ಐಪಿಎಲ್ | ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್‌ಗೆ 12 ಲಕ್ಷ ರೂ. ದಂಡ

Date:

Advertisements

ಚೆನ್ನೈ ಸೂಪರ್ ಕಿಂಗ್ಸ್‌ ಮತ್ತು ಪಂಜಾಬ್‌ ಕಿಂಗ್ಸ್‌ ನಡುವೆ ನಡೆದ ಪಂದ್ಯದಲ್ಲಿ ಪಂಜಾಬ್‌ ತಂಡವು ‘ನಿಧಾನಗತಿಯ ಓವರ್ ರೇಟ್‌’ನಲ್ಲಿ ಬೌಲಿಂಗ್‌ ಮಾಡಿದ ಕಾರಣ ಪಂಜಾಬ್ ತಂಡದ ನಾಯಕ ಶ್ರೇಯಸ್‌ ಅಯ್ಯರ್‌ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

ಬುಧವಾರ ರಾತ್ರಿ ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಸಿಎಸ್‌ಕೆ ಮತ್ತು ಪಿಬಿಕೆಎಸ್‌ ನಡುವೆ 2025ರ ಐಪಿಎಲ್ ಟೂರ್ನಿಯ 49ನೇ ಪಂದ್ಯ ನಡೆದಿದೆ. ಪಂದ್ಯದಲ್ಲಿ ಪಂಜಾಬ್‌ ತಂಡ ಅಭೂತಪೂರ್ವ ಗೆಲುವು ಸಾಧಿಸಿದೆ. ಆದಾಗ್ಯೂ, ತಂಡದ ಬೌಲಿಂಗ್‌ ನಿಧಾನಗತಿಯ ಓವರ್‌ ರೇಟ್‌ ಹೊಂದಿದ್ದ ಕಾರಣಕ್ಕಾಗಿ ಶ್ರೇಯಸ್‌ ಅಯ್ಯರ್‌ಗೆ ದಂಡ ವಿಧಿಸಲಾಗಿದೆ.

ಐಪಿಎಲ್ ನಿಯಮ 2.2 ಅಡಿಯಲ್ಲಿ, ಒಂದು ತಂಡವು ನಿಗದಿತ ಸಮಯದೊಳಗೆ ಬೌಲಿಂಗ್‌ಅನ್ನು ಪೂರ್ಣಗೊಳಿಸಬೇಕು. ಐಪಿಎಲ್‌ನಲ್ಲಿ ಸುಮಾರು 90 ನಿಮಿಷಗಳಲ್ಲಿ 20 ಓವರ್‌ಗಳನ್ನು ಪೂರ್ಣಗೊಳಿಸಬೇಕೆಂದು ನಿಯಮವಿದೆ. ಒಂದು ವೇಳೆ, 90 ನಿಮಿಷಗಳ ಆಸುಪಾಸಿನಲ್ಲಿ ಬೌಲಿಂಗ್‌ ಪೂರ್ಣಗೊಳ್ಳದಿದ್ದರೆ, ಹೆಚ್ಚು ಸಮಯದ ತೆಗೆದುಕೊಂಡರೆ, ಅದನ್ನು ‘ನಿಧಾನಗತಿ ಓವರ್ ದರ’ ಎಂದು ಪರಿಗಣಿಸಲಾಗುತ್ತದೆ. ಬೌಲಿಂಗ್ ಮಾಡಿದ ತಂಡಕ್ಕೆ ದಂಡ ವಿಧಿಸಲಾಗುತ್ತದೆ.

Advertisements

ಹೀಗಾಗಿ, ಚೆನ್ನೈ ವಿರುದ್ಧ ಬೌಲಿಂಗ್ ಮಾಡಲು ಪಂಜಾಬ್‌ ತಂಡ ಹೆಚ್ಚು ಸಮಯ ತೆಗೆದುಕೊಂಡ ಕಾರಣ, ಶ್ರೇಯಸ್ ಅಯ್ಯರ್‌ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

ಈ ವರದಿ ಓದಿದ್ದೀರಾ?: ಕರಾಚಿಯಿಂದ ಜೈಪುರದವರೆಗೆ; ಸಚಿನ್‌ರಿಂದ ವೈಭವ್‌ವರೆಗೆ…

ಚೆನ್ನೈ ವಿರುದ್ದದ ಪಂದ್ಯದಲ್ಲಿ ಪಂಜಾಬ್‌ ತಂಡ ನಿಧಾನಗತಿ ಓವರ್ ದರದಲ್ಲಿ ಬೌಲಿಂಗ್ ಮಾಡಿದರೂ, ಬೌಲರ್‌ಗಳು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಯಜುವೇಂದ್ರ ಚಾಹಲ್ ಹ್ಯಾಟ್ರಿಕ್ ವಿಕೆಟ್ ಪಡೆದು ಛಾಪು ಮೂಡಿಸಿದ್ದಾರೆ.

ಪಂದ್ಯವನ್ನು ಗೆದ್ದು ಪಂಜಾಬ್‌ ತಂಡ ಐಪಿಎಲ್‌ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದರೆ, ಚೆನ್ನೈ ತಂಡ ಟೂರ್ನಿಯ ಕ್ವಾಲಿಫಯರ್‌ ಓಟದಿಂದ ಹೊರಗುಳಿದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X