ಗದಗ | ಸಂವಿಧಾನದ ಆಶಯ ಹಾಗೂ ಬಸವ ತತ್ವ ಒಂದೇ: ಸಚಿವ ಎಚ್.ಕೆ. ಪಾಟೀಲ

Date:

Advertisements

“ಬಸವಣ್ಣನವರ ತತ್ವ ಹಾಗೂ ಭಾರತೀಯ ಸಂವಿಧಾನದ ಆಶಯ ಒಂದೇ. ಇದನ್ನು‌ ನಿವೆಲ್ಲರೂ ನಾವು ಅರಿಯಬೇಕಾಗಿದೆ. ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವೇಶ್ವರರ ತತ್ವ ವಿಚಾರಗಳನ್ನು ಜನ ಸಾಮಾನ್ಯರಿಗೆ ತಲುಪಿಸುವಲ್ಲಿ ರಾಜ್ಯ ಸರ್ಕಾರ ಬದ್ಧವಾಗಿದೆ” ಎಂದು ಪ್ರವಾಸೋದ್ಯಮ ಸಚಿವ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಹೇಳಿದರು.

ಗದಗ ಪಟ್ಟಣದ ಪೂಜ್ಯ ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಶಿವಾನುಭವ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಇಂದು ಆಯೋಜಿಸಲಾದ  ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಬಸವಣ್ಣನವರು ಶೋಷಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಶ್ರೇಣಿಕೃತ ವ್ಯವಸ್ಥೆಯನ್ನೆ ವಿರೋಧಿಸಿದರು. ಅವರ ಆಲೋಚನೆಗಳು ಮತ್ತು ಹೋರಾಟಗಳು ಸಮಾಜ ಸುಧಾರಣೆಗೆ ದಾರಿದೀಪವಾಗಿವೆ” ಎಂದರು.

Advertisements

ಶರಣ ತತ್ತ್ವ ಚಿಂತಕ ಜಿ.ಎಸ್. ಪಾಟೀಲ ಅವರು ವಿಶೇಷ ಉಪನ್ಯಾಸ ನೀಡುತ್ತಾ, “12ನೇ ಶತಮಾನದಲ್ಲಿ ಬಸವಣ್ಣನವರು ಲಿಂಗ, ಆರ್ಥಿಕ, ಧಾರ್ಮಿಕ ಅಸಮಾನತೆಗಳ ವಿರುದ್ಧ ಹೋರಾಡಿದರು. ಅವರ ತತ್ತ್ವಗಳನ್ನು ಸಾಮಾನ್ಯರಿಗೆ ತಲುಪಿಸುವಲ್ಲಿ ನಾವು ಇನ್ನೂ ಹೆಚ್ಚು ಪ್ರಯತ್ನಿಸಬೇಕು” ಎಂದು ಕರೆ ನೀಡಿದರು.

“ಅಲ್ಲಮಪ್ರಭು ದೇವರು ಶರಣ ಪರಂಪರೆಯ ನಾನಾ ವಿಧಗಳನ್ನು ಒಗ್ಗೂಡಿಸಿದ ಮಹಾಪುರುಷರಾಗಿ, 16ನೇ ಶತಮಾನದಲ್ಲಿ ಯಡಿಯೂರಿನ ಶ್ರೀಗಳು ಶರಣ ಚಳವಳಿಗೆ ನಾಂದಿ ಹಾಡುವ‌ ಮೂಲಕ‌ ಮುಂಚೂಣಿಯಲ್ಲಿದ್ದರು” ಎಂದರು.

ಕಾರ್ಯಕ್ರಮದ ಪ್ರಮುಖ ಕ್ಷಣವಾಗಿ “ಬಸವ ಬೇಳಕು” ಎಂಬ ಕವನ ಸಂಕಲನವನ್ನು ಸಚಿವ ಎಚ್.ಕೆ. ಪಾಟೀಲ ಮತ್ತು ಉಪಸ್ಥಿತರಿದ್ದ ಗಣ್ಯರು ಬಿಡುಗಡೆ ಮಾಡಿದರು.

ಈ ಸುದ್ದಿ ಓದಿದ್ದೀರಾ? ರೋಣ | ಉದ್ಘಾಟನೆಯಾದರೂ ಬಾಗಿಲು ತೆರೆಯದ ಇಂದಿರಾ ಕ್ಯಾಂಟೀನ್;‌ ಸ್ಥಳೀಯರ ಆಕ್ರೋಶ

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಜಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ಮಾಜಿ ಸಚಿವ ಎಸ್.ಎಸ್. ಪಾಟೀಲ, ಕೃಷ್ಣಾ ಪರಾಪುರ, ಎಸ್.ಎಸ್. ಪಟ್ಟಣಶೆಟ್ಟರ್, ಬಾಲಚಂದ್ರ ಬರಮಗೌಡ್ರ, ನಾಗೇಶ್ ಸವಡಿ, ಎಸ್.ಎನ್. ಬಳ್ಳಾರಿ, ಜೋಗಣ್ಣವರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಎಸಿ ಗಂಗಪ್ಪ ಎಂ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ ಹಾಗೂ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಪ್ರೊ. ಬಾಹುಬಲಿ ಜೈಜರ ಕಾರ್ಯಕ್ರಮ ನಿರೂಪಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X