ಬಸವಣ್ಣನನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ: ಸಿಎಂ ಸಿದ್ದರಾಮಯ್ಯ

Date:

Advertisements

ಬಸವಣ್ಣನನ್ನು ಸ್ಮರಿಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು (ಏ.30) ಬಸವ ಸಮಿತಿ ಆಯೋಜಿಸಿದ್ದ ವಿಶ್ವ ಗುರು ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

“ಸರ್ಕಾರ ಅವರಿಗೆ ಕೃತಜ್ಞತೆಯನ್ನು ಸಲ್ಲಿಸುವ ಸಲುವಾಗಿ ಸಾಂಸ್ಕೃತಿಕ ನಾಯಕ ಎಂದು ಗುರುತಿಸಿದೆ. ಬಸವಣ್ಣ ವಿಶ್ವ ಗುರುಗಳಾಗಿದ್ದು, ಅವರು ಕೇವಲ ಸಾಮಾಜಿಕ ಕ್ರಾಂತಿ ಮಾಡಿದವರಲ್ಲ, ಸಮಾಜದ ಪರಿವರ್ತನೆಗೆ ಇತಿಹಾಸದಲ್ಲಿ ಶಾಶ್ವತವಾಗಿ ನೆಲೆಸುವ, ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುವ ಕೆಲಸವನ್ನು ಬಸವಣ್ಣ ತಮ್ಮ ಜೀವಿತ ಕಾಲದಲ್ಲಿ ಮಾಡಿದ್ದಾರೆ” ಎಂದರು.

ಬಸವ ಜಯಂತಿ ಶುಭಾಶಯ ತಿಳಿಸಿದ ಸಿಎಂ

Advertisements

“ದೇವಸ್ಥಾನಗಳನ್ನು ನಿರಾಕರಿಸಿ, ದೇವರ  ಕಲ್ಪನೆಯನ್ನು ಮನುಷ್ಯನ ಶರೀರಕ್ಕೆ ಸ್ಥಳಾಂತರಗೊಳಿಸಿ, ದೇಹವನ್ನೇ ದೇವಾಲಯವನ್ನಾಗಿ ಮಾಡಿದವರು ಬಸವಣ್ಣ. ಪುರೋಹಿತಶಾಹಿ ಕಲ್ಪಿಸಿದ ಸ್ವರ್ಗ – ನರಕಾದಿ ಶೋಷಕ ತಂತ್ರಗಳನ್ನು ಧಿಕ್ಕರಿಸಿ ಇಹದ ಬದುಕಿನ ಮೇಲಿನ ಪ್ರೀತಿಯನ್ನು ಮೂಢಿಸಿದ, ಅನೇಕ ಅವೈಚಾರಿಕವಾದ ಆಚರಣೆಗಳನ್ನೂ ಮೂಢನಂಬಿಕೆಗಳನ್ನು ತಿರಸ್ಕರಿಸಿದ, ವೃತ್ತಿಯ ತಾರತಮ್ಯಗಳ ಮೇಲಿನಿಂದ ಮನುಷ್ಯನ ಸಾಮಾಜಿಕ ಅಂತಸ್ತನ್ನು ಪರಿಗಣಿಸದೆ ಕಾಯಕವೆಲ್ಲವೂ ಪೂಜ್ಯವೆಂದು ಸಾರಿದವರು ಬಸವಣ್ಣ. ನಾವಿಂದು ಸಂಘರ್ಷಮಯವಾದ ಸಾಮಾಜಿಕ ಮತ್ತು ರಾಜಕೀಯ ವ್ಯವಸ್ಥೆಯ ಬಂಧಿಯಾಗಿದ್ದೇವೆ. ನಾ‍ಲ್ಕು ದಿಕ್ಕುಗಳಿಂದಲೂ ಹಿಂಸೆ, ಸೇಡು, ಪ್ರತಿಕಾರಗಳ ಘೋಷಣೆಗಳು ಮೊಳಗುತ್ತಿರುವ ಈ ಕಾಲದಲ್ಲಿ ಬಸವಣ್ಣನವರು ನೀಡಿದ್ದ ‘‘ದಯೆಯೇ ಧರ್ಮದ ಮೂಲವಯ್ಯಾ’’ ಎಂಬ ಶಾಂತಿ-ಸೌಹಾರ್ದತೆಯ ಮಂತ್ರವನ್ನು ನಾವೆಲ್ಲರೂ ಮನನ ಮಾಡಿಕೊಳ್ಳಬೇಕಾಗಿದೆ. ಅಂತಹ ಅರಿವಿನ ಬೆಳಕನ್ನು ನಮ್ಮೆಲ್ಲರಲ್ಲಿಯೂ ಬಸವಣ್ಣ ಮೂಡಿಸಲಿ ಎಂದು ಹಾರೈಸುತ್ತೇನೆ” ಎಂದು ಎಕ್ಸ್‌ ತಾಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜ್ಯದ ಜನತೆಗೆ ಬಸವ ಜಯಂತಿಯ ಶುಭಾಶಯ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X