ಮೈಸೂರು | ಹಳ್ಳಿಗಳಲ್ಲಿ ಮಕ್ಕಳಿಗೆ ಸುರಕ್ಷಿತ ವಾತಾವರಣ ಸೃಷ್ಟಿಸಲು ನಿರ್ಧಾರ: ನಾಗಣ್ಣಗೌಡ

Date:

Advertisements
  • ಮೈಸೂರು ನಗರದ ವೀಕ್ಷಣಾಲಯಕ್ಕೆ ಭೇಟಿ ನೀಡಿದ ನಾಗಣ್ಣ ಗೌಡ
  • ಮೈಸೂರು ಜಿಲ್ಲೆಯ ಸಾತಗಳ್ಳಿ ಪ್ರದೇಶದಲ್ಲಿ ಮಕ್ಕಳ ಆರೈಕೆ ಕೇಂದ್ರದಲ್ಲಿರುವ ಮಕ್ಕಳಿಗಾಗಿ ಹೊಸ ವೀಕ್ಷಣಾಲಯ ಆಯೋಜನೆ

ಮಕ್ಕಳಿಗೆ ಸುರಕ್ಷತೆ ವಾತಾವರಣ ಸೃಷ್ಟಿಸಲು ಸಾಮಾಜಿಕ ಕಾರ್ಯಕರ್ತರು, ಎನ್‌ಜಿಒಗಳ ಪ್ರತಿನಿಧಿಗಳು, ಸ್ಥಳೀಯರನ್ನು ಒಳಗೊಂಡ ಗ್ರಾಮ ಮಟ್ಟದ ಸಮಿತಿಗಳನ್ನು ರಚಿಸಲಾಗುವುದು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ನಾಗಣ್ಣಗೌಡ ತಿಳಿಸಿದರು.

ಮೈಸೂರು ನಗರದ ವೀಕ್ಷಣಾಲಯಕ್ಕೆ ಭೇಟಿ ನೀಡಿ ಎನ್‌ಸಿಪಿಸಿಆರ್ ಸದಸ್ಯ ಆರ್.ಜಿ ಆನಂದ್ ಅವರೊಂದಿಗೆ ಚರ್ಚಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. “ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ಸುರಕ್ಷತೆಯ ಬಗ್ಗೆ ತಳಮಟ್ಟದಿಂದ ಜಾಗೃತಿ ಮೂಡಿಸುವುದು ಸಮಿತಿಯ ಉದ್ದೇಶವಾಗಿದೆ” ಎಂದು ಹೇಳಿದರು.

“ಬಾಲ್ಯ ವಿವಾಹ ತಡೆ, ಶಿಕ್ಷಣ ಹಕ್ಕು (ಆರ್‌ಟಿಇ) ಅನುಷ್ಠಾನ ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ ಸಂಬಂಧಿತ ಪ್ರಕರಣಗಳ ಮೇಲ್ವಿಚಾರಣೆಗೆ ವಿಶೇಷ ಗಮನ ನೀಡಲಾಗುವುದು. ನಗರದ ಸಾತಗಳ್ಳಿ ಪ್ರದೇಶದಲ್ಲಿ ಮಕ್ಕಳ ಆರೈಕೆ ಕೇಂದ್ರದಲ್ಲಿರುವ ಮಕ್ಕಳಿಗಾಗಿ ಹೊಸ ವೀಕ್ಷಣಾಲಯ ನಿರ್ಮಿಸಲು ಯೋಜಿಸಲಾಗಿದೆ. ಈ ಆಲಯ ಎಲ್ಲ ಆಧುನಿಕ ಸೌಲಭ್ಯಗಳನ್ನು ಒಳಗೊಂಡಿರುತ್ತದೆ” ಎಂದರು.

Advertisements

“ಎಲ್ಲ ಮಕ್ಕಳ ಆರೈಕೆ ಕೇಂದ್ರಗಳಲ್ಲಿ ದೈನಂದಿನ ಚಟುವಟಿಕೆಗಳನ್ನು ಅನುಸರಿಸಲು ಮಾನಿಟರಿಂಗ್ ಅಪ್ಲಿಕೇಶನ್ ಫಾರ್ ಸೀಮ್‌ಲೆಸ್‌ ಇನ್ಸ್‌ಪೆಕ್ಷನ್ಸ್ (ಎಂಎಎಸ್ಐ) ಆಯೋಗಕ್ಕೆ ಸಹಾಯ ಮಾಡುತ್ತಿದೆ. ಈಗ, ಐದು ರಾಜ್ಯಗಳಲ್ಲಿನ ವೀಕ್ಷಣಾಲಯಗಳ ಬಗ್ಗೆ ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ, ನಾವು ಕ್ಷೇತ್ರ ಪರಿಶೀಲನಾ ಅಭಿಯಾನ ಪ್ರಾರಂಭಿಸಿದ್ದೇವೆ. ಈ ಅಭಿಯಾನವು ಮೈಸೂರಿನಿಂದ ಪ್ರಾರಂಭವಾಗಿದೆ” ಎಂದು ಆರ್‌.ಜಿ ಆನಂದ್ ಹೇಳಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಎಐಡಿಎಸ್ಓ ರಾಜ್ಯಮಟ್ಟದ ಅಧ್ಯಯನ ಶಿಬಿರ

“ಮಕ್ಕಳಪರ ನೀತಿಗಳನ್ನು ಜಾರಿಗೆ ತರುವಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಮೈಸೂರಿನ ಮಕ್ಕಳಿಗೆ ಸಂಬಂಧಿಸಿದ ಎಲ್ಲ ವಿಷಯಗಳನ್ನು ಆಯೋಗವು ಜಿಲ್ಲಾಡಳಿತದೊಂದಿಗೆ ಪರಿಶೀಲಿಸುತ್ತದೆ” ಎಂದು ಆನಂದ್ ಹೇಳಿದರು.

“ಉತ್ತಮ ಫಲಿತಾಂಶ ಪಡೆಯಲು ವೀಕ್ಷಣಾ ಗೃಹಗಳಲ್ಲಿ ಮಕ್ಕಳಿಗೆ ಕಲಿಸಲು ಶಿಕ್ಷಕರನ್ನು ನೇಮಿಸಲಾಗುವುದು” ಎಂದು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ತಿಳಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X