ಕಲಬುರಗಿ | ಪ್ರಜಾಪ್ರಭುತ್ವಕ್ಕೆ ಭದ್ರ ಬುನಾದಿ ಹಾಕಿದ ಬಸವಣ್ಣ : ಶಾಸಕ ಬಿ.ಆರ್.ಪಾಟೀಲ್

Date:

Advertisements

ಕಲಬುರಗಿ ನಗರದ ಜಗತ್ ವೃತ್ತದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 892ನೇ ಜಯಂತೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ಆಚರಿಸಲಾಯಿತು.

ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರು, ಆಳಂದ ಶಾಸಕ ಬಿ.ಆರ್ ಪಾಟೀಲ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ʼಜಗಜ್ಯೋತಿ ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪದಡಿ ಎಲ್ಲ ಜಾತಿ, ವರ್ಗದ ಜನರನ್ನು ಒಗ್ಗೂಡಿಸಿ ಸಮಾನತೆಯ ಮೂಲಕ ವಿಶ್ವದ ಪ್ರಜಾಪ್ರಭುತ್ವಕ್ಕೆ ಭದ್ರ ಬುನಾದಿ ಹಾಕಿದರುʼ ಎಂದರು.

ʼವಚನಗಳ ಮೂಲಕ ಸಾಮಾಜಿಕ ಪಿಡುಗುಗಳ ಬಗ್ಗೆ ಜನ ಸಾಮಾನ್ಯರಲ್ಲಿ ಅರಿವು ಮೂಡಿಸಿದ ಮಹಾನ್ ದಾರ್ಶನಿಕರು, ಅವರ ತತ್ವ ಸಿದ್ಧಾಂತಗಳನ್ನು 12ನೇ ಶತಮಾನದಲ್ಲಿಯೇ ಅನುಷ್ಠಾನಗೊಳಿಸಿದರೆ ದೇಶದಲ್ಲಿ ಜಾತಿ, ಬೇಧ, ಅಸಮಾನತೆ, ಗಂಡು, ಹೆಣ್ಣು ಎಂಬ ತಾರತಮ್ಯ ಇರುತ್ತಿರಲಿಲ್ಲ. ಸತ್ಯ ಮಾರ್ಗದಲ್ಲಿ ನಡೆದರೆ ಎದುರಾಗುವ ಸಮಸ್ಯೆಗಳನ್ನು ನಿಭಾಯಿಸುವ ಶಕ್ತಿ ಬರುತ್ತದೆ ಎಂಬುದನ್ನು ಬಸವಣ್ಣನವರ ವಚನಗಳ ಮೂಲಕ ಮನದಟ್ಟು ಮಾಡಿಕೊಳ್ಳಬೇಕಾಗಿದೆʼ ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಬೀದರ್‌ | ಜಿಲ್ಲೆಯಾದ್ಯಂತ ಸಂಭ್ರಮದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತ್ಯುತ್ಸವ

ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಶಾಸಕರಾದ ಎಂ.ವೈ.ಪಾಟೀಲ್, ಅಲ್ಲಮಪ್ರಭು ಪಾಟೀಲ್, ವಿಧಾನ ಪರಿಷತ್‌ ಸದಸ್ಯರಾದ ತಿಪ್ಪಣ್ಣ ಕಮಕನೂರು, ಶಶಿಲ್ ನಮೋಶಿ ಸೇರಿದಂತೆ ಅಧಿಕಾರಿಗಳು ಹಾಗೂ ಮುಂತಾದವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

Download Eedina App Android / iOS

X