ಚಿತ್ರದುರ್ಗ | ಮುರುಘಾ ಮಠದ ಆಡಳಿತಾಧಿಕಾರಿಯಾಗಿ ನ್ಯಾಯಾಧೀಶೆ ಪ್ರೇಮಾವತಿ ಮನಗೂಳಿ ನೇಮಕ

Date:

Advertisements

ಚಿತ್ರದುರ್ಗದ ಮುರುಘಾ ಮಠದ ತಾತ್ಕಾಲಿಕ ಆಡಳಿತಾಧಿಕಾರಿಯಾಗಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶೆ ಪ್ರೇಮಾವತಿ ಮನಗೂಳಿ ಎಂ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು.

ಹೈಕೋರ್ಟ್ ವಿಭಾಗೀಯ ಪೀಠದ ನಿರ್ದೇಶನದ ಮೇರೆಗೆ ಬೆಳಗ್ಗೆ 11.30ಕ್ಕೆ ಮಠಕ್ಕೆ ಭೇಟಿ ನೀಡಿದ ನ್ಯಾಯಾಧೀಶೆ ಪ್ರೇಮಾವತಿಯವರು ಕರ್ತೃ ಗದ್ದುಗೆಗೆ ತೆರಳಿ ದರ್ಶನ ಪಡೆದರು. ಬಳಿಕ ಆಡಳಿತಾಧಿಕಾರಿ ಕಚೇರಿಗೆ ಧಾವಿಸಿದ ಅವರಿಗೆ, ನಿವೃತ್ತ ಐಎಎಸ್ ಅಧಿಕಾರಿ ಪಿ ಎಸ್ ವಸ್ತ್ರದ್ ಅಧಿಕಾರ ಹಸ್ತಾಂತರಿಸಿದರು.

“ಹೈಕೋರ್ಟ್ ನಿರ್ದೇಶನದ ಮೇರೆಗೆ ಮಠದ ತಾತ್ಕಾಲಿಕ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದೇನೆ. ಹೈಕೋರ್ಟ್‌ನ ಮುಂದಿನ ಆದೇಶದವರೆಗೆ ಈ‌ ಹುದ್ದೆಯಲ್ಲಿ ಮುಂದುವರಿಯಲಿದ್ದೇನೆ” ಎಂದು ನ್ಯಾಯಾಧೀಶೆ ಪ್ರೇಮಾವತಿ ಮನಗೂಳಿ ಎಂ ಮಾಹಿತಿ ನೀಡಿದರು.

Advertisements

ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣ ಪೋಕ್ಸೊ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮಠದ ಆಡಳಿತ ನಿರ್ವಹಣೆಯ ಉದ್ದೇಶದಿಂದ ಮಾಜಿ ಐಎಎಸ್‌ ಅಧಿಕಾರಿ ಪಿ ಎಸ್ ವಸ್ತ್ರದ್ ಅವರನ್ನು ಆಡಳಿತಾಧಿಕಾರಿಯಾಗಿ ಸರ್ಕಾರ ನೇಮಕ ಮಾಡಿತ್ತು.‌ ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಮುರುಘಾ ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಆಡಳಿತಾಧಿಕಾರಿ ನೇಮಕವನ್ನು ರದ್ದುಪಡಿಸಿದ ಹೈಕೋರ್ಟ್, ಮಧ್ಯಂತರ ವ್ಯವಸ್ಥೆ ಮಾಡಿಕೊಳ್ಳಲು ಮಠದ ಭಕ್ತರಿಗೆ ಆರು ವಾರಗಳ ಕಾಲಾವಕಾಶ ನೀಡಿತ್ತು. ಈ ನಡುವೆ ಆಡಳಿತಾಧಿಕಾರಿ ನೇಮಕಾತಿ ರದ್ದುಪಡಿಸಿದ ಆದೇಶ ಪ್ರಶ್ನಿಸಿ ಮಾಜಿ ಸಚಿವ ಎಚ್ ಏಕಾಂತಯ್ಯ ಮೇಲ್ಮನವಿ ಸಲ್ಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ರೈತರ ಒಂದೂವರೆ ಕೋಟಿ ಬೇರೆಯವರ ಖಾತೆಗೆ ಜಮಾ; ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

ಮೇಲ್ಮನವಿ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ ಬಿ ವರಾಳೆ ನೇತೃತ್ವದ ವಿಭಾಗೀಯ ಪೀಠ, ಮುರುಘಾ ಮಠದ ತಾತ್ಕಾಲಿಕ ಆಡಳಿತಾಧಿಕಾರಿಯಾಗಿ ಜಿಲ್ಲಾ ಪ್ರಧಾನ ನ್ಯಾಯಾಧೀಶರನ್ನು ನೇಮಕ ಮಾಡಿ ಸೋಮವಾರ ಆದೇಶ ಹೊರಡಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

Download Eedina App Android / iOS

X