ಅಮೆರಿಕ | ಸ್ಯಾನ್‌ ಫ್ರಾನ್ಸಿಸ್ಕೊದ ಭಾರತ ರಾಯಭಾರ ಕಚೇರಿ ಮೇಲೆ ದಾಳಿ : ಖಲಿಸ್ತಾನಿಗಳ ಕೃತ್ಯ ಶಂಕೆ

Date:

Advertisements
  • ಅಮೆರಿಕ ಸ್ಯಾನ್‌ ಫ್ರಾನ್ಸಿಸ್ಕೊ ರಾಯಭಾರ ಕಚೇರಿಯಲ್ಲಿ ಕಳೆದ ತಿಂಗಳು ಖಲಿಸ್ತಾನಿ ಧ್ವಜ ಹಾರಾಟ
  • ಭಯೋತ್ಪಾದಕ ಹರ್ದೀಪ್‌ ಸಿಂಗ್‌ ನಿಜ್ಜರ್‌ ಸಾವಿಗೆ ಪ್ರತೀಕಾರವಾಗಿ ಖಲಿಸ್ತಾನ ಬೆಂಬಲಿಗರ ಕೃತ್ಯ ಶಂಕೆ

ಅಮೆರಿಕ ಸ್ಯಾನ್ ಫ್ರಾನ್ಸಿಸ್ಕೊದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಬೆಂಕಿ ಹಚ್ಚಿ ದಾಳಿ ನಡೆಸಲಾಗಿದೆ ಎಂದು ಮಂಗಳವಾರ (ಜುಲೈ 4) ಮಾಧ್ಯಮಗಳು ವರದಿ ಮಾಡಿವೆ.

ಈ ವಿಧ್ವಂಸಕ ಕೃತ್ಯದ ಹಿಂದೆ ಖಲಿಸ್ತಾನಿ ಪ್ರತ್ಯೇಕತಾವಾದಿಗಳ ಕೈವಾಡವಿದೆ ಎಂದು ಶಂಕಿಸಲಾಗಿದೆ. ಕೃತ್ಯವನ್ನು ಅಮೆರಿಕ ಬಲವಾಗಿ ಖಂಡಿಸಿದ್ದು, ಈ ಹಿಂಸಾಚಾರವನ್ನು ‘ಕ್ರಿಮಿನಲ್ ಅಪರಾಧ’ ಎಂದು ಕರೆದಿದೆ.

ಅಮೆರಿಕದ ಸರ್ಕಾರಿ ಇಲಾಖೆಯ ವಕ್ತಾರ ಮ್ಯಾಥ್ಯೂ ಮಿಲ್ಲರ್‌ ಈ ಕುರಿತು ಟ್ವೀಟ್‌ ಮಾಡಿದ್ದಾರೆ. “ಭಾರತೀಯ ರಾಯಭಾರ ಕಚೇರಿ ಮೇಲಿನ ವಿಧ್ವಂಸಕ ಕೃತ್ಯವನ್ನು ಅಮೆರಿಕ ಬಲವಾಗಿ ಖಂಡಿಸುತ್ತದೆ ಹಾಗೂ ಅಮೆರಿಕದಲ್ಲಿ ವಿದೇಶಿ ರಾಜತಾಂತ್ರಿಕರು ಹಾಗೂ ರಾಯಭಾರದ ವಿರುದ್ಧದ ವಿಧ್ವಂಸಕ ಕೃತ್ಯವು ಕ್ರಿಮಿನಲ್ ಅಪರಾಧವಾಗಿದೆ” ಎಂದು ಹೇಳಿದ್ದಾರೆ.

Advertisements

ಮಾಹಿತಿ ತಿಳಿಯುತ್ತಲೇ ಸ್ಯಾನ್‌ ಫ್ರಾನ್ಸಿಸ್ಕೊ ಅಗ್ನಿಶಾಮಕ ದಳ ತಕ್ಷಣ ಸ್ಥಳಕ್ಕೆ ದೌಡಾಯಿಸಿದ್ದು ಬೆಂಕಿ ನಂದಿಸಿದೆ. ಯಾವುದೇ ದೊಡ್ಡ ಪ್ರಮಾಣದ ಹಾನಿ ಉಂಟಾಗಿಲ್ಲ, ಗಂಭೀರ ಗಾಯಗಳು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಮೆರಿಕ ಸ್ಯಾನ್‌ಫ್ರಾನ್ಸಿಸ್ಕೊದಲ್ಲಿ ಜುಲೈ 2 ರಂದು ಭಾರತದ ರಾಯಭಾರ ಕಚೇರಿಗೆ ಖಲಿಸ್ತಾನ ಭಯೋತ್ಪಾದಕರ ಪರ ಬೆಂಬಲಿಗರು ಬೆಂಕಿ ಹಚ್ಚಲು ಯತ್ನಿಸಿರುವ ವಿಡಿಯೋವೊಂದನ್ನು ದಕ್ಷಿಣ ಏಷ್ಯಾದ ಟಿ.ವಿ ನೆಟ್‌ವರ್ಕ್‌ ದಿಯಾ ಟಿ.ವಿ ಹಂಚಿಕೊಂಡಿದೆ.

“ಹಿಂಸೆ ಹಿಂಸೆಯನ್ನು ಹುಟ್ಟಿಸುತ್ತದೆ” ಎಂದು ಬೆಂಕಿ ಹಚ್ಚಿದ ಪ್ರತಿಭಟನಾಕಾರರು ಹೇಳುತ್ತಿರುವುದನ್ನು ವಿಡಿಯೋ ತೋರಿಸಿದೆ. ಅಲ್ಲದೆ ಖಲಿಸ್ತಾನ ಪರ ಸಂಘಟನೆಗಳ ನೇತೃತ್ವ ವಹಿಸಿದ್ದ ಭಯೋತ್ಪಾದಕ ಹರ್ದೀಪ್‌ ಸಿಂಗ್‌ ನಿಜ್ಜರ್‌ ಸಾವಿನ ಬಗ್ಗೆ ಪತ್ರಿಕೆಗಳಲ್ಲಿನ ತುಣುಕುಗಳನ್ನು ವಿಡಿಯೋ ತೋರಿಸಿದೆ.

ಈ ಸುದ್ದಿ ಓದಿದ್ದೀರಾ? ಉದ್ಯೋಗಕ್ಕಾಗಿ ಭೂಮಿ ಹಗರಣ: ಸಿಬಿಐ ಆರೋಪ ಪಟ್ಟಿಯಲ್ಲಿ ಬಿಹಾರದ ಡಿಸಿಎಂ ತೇಜಸ್ವಿ ಯಾದವ್ ಹೆಸರು

ಭಾರತಕ್ಕೆ ಬೇಕಾಗಿದ್ದ ಕೆನಡಾ ಮೂಲದ ಖಾಲಿಸ್ತಾನ ಟೈಗರ್ ಫೋರ್ಸ್‌ ಮತ್ತು ಸಿಖ್ಸ್‌ ಫಾರ್‌ ಜಸ್ಟೀಸ್‌ ಭಯೋತ್ಪಾದಕ ಸಂಘಟನೆಗಳ ಮುಖ್ಯಸ್ಥನಾಗಿದ್ದ ಉಗ್ರ ನಿಜ್ಜರ್ ನನ್ನುಕಳೆದ ತಿಂಗಳು ಕೆನಡಾದ ಗುರುದ್ವಾರದ ಹೊರಗಡೆ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ಅಮೆರಿಕ ಸ್ಯಾನ್‌ ಫ್ರಾನ್ಸಿಸ್ಕೊದಲ್ಲಿನ ಭಾರತದ ರಾಯಭಾರಿ ಕಚೇರಿಯಲ್ಲಿ ಕಳೆದ ತಿಂಗಳು ಖಲಿಸ್ತಾನಿ ಪ್ರತ್ಯೇಕತಾವಾದಿಗಳು ಕಚೇರಿಯ ಆವರಣದಲ್ಲಿ ಭದ್ರತೆಯನ್ನು ಭೇದಿಸಿ ಖಾಲಿಸ್ತಾನ ಚಿಹ್ನೆಯನ್ನು ಹೊಂದಿದ ಎರಡು ಧ್ವಜಗಳನ್ನು ನಿಲ್ಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿಂಸಾಚಾರ ಪ್ರಕರಣ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಜಾಮೀನು

ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ ಮೇ 9, 2023ರ ಹಿಂಸಾಚಾರ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಅಮೆರಿಕದ ‘ಅಕ್ಕರೆಯ ನ್ಯಾಯಾಧೀಶ’ ಫ್ರಾಂಕ್ ಕ್ಯಾಪ್ರಿಯೊ ನಿಧನ

ರೋಡ್ ಐಲ್ಯಾಂಡ್‌ನ ನಿವೃತ್ತ ಮುನಿಸಿಪಲ್ ನ್ಯಾಯಾಧೀಶರಾಗಿದ್ದ, ಸಾಮಾಜಿಕ ಜಾಲತಾಣಗಳಲ್ಲಿ 'ಅಕ್ಕರೆಯ ನ್ಯಾಯಾಧೀಶ'...

Download Eedina App Android / iOS

X