ವಿಜಯಪುರ | ಅನ್ನಭಾಗ್ಯ ಅಕ್ಕಿ ಮಹಾರಾಷ್ಟ್ರಕ್ಕೆ ಕಳ್ಳ ಸಾಗಣೆ; 40 ಸಾವಿರ ಕೆ.ಜಿ ಜಪ್ತಿ

Date:

Advertisements

ಕರ್ನಾಟಕ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ ಪಡಿತರದಾರರಿಗೆ ವಿತರಿಸಬೇಕಿದ್ದ ಅಕ್ಕಿಯನ್ನು ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ ಜಾಲವನ್ನು ಪೊಲೀಸರು ಮತ್ತು ಆಹಾರ ಇಲಾಖೆ ಅಧಿಕಾರಿಗಳು ಭೇದಿಸಿದ್ದಾರೆ. ವಿಜಯಪುರದ ಹೊರವಲಯದಲ್ಲಿರುವ ಎನ್​ಎಚ್ 50ರಲ್ಲಿ ಅಕ್ಕಿ ಕಳ್ಳಸಾಗಣೆ ಮಾಡುತ್ತಿದ್ದವರನ್ನು ಹಿಡಿದು, 40 ಟನ್ (40 ಸಾವಿರ ಕೆ.ಜಿ) ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.

ಬಾಲಗಕೋಟೆ ಜಿಲ್ಲೆಯಿಂದ ಮಹಾರಾಷ್ಟ್ರಕ್ಕೆ ಅನ್ನಭಾಗ್ಯ ಅಕ್ಕಿಯನ್ನು ಕಳ್ಳಸಾಗಣೆ ಮಾಡಲಾಗುತ್ತಿತ್ತು ಎಂದು ಹೇಳಲಾಗಿದೆ. ಖಚಿತ ಮಾಹಿತಿ ಮೇರೆಗೆ ಹೆದ್ದಾರಿಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತಮಿಳುನಾಡು ನೋಂದಾಯಿತ ಲಾರಿಯಲ್ಲಿ ಸಾಗಿಸಲಾಗುತ್ತಿದ್ದ 600ಕ್ಕೂ ಅಧಿಕ ಪ್ಲಾಸ್ಟಿಕ್ ಮೂಟೆ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.

ಆಹಾರ ಮತ್ತು ನಾಗರೀಕ ಇಲಾಖೆಯ ಮ್ಯಾನೇಜರ್ ಅಮರೇಶ ತಾಂಡೂರ ಮತ್ತು ಆಹಾರ ನಿರೀಕ್ಷಕ ವಿಜಯಕುಮಾರ ಗುಮಶೆಟ್ಟಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಲಾರಿಯನ್ನು ನಿಲ್ಲಿಸಿ ಚಾಲಕ ಮತ್ತು ಸಹಾಯಕ ಪರಾರಿಯಾಗಿದ್ದಾರೆ. ಬಾಗಲಕೋಟೆ, ಕೊಪ್ಪಳ, ದಾವಣಗೆರೆ, ಶಿವಮೊಗ್ಗದ ಸಾಗರ ಭಾಗದಲ್ಲಿನ ಹಲವು ಗೋದಾಮುಗಳಿಂದ ಅನ್ನಭಾಗ್ಯ ಅಕ್ಕಿ ಸಂಗ್ರಹಿಸಿ, ಕಳ್ಳಸಾಗಣೆ ಮಾಡಲಾಗುತ್ತಿತ್ತು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

Advertisements

ವಿಜಯಪುರದ ಜಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ 1500 ಹೆಚ್ಚುವರಿ ಬಸ್‌

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಗೌರಿ-ಗಣೇಶ ಹಬ್ಬದ ಪ್ರಯುಕ್ತ ವಿಶೇಷ...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

Download Eedina App Android / iOS

X