ಸಮಾಜದ ಶಾಂತಿ ಕದಡಲು ದುಷ್ಟ ಶಕ್ತಿಗಳಿಂದ ಅಶ್ರಫ್ ಹತ್ಯೆ: ಸಚಿವ ದಿನೇಶ್‌ ಗುಂಡೂರಾವ್‌

Date:

Advertisements

ಮಂಗಳೂರಿನ ಹೊರವಲಯದ ಕುಡುಪು ಬಳಿ ಅಶ್ರಫ್ ಎಂಬ ಯುವಕನ ಹತ್ಯೆ ಸಮಾಜದ ಶಾಂತಿ ಕದಡುವ ದುಷ್ಟ ಶಕ್ತಿಗಳ ಕೃತ್ಯ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿಯೂ ಆಗಿರುವ ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಬಗ್ಗೆ ಬರೆದುಕೊಂಡಿರುವ ಅವರು, “ದಕ್ಷಿಣ ಕನ್ನಡ ಜಿಲ್ಲೆ ಹಿಂದೆ ಸಾಮರಸ್ಯ ಮತ್ತು ಭಾವೈಕ್ಯತೆಯ ನೆಲೆಯಾಗಿತ್ತು. ಆದರೆ ಕೆಲ ಸಮಾಜಘಾತುಕ ಶಕ್ತಿಗಳು ಹಲವು ವರ್ಷಗಳಿಂದ ಜಿಲ್ಲೆಯ ಕೋಮು ಸೌರ್ಹಾದಕ್ಕೆ ಕೊಳ್ಳಿ ಇಡುವ ಯತ್ನ ಮಾಡುತ್ತಿವೆ. ಮೊನ್ನೆಯ ಕುಡುಪು ಘಟನೆ ಇದರ ಒಂದು ಭಾಗ” ಎಂದಿದ್ದಾರೆ.

“ಯುವಕನ ಕೊಲೆ ಸಂಬಂಧ ಈಗಾಗಲೇ ಮಂಗಳೂರು ಪೊಲೀಸರು ಶೀಘ್ರ ಕ್ರಮ ತೆಗೆದುಕೊಂಡಿದ್ದಾರೆ. ಕೃತ್ಯದಲ್ಲಿ ಭಾಗಿಯಾದ 15 ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೂ ಕೆಲವು ದುಷ್ಕರ್ಮಿಗಳು ಈ ಕೃತ್ಯದಲ್ಲಿ‌ ಭಾಗಿಯಾಗಿದ್ದು ಅವರ ಹೆಡೆಮುರಿ ಕಟ್ಟುವುದು ಖಂಡಿತ‌. ಕೊಲೆ ಪ್ರಕರಣವನ್ನು ತ್ವರಿತವಾಗಿ ಬೇಧಿಸಿ ಆರೋಪಗಳನ್ನು ಬಂಧಿಸಿದ ಮಂಗಳೂರು ಪೊಲೀಸರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಅದೇ ರೀತಿ ಜಿಲ್ಲೆಯ ಸೌರ್ಹಾದತೆ ಕಾಪಾಡುವುದು ಕೂಡ ಪೊಲೀಸರ ಜವಾಬ್ದಾರಿ. ಈ ಘಟನೆಯ ಬಳಿಕ ಕೆಲ ಸಮಾಜಘಾತಕ ಶಕ್ತಿಗಳು ದ್ವೇಷ ಹರಡುವ ಪ್ರಯತ್ನ ನಡೆಸುವ ಸಾಧ್ಯತೆಯಿದೆ. ಪೊಲೀಸರು ಅದಕ್ಕೆ ಅವಕಾಶ ಕೊಡಬಾರದು‌” ಎಂದು ಸೂಚಿಸಿದ್ದಾರೆ.

Advertisements

“ಕೋಮು ಸಂಘರ್ಷ ಹುಟ್ಟು ಹಾಕುವ ಮೂಲಕ ನಮ್ಮ ಸರ್ಕಾರಕ್ಕೆ ಕೆಟ್ಟ ಹೆಸರು ತರಬೇಕೆನ್ನುವುದು ಕೆಲ ಪಟ್ಟಭದ್ರ ಹಿತಾಸಕ್ತಿಗಳ ಉದ್ದೇಶವಾಗಿದೆ. ದ.ಕನ್ನಡದ ಜನ ಈ ಹುನ್ನಾರಗಳನ್ನು ಅರಿಯಬೇಕು. ಪ್ರಜ್ಞಾವಂತರ ಜಿಲ್ಲೆ ಎಂದೇ ಹೆಸರಾದ ದ.ಕನ್ನಡಕ್ಕೆ ಕಳಂಕ ಬಾರದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ” ಎಂದಿದ್ದಾರೆ.

ಇದನ್ನು ಓದಿದ್ದೀರಾ? ಮಂಗಳೂರು ಘಟನೆ | ‘ಪಾಕಿಸ್ತಾನ್ ಜಿಂದಾಬಾದ್’ ಹೇಳಿಕೆ ನನ್ನದಲ್ಲ, ಕೊಲೆ ಆರೋಪಿಗಳದ್ದು: ಗೃಹ ಸಚಿವ ಪರಮೇಶ್ವರ್

“ಕಾನೂನು ಕೈಗೆತ್ತಿಕೊಳ್ಳುವ, ಸಮಾಜದ ಸ್ವಾಸ್ಥ್ಯ ಕೆಡಿಸುವ, ಸಾಮರಸ್ಯಕ್ಕೆ ಕೊಳ್ಳಿ ಇಡುವ ಯಾವುದೇ ದುಷ್ಟ ಪ್ರಯತ್ನಕ್ಕೆ ನಮ್ಮ ಸರ್ಕಾರ ಅವಕಾಶ ಮಾಡಿಕೊಡುವುದಿಲ್ಲ. ಈ ವಿಚಾರದಲ್ಲಿ ನಮ್ಮದು ಶೂನ್ಯ ಸಹಿಷ್ಣುತೆ ಎಂಬ‌ ಮಾತನ್ನು ಸಮಾಜ ಘಾತಕರಿಗೆ ಎಚ್ಚರಿಕೆಯ ರೂಪದಲ್ಲಿ ಹೇಳಲು ಬಯಸುತ್ತೇನೆ. ದಯೆಗಿಂತ ಮಿಗಿಲಾದ ಧರ್ಮವಿಲ್ಲ ಎಂಬ ಬಸವಣ್ಣನವರ ಆಶಯದಂತೆ ನಮ್ಮ ಸರ್ಕಾರ ಆಡಳಿತ ನಡೆಸುತ್ತಿದೆ. ಈ ಆಶಯಕ್ಕೆ ಧಕ್ಕೆ ಬರಬಾರದು. ಸಮಾಜದ ಶಾಂತಿ ಕದಡಬಾರದು” ಎಂದು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X