯಾಯಾಧೀಶರನ್ನು ಒಳಗೊಂಡಿರುತ್ತದೆ. ಐವರು ನ್ಯಾಯಮೂರ್ತಿಗಳ ಕೊಲಿಜಿಯಂ ಪೀಠದಲ್ಲಿ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿ ಆರ್ ಗವಾಯಿ ಮತ್ತು ಸೂರ್ಯ ಕಾಂತ್ ಇದ್ದಾರೆ.
ವಿವಿಧ ಅರ್ಜಿಗಳು ಜಮ್ಮು ಕಾಶ್ಮೀರವನ್ನು “ಜನರಿಂದ ಒಪ್ಪಿಗೆ ಪಡೆಯದೆ” ವಿಭಜಿಸುವ ಮೂಲಕ ಭಾರತದ ವಿಶಿಷ್ಟ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಸ್ಥಿರಗೊಳಿಸುವ ಕೇಂದ್ರದ “ಏಕಪಕ್ಷೀಯ” ಕ್ರಮ ಹಾಗೂ ಕರ್ಫ್ಯೂ ವಿಧಿಸುವಿಕೆಯ ಕ್ರಮಗಳನ್ನು ಪ್ರಶ್ನಿಸಿವೆ.
ಈ ಸುದ್ದಿ ಓದಿದ್ದೀರಾ? ಮಹಾರಾಷ್ಟ್ರ | ಎನ್‌ಸಿಪಿಯಿಂದ ಮೂವರ ಉಚ್ಚಾಟನೆ; 9 ಶಾಸಕರು, ಇಬ್ಬರು ಸಂಸದರ ಅನರ್ಹತೆಗೆ ನಿರ್ಣಯ
ಜಮ್ಮು ಕಾಶ್ಮೀರ ಕ್ಕೆ 370ರ ವಿಧಿಯನ್ನು ವಿಶೇಷ ಹಕ್ಕುಗಳು ಮತ್ತು ಸವಲತ್ತುಗಳನ್ನು ಪಡೆದುಕೊಳ್ಳುವ ಸಲುವಾಗಿ ನೀಡಲಾಗಿದೆ. ಈ ವಿಶೇಷ ಹಕ್ಕುಗಳನ್ನು 1954 ರಲ್ಲಿ ಅಂದಿನ ಪ್ರಧಾನಿ ಜವಾಹರಲಾಲ್ ನೆಹರು ಅವರ ಸಂಪುಟದ ಸಲಹೆಯ ಮೇರೆಗೆ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್ ಅವರ ಆದೇಶದ ಮೂಲಕ ನೀಡಲಾಗಿತ್ತು. ಆದರೆ ಸಂವಿಧಾನದ 370ನೇ ವಿಧಿಯನ್ನು 2019ರ ಆಗಸ್ಟ್ 5ರಂದು ರದ್ದುಪಡಿಸಿದ್ದ ಕೇಂದ್ರ ಸರ್ಕಾರ, ರಾಜ್ಯವನ್ನು ಜಮ್ಮು ಕಾಶ್ಮೀರ ಹಾಗೂ ಲಡಾಖ್ ಎಂದು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದೆ. ಸಂಸತ್ತಿನ ಸಲಹೆಯನ್ನು ಪಡೆಯದೆ ಈ ವಿಧಿಯನ್ನು ರದ್ದುಗೊಳಿಸಲಾಗಿತ್ತು ಎಂದು ಅರ್ಜಿಗಳಲ್ಲಿ ಪ್ರಶ್ನಿಸಲಾಗಿದೆ.