ಮೇ 4 ರಂದು NEET(UG) 2025ರ ಪರೀಕ್ಷೆ: ರಾಜ್ಯದಲ್ಲಿ 381 ಪರೀಕ್ಷಾ ಕೇಂದ್ರ

Date:

Advertisements

ರಾಷ್ಟ್ರದಾದ್ಯಂತ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ವತಿಯಿಂದ 2025ರ NEET(UG) ಪರೀಕ್ಷೆಯು ಮೇ 4 ರಂದು ಮಧ್ಯಾಹ್ನ 2.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಕರ್ನಾಟಕ ರಾಜ್ಯದಾದ್ಯಂತ ಒಟ್ಟು 381 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, 1,49,000 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲು ಅವಕಾಶವಿರುತ್ತದೆ.

ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಾತಿ ಪತ್ರದೊಂದಿಗೆ ಕಾಲೇಜಿನಿಂದ ನೀಡಲ್ಪಟ್ಟಿರುವ ಐಡಿ/ಆಧಾರ್ ಕಾರ್ಡ್/ಪಾನ್ ಕಾರ್ಡ್/ಡಿ.ಎಲ್/ವೋಟರ್ ಐಡಿ ಅಥವಾ ಇತರೆ ಯಾವುದಾದರೂ ಅಂಗೀಕೃತ ಐಡಿ ಜೊತೆ, ಒಂದು ಪೋಸ್ಟ್ ಕಾರ್ಡ್ ಮತ್ತು ಎರಡು ಪಾಸ್ ಪೋರ್ಟ್ ಅಳತೆಯ ಫೋಟೋಗಳನ್ನು ಕಡ್ಡಾಯವಾಗಿ ತೆಗೆದುಕೊಂಡು ಹಾಜರಾಗಬೇಕು. ಬೆಳಿಗ್ಗೆ 11.00 ಗಂಟೆಯಿಂದ NTA ವತಿಯಿಂದ ನೇಮಿಸಿರುವ ಏಜೆನ್ಸಿಗಳಿಂದ ಸಂಬಂಧಪಟ್ಟ ರಿಜಿಸ್ಟ್ರೇಷನ್ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಹಾಗೂ ನಿಯೋಜಿತ ಪೊಲೀಸ್ ಸಿಬ್ಬಂದಿ ವತಿಯಿಂದ ವಿದ್ಯಾರ್ಥಿಗಳ ಸುರಕ್ಷತಾ ತಪಾಸಣೆಯನ್ನು ನಡೆಸಲಾಗುವುದು.

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿದ್ದು, ವಿದ್ಯಾರ್ಥಿಗಳು ಪ್ರವೇಶಾತಿ ಪತ್ರದಲ್ಲಿ ನೀಡಲಾಗಿರುವ ಸೂಚನೆಗಳನ್ವಯ ಮಾರ್ಗಸೂಚಿಯನ್ನು ಪಾಲಿಸಬೇಕು. ವಿದ್ಯಾರ್ಥಿಗಳು ಪೂರ್ಣ ತೋಳಿರುವ ಮೇಲಂಗಿ/ ದೊಡ್ಡ ಬಟನ್ ಗಳಿರುವ ಶರ್ಟ್ /ಪ್ಯಾಂಟ್/ಶೂ/ ಸಾಕ್ಸ್ / ಎತ್ತರದ ಚಪ್ಪಲಿಗಳು/ ಕಿವಿಯೋಲೆ/ಬಳೆ/ಸರ/ಕಾಲ್ಗೆಜ್ಜೆ/ಮೂಗುತಿ/ಜಡೆ ಕ್ಲಿಪ್ ಹಾಗೂ ಇತರ ಯಾವುದೇ ಮೆಟಲ್ ಉಪಕರಣಗಳನ್ನು ಧರಿಸುವಂತಿಲ್ಲ ಹಾಗೂ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವಂತಿಲ್ಲ ಮತ್ತು ಧರಿಸುವಂತಿಲ್ಲ. ಪ್ರವೇಶಾತಿ ರಿಜಿಸ್ಟ್ರೇಷನ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಂಡ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಇರುವ ಕೊಠಡಿಗೆ ನೇರವಾಗಿ ತೆರಳತಕ್ಕದ್ದು.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಭಾಗವತ್ ಅಹಿಂಸೆಯ ಮಾತಾಡಿದ್ದಾರೆ; ಅಂದಮೇಲೆ ಸಿದ್ದರಾಮಯ್ಯರ ಹೇಳಿಕೆಯಲ್ಲಿ ತಪ್ಪೇನಿದೆ?

ಮಧ್ಯಾಹ್ನ 2.00 ರಿಂದ ಸಂಜೆ 5.00 ಗಂಟೆಯವರೆಗೆ ಪರೀಕ್ಷೆಯು ನಡೆಯಲಿದ್ದು, ಪರೀಕ್ಷಾ ಅವಧಿಯಲ್ಲಿ ಪ್ರತಿ ಗಂಟೆಗೊಂದು ಬಾರಿ ಬೆಲ್ ಮೂಲಕ ಸೂಚನೆ ನೀಡಲಾಗುವುದು. ಪರೀಕ್ಷಾ ಕೇಂದ್ರಗಳಿಗೆ ನಿರಂತರ ವಿದ್ಯುತ್ ವ್ಯವಸ್ಥೆ, ಆರೋಗ್ಯ ಸಿಬ್ಬಂದಿ ಹಾಗೂ ತುರ್ತು ಸೇವೆಗಳ ನಿಯೋಜನೆ, ಪರೀಕ್ಷಾ ಕೇಂದ್ರಗಳ ಸ್ವಚ್ಛತೆ ಮತ್ತು ಪರೀಕ್ಷೆಗೆ ಹಾಜರಾಗುವ ದಿವ್ಯಾಂಗರು /ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಮಿಲ್ ಚೇರ್ ವ್ಯವಸ್ಥೆ ಹಾಗೂ ತುರ್ತು ಆಗ್ನಿ ಶಾಮಕ ವ್ಯವಸ್ಥೆಯನ್ನು ಜಿಲ್ಲಾಡಳಿತದ ವತಿಯಿಂದ ಮಾಡಲಾಗಿರುತ್ತದೆ.

NTA ವತಿಯಿಂದ Frisking ಮತ್ತು JAMMER ಅಳವಡಿಸಲು, ಏಜೆನ್ಸಿರವರನ್ನು ನಿಯೋಜಿಸಿದ್ದು, ಪರೀಕ್ಷಾ ಕೇಂದ್ರಕ್ಕೆ, JAMMER ಅಳವಡಿಕೆ ಮತ್ತು Frisking ಮಾಡುತ್ತಿರುವ ಬಗೆ, ಪರೀಕ್ಷಾ ಕೇಂದ್ರದ ಮುಖ್ಯಸ್ವರು ಖಚಿತಪಡಿಸಿಕೊಳ್ಳಬೇಕು. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ನಿಯೋಜಿತ ಸಿಬ್ಬಂದಿಯು ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳನ್ನು ಸೂಕ್ತ ತಪಾಸಣೆಗೆ ಒಳಪಡಿಸುವರು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೆ ಕ್ರಮವಹಿಸಲಾಗಿದ್ದು, ಪರೀಕ್ಷಾ ಕೇಂದ್ರಗಳಿಗೆ ನಿಯೋಜಿತ ಅಧಿಕಾರಿ/ಸಿಬ್ಬಂದಿಯನ್ನು ಹೊರತುಪಡಿಸಿ, ಇತರೆ ಯಾವುದೇ ಸಾರ್ವಜನಿಕರಿಗೆ ಪ್ರವೇಶವಿರುವುದಿಲ್ಲ ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X