ರಾಯಚೂರು ತಾಲೂಕಿನ ಅಪ್ಪನದೊಡ್ಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟದಲ್ಲಿ ಹಲ್ಲಿ ಬಿದ್ದು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯ ಶಿಕ್ಷಕ ಕನಕಪ್ಪ ಹಾಗೂ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕಿ ಮಂಗಳಾ ಇವರನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಅಪರ ಆಯುಕ್ತ ಆನಂದಪ್ರಕಾಶ ಮೀನಾ ಆದೇಶಿಸಿದ್ದಾರೆ.
ಜುಲೈ 1 ರಂದು ಶಾಲೆಯಲ್ಲಿ ಸಿದ್ದಪಡಿಸಿ ಉಪ್ಟಿಟ್ಟು ಸೇವಿಸಿ 45 ಮಂದಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರು. ಯಾಪಲದಿನ್ನಿ ಅಸ್ಪತ್ರೆ ಹಾಗೂ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಒದಗಿಸಲಾಗಿತ್ತು.
ಈ ಸುದ್ದಿ ಓದಿದ್ದೀರಾ? ತುಮಕೂರು | 400ಕ್ಕೂ ಹೆಚ್ಚು ಅಡಕೆ ಗಿಡ ಕಡಿದ ದುಷ್ಕರ್ಮಿಗಳು; ಕಣ್ಣೀರಿಟ್ಟ ರೈತ
ಘಟನೆಗೆ ಶಾಲಾ ಮುಖ್ಯ ಶಿಕ್ಷಕ ಕನಕಪ್ಪ ಹಾಗೂ ಅಕ್ಷರ ದಾಸೋಹ ಅಧಿಕಾರಿ ಮಂಗಳಾ ಎಂಬುವವರ ನಿರ್ಲಕ್ಷ್ಯದ ಕುರಿತು ಶಿಕ್ಷಣ ಇಲಾಖೆ ಉಪ ನಿರ್ದೇಶಕರು ನೀಡಿರುವ ವರದಿ ಆಧರಿಸಿ ಇಬ್ಬರನ್ನೂ ಅಮಾನತುಗೊಳಿಸಿ ಆದೇಶಿದ್ದಾರೆ. ಮೇಲಾಧಿಕಾರಿಗಳ ಅನುಮತಿ ಇಲ್ಲದೇ ಕೇಂದ್ರ ಸ್ಥಾನ ತೊರೆಯದಂತೆ ಸೂಚಿಸಲಾಗಿದೆ.