ಧರ್ಮಗಳ ನಡುವೆ ದ್ವೇಷದ ಬೆಂಕಿ ಹಚ್ಚಿ, ವೈಫಲ್ಯ ಮುಚ್ಚಿಕೊಳ್ಳುತ್ತಿರುವ ಬಿಜೆಪಿ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

Date:

Advertisements

ನಿರಂತರ ಬೆಲೆ ಏರಿಕೆ ಮೂಲಕ ಬಡವರ, ಮಧ್ಯಮ ವರ್ಗದ ದ್ವೇಷಿ ಆಗಿರುವ ಮೋದಿ ಸರ್ಕಾರ, ಜಾತಿಗಳ ನಡುವೆ-ಧರ್ಮಗಳ ನಡುವೆ ದ್ವೇಷದ ಬೆಂಕಿ ಹಚ್ಚಿ ತನ್ನ ವೈಫಲ್ಯ ಮುಚ್ಚಿಕೊಳ್ಳುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ದೇಶ ವಿರೋಧಿ ವರ್ತನೆ, ಜನ ವಿರೋಧಿ ಆಡಳಿತ ಮತ್ತು ಬೆಲೆ ಏರಿಕೆಯ ಜನದ್ರೋಹವನ್ನು ಖಂಡಿಸಿ ಹುಬ್ಬಳ್ಳಿಯಲ್ಲಿ ನಡೆದ ಜನತಾ ಸಮಾವೇಶದಲ್ಲಿ ಮಾತನಾಡಿದರು.

“ನರೇಂದ್ರ ಮೋದಿ ಪ್ರಧಾನಿ ಆದ ಬಳಿಕ ಅಕ್ಕಿಯಿಂದ ಚಿನ್ನದವರೆಗೂ ಎಲ್ಲದರ ಬೆಲೆ ಆಕಾಶಕ್ಕೆ ಏರಿದೆ. ದೇಶದ, ರಾಜ್ಯದ ಜನರಿಗೆ ಬಿಜೆಪಿ ಪರಿವಾರದ ಈ ಜನದ್ರೋಹ ಅರ್ಥವಾಗಿದೆ. ಇದನ್ನು ಮರೆ ಮಾಚಲು ತಮ್ಮ ಜನದ್ರೋಹವನ್ನು ಮುಚ್ಚಿಕೊಳ್ಳಲು ದೇಶದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಷಡ್ಯಂತ್ರ ನಡೆಸುತ್ತಿದ್ದಾರೆ” ಎಂದರು.

Advertisements

“ಉಪ್ಪು, ಸಕ್ಕರೆ, ಟೀ, ಕಾಫಿ, ಅಕ್ಕಿ, ಬೇಳೆ, ಎಣ್ಣೆ, ಕಾಳು, ಚಿನ್ನ, ಬೆಳ್ಳಿ, ರಸಗೊಬ್ಬರ, ಔಷಧ, ಡೀಸೆಲ್, ಪೆಟ್ರೋಲ್, ಅಡುಗೆ ಅನಿಲ ಸೇರಿ ಎಲ್ಲದರ ಬೆಲೆ ಆಕಾಶಕ್ಕೆ ಏರಿಸಿರುವ ಮೋದಿಯವರೇ ನೀವು ಯಾವುದನ್ನು ತಾನೆ ಬಿಟ್ಟಿದ್ದೀರಿ? ಡಾಲರ್ ಬೆಲೆ 2014 ರಲ್ಲಿ 59 ರೂಪಾಯಿ ಇತ್ತು. ಇವತ್ತು 86 ರೂಪಾಯಿ ಆಗಿದೆ. ಇದಕ್ಕೆ ಯಾರು ಕಾರಣರು ಮೋದಿಯವರೇ ? ಇದೇನಾ ನಿಮ್ಮ ಅಚ್ಛೆ ದಿನ್” ಎಂದು ವ್ಯಂಗ್ಯವಾಡಿದರು.

“50 ಕೆಜಿ ಸಿಮೆಂಟ್ ಬೆಲೆ 2014 ರಲ್ಲಿ 200 ಇದ್ದದ್ದು ಈಗ 450 ರೂ ಆಗಿದೆ. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ 425 ಇದ್ದದ್ದು ಇಂದು 850 ದಾಟಿದೆ. ಶೇ100 ರಷ್ಟು ಬೆಲೆ ಏರಿಕೆ ಮಾಡಿದ್ದೀರಿ. ಜನದ್ರೋಹದ ಪರಮಾವಧಿ ಮುಂದುವರೆಸಿ ಸಿಲಿಂಡರ್ ಸಬ್ಸಿಡಿ ತೆಗೆದು ಹಾಕಿ ಬಡವರ ಮತ್ತು ಮಧ್ಯಮ ವರ್ಗದವರ ವಿರೋಧಿ ಆಗಿರುವ ಮೋದಿಯವರೇ ನಿಮ್ಮ ವಂಚನೆಗೆ ಕೊನೆಯೇ ಇಲ್ಲವೇ” ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ 15 5

“ಪ್ರಲ್ಹಾದ ಜೋಶಿಯವರೇ ನೀವು ಮತ್ತು ಮೋದಿಯವರು ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಲೇ ಇದ್ದೀರಿ. ಆದರೆ, ನಿಮ್ಮ ಚಾಳಿಯನ್ನು ನಮ್ಮ ಮೇಲೆ ಹೊರಿಸಲು ಯತ್ನಿಸುತ್ತಿದ್ದೀರಿ.‌ ನಿಮಗೆ ನಾಚಿಕೆ ಆಗುವುದಿಲ್ಲವೇ? ರಾಜ್ಯ ಸರ್ಕಾರ ಹಾಲಿನ ದರ 4 ರೂ. ಹೆಚ್ಚಿಸಿ ಇಷ್ಟೂ ಹಣವನ್ನೂ ರೈತರಿಗೆ ವರ್ಗಾಯಿಸಿದ್ದೀವಿ. ಇದರಲ್ಲಿ ಹತ್ತು ಪೈಸೆ ಕೂಡ ಸರ್ಕಾರಕ್ಕೆ ಬರುವುದಿಲ್ಲ. ಆದರೆ, ನೀವು ಹೆಚ್ಚಿಸಿದ ಬೆಲೆ ಏರಿಕೆ ಯಾವ ಭಾರತೀಯರಿಗೆ ಸಿಗುತ್ತಿದೆ ಹೇಳಿ” ಎಂದರು.

“ಸಂವಿಧಾನ ಜಾರಿಯಾಗಿ 75 ವರ್ಷ ಕಳೆದರೂ ಅಸಮಾನತೆ, ತಾರತಮ್ಯ ಹೋಗಿಲ್ಲ. ಆದ್ದರಿಂದ ನಾವು ನಮ್ಮ ಪ್ರಣಾಳಿಕೆಯಲ್ಲಿ ಆರ್ಥಿಕ, ಸಾಮಾಜಿಕ, ಜಾತಿ ಗಣತೆ ಬಗ್ಗೆ ಭರವಸೆ ಕೊಟ್ಟಿದ್ದೆವು. ನಾವು ಮಾಡಿದ ಘೋಷಣೆಯಂತೆ ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆಯವರು ಮತ್ತು ರಾಹುಲ್ ಗಾಂಧಿಯವರು ಪಾರ್ಲಿಮೆಂಟಿನಲ್ಲಿ ನಿರಂತರ ಧ್ವನಿ ಎತ್ತಿ ಹೋರಾಟ ನಡೆಸಿದ್ದರು. ಇದರ ಪರಿಣಾಮ ಈಗ ಕೇಂದ್ರ ಸರ್ಕಾರ ನಮ್ಮ ಹೋರಾಟಕ್ಕೆ ಮಣಿದಿದೆ. ಇದು ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆಯವರ ಸೈದ್ಧಾಂತಿಕ ಬದ್ಧತೆಗೆ ಸಿಕ್ಕ ಗೆಲುವು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X