ಆಂಧ್ರಪ್ರದೇಶ | ದೇಗುಲದ ಗೋಡೆ ಕುಸಿದು 8 ಮಂದಿ ಸಾವು

Date:

Advertisements

ಸಿಂಹಾದ್ರಿ ಅಪ್ಪಣ್ಣಸ್ವಾಮಿ ದೇವಸ್ಥಾನದ ಗೋಡೆ ಕುಸಿದು ಎಂಟು ಜನರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಸಿಂಹಾಚಲಂನಲ್ಲಿ ನಡೆದಿದೆ.

ದೇವಸ್ಥಾನದಲ್ಲಿ ನಡೆಯುತ್ತಿದ್ದ ಚಂದನೋತ್ಸವಂ ವೇಳೆ ಈ ಅವಘಡ ಸಂಭವಿಸಿದೆ. ಇಂದು ಬೆಳಗ್ಗೆ ಚಂದನೋತ್ಸವದಲ್ಲಿ ವರಾಹ ಲಕ್ಷ್ಮೀ ನರಸಿಂಹಸ್ವಾಮಿಯ ನಿಜರೂಪ ದರ್ಶನಕ್ಕಾಗಿ ಭಕ್ತರು ಸರತಿ ಸಾಲಿನಲ್ಲಿ ನಿಂತಿದ್ದರು. ಇದೇ ವೇಳೆ ದೇವಸ್ಥಾನದಲ್ಲಿ ಇತ್ತೀಚಿಗೆ ನಿರ್ಮಿಸಲಾಗಿದ್ದ 20 ಅಡಿ ಉದ್ದದ ಹೊಸ ಗೋಡೆಯೊಂದು ಕುಸಿದಿದೆ. ಪರಿಣಾಮ ಎಂಟು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಸ್ಥಳಕ್ಕೆ ತಕ್ಷಣವೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ದೌಡಾಯಿಸಿ, ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದವು. ಅವಶೇಷಗಳಡಿಯಲ್ಲಿ ಸಿಲುಕಿರುವವರನ್ನು ಹೊರತೆಗೆಯಲಾಗಿದ್ದು, ಗಾಯಾಳುಗಳನ್ನು ಕಿಂಗ್ ಜಾರ್ಜ್ ಆಸ್ಪತ್ರೆಗೆ ರವಾನಿಸಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾಗವತ್ ಅಹಿಂಸೆಯ ಮಾತಾಡಿದ್ದಾರೆ; ಅಂದಮೇಲೆ ಸಿದ್ದರಾಮಯ್ಯರ ಹೇಳಿಕೆಯಲ್ಲಿ ತಪ್ಪೇನಿದೆ?

ವರದಿಗಳ ಪ್ರಕಾರ, ಇಂದು ಬೆಳಗಿನ ಜಾವ 2.30 ರಿಂದ 3.30ರವರೆಗೆ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಭಾರೀ ಗಾಳಿ ಹಾಗೂ ದೇವಸ್ಥಾನದ ಬಳಿ ಹರಿಯುತ್ತಿದ್ದ ನೀರಿನ ಹರಿವು ಈ ಘಟನೆಗೆ ಕಾರಣ ಎನ್ನಲಾಗಿದೆ. ಗೋಡೆಯು ಮಣ್ಣಿನ ಹೊದಿಕೆಯನ್ನು ಹೊಂದಿದ್ದು, ಮಣ್ಣು ಸಡಿಲಗೊಂಡಿರಬಹುದು, ಜೊತೆಗೆ ಭಾರೀ ಗಾಳಿಯಿಂದಾಗಿ ಪೆಂಡಾಲ್‌ಗಳು ನೆಲಕ್ಕುರುಳಿದವು. ಇನ್ನೂ 20 ದಿನಗಳ ಹಿಂದೆಯಷ್ಟೇ ಈ ಗೋಡೆಯನ್ನು ನಿರ್ಮಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

Download Eedina App Android / iOS

X