ಕರಾವಳಿ ಭಾಗದಲ್ಲಿ ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದೆ. ಇಂದು (ಜುಲೈ 4) ಭಾರೀ ಮಳೆಯಾಗುವ ಸಾಧ್ಯತೆ ಇದೆ. ತೊರೆಗಳು ತುಂಬಿ ಹರಿಯುವ ಸಾಧ್ಯತೆಯೂ ಇದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲೆಯ ಮೂಲ್ಕಿ, ಉಲ್ಲಾಳ, ಮೂಡಬಿದಿರೆ ಹಾಗೂ ಬಂಟ್ವಾಳ ತಾಲೂಕುಗಳ ಶಾಲೆ ಮತ್ತು ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.