ಗದಗ | ಹಳ್ಳಿಗಳಿಗೆ ಬಸ್ ಸಂಪರ್ಕ ಮತ್ತು ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್ ನಿರ್ಮಾಣಕ್ಕೆ ಎಸ್‌ಎಫ್‌ಐ ಆಗ್ರಹ

Date:

Advertisements

ಗಜೇಂದ್ರಗಡ ತಾಲೂಕಿನ ಎಲ್ಲ ಹಳ್ಳಿಗಳಿಗೆ ಬಸ್ ಸಂಪರ್ಕ ಒದಗಿಸಬೇಕು. ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್ ನಿರ್ಮಾಣ ಮಾಡಬೇಕು ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಎಸ್‌ಎಫ್‌ಐ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ನಗರದ ಕೆ.ಕೆ ಸರ್ಕಲ್‌ನಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಎಸ್‌ಎಫ್‌ಐ ಪದಾಧಿಕಾರಿ ಗಣೇಶ ರಾಠೋಡ್, “ಗಜೇಂದ್ರಗಡ ನಗರವು ಶಿಕ್ಷಣ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಬೆಳೆಯುತ್ತಿರುವ ನಗರವಾಗಿದೆ. ತಾಲೂಕಿನ ಸುತ್ತಮುತ್ತಲಿನ ಗ್ರಾಮಗಳಿಂದ ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ನಗರಕ್ಕೆ ಬರುತ್ತಿದ್ದಾರೆ. ಅವರಿಗಾಗಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಪ್ರಾರಂಭಿಸಬೇಕು. ಗ್ರಾಮೀಣ ಪ್ರದೇಶಗಳಿಂದ ಶಿಕ್ಷಣಕ್ಕಾಗಿ ನಗರಕ್ಕೆ ಬರುವ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು. ಗಜೇಂದ್ರಗಡದಲ್ಲಿ ಸ್ನಾತಕೋತ್ತರ ಪದವಿ ಕೇಂದ್ರ ಪ್ರಾರಂಭಿಸಬೇಕು. ಗಜೇಂದ್ರಗಡ ತಾಲೂಕು ಘೋಷಣೆ ಆಗಿ 4-5 ವರ್ಷಗಳಾದರು ಇನ್ನೂ ಹಲವು ತಾಲೂಕು ಮಟ್ಟದ ಕಚೇರಿಗಳು ಆರಂಭವಾಗಿಲ್ಲ. ಕೂಡಲೇ ಆರಂಭಿಸಬೇಕು” ಎಂದು ಒತ್ತಾಯಿಸಿದರು.

“ರಾಜ್ಯದಲ್ಲಿ ಶೈಕ್ಷಣಿಕ ವರ್ಷ ಪ್ರಾರಂಭಗೊಂಡಿದ್ದು ಶಾಲಾ ಕಾಲೇಜಿನಲ್ಲಿ ಶೈಕ್ಷಣಿಕ ವಾತಾವರಣ ಇಲ್ಲದೆ ನರಳುತ್ತಿವೆ.
ನೂತನವಾಗಿ ಆಯ್ಕೆಗೊಂಡು ರಚನೆಗೊಂಡಿರುವ ರಾಜ್ಯದ ಸಿದ್ದಾರಾಮಯ್ಯ ನೇತೃತ್ವದ ಕಾಂಗ್ರೇಸ್ ಸರ್ಕಾರವು ರಾಜ್ಯದ ಶಾಲಾ ಕಾಲೇಜುಗಳಲ್ಲಿ ಶೈಕ್ಷಣಿಕ ವಾತಾವರಣ ನಿರ್ಮಾಣ ಮಾಡಲು ಮುಂದಾಗಬೇಕು. ಶೈಕ್ಷಣಿಕ ವಲಯದಲ್ಲಿ ಕೊರತೆ ಇರುವ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಮುಂದಾಗಬೇಕು” ಎಂದು ಆಗ್ರಹಿಸಿದರು.

Advertisements

“ರಾಷ್ಟ್ರೀಯ ಶಿಕ್ಷಣ ನೀತಿ-2020ನ್ನು ತಕ್ಷಣ ವಾಪಾಸ್ಸು ಪಡೆಯಬೇಕು. ಪಠ್ಯ ಪುಸ್ತಕ ಪರಿಷ್ಕರಣೆ ಹೆಸರಲ್ಲಿ ವಿದ್ಯಾರ್ಥಿಗಳ ಮಧ್ಯ ಕೋಮು ವಿಷ ಬೀಜ ಬಿತ್ತಲು ಹೊರಟಿದ್ದ ಬಿಜೆಪಿ ನೀತಿಯನ್ನು ಕೈ ಬಿಟ್ಟು, ತಕ್ಷಣ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಲು ಮುಂದಾಗಬೇಕು. ಶಾಂತಿಯ ನೆಲವಾದ ಕರ್ನಾಟಕದಲ್ಲಿ ಶೈಕ್ಷಣಿಕ ವಲಯವನ್ನು ಸೌಹಾರ್ದ, ಸೋದರತ್ವದ ನೆಲೆಯಾಗಿ ಉಳಿಸಿಕೊಳ್ಳಬೇಕಿದೆ. ಇದಕ್ಕೆ ಪೂರಕವಾಗಿ ಪಠ್ಯ ಪುಸ್ತಕ ಪರಿಷ್ಕರಣೆಗೆ ಸರ್ಕಾರ ಮುಂದಾಗಲಿ” ಎಂದು ಸರ್ಕಾರವನ್ನು ಒತ್ತಾಯಿಸಿದರು.

ಪ್ರತಿಭಟನಾಕಾರರ ಬೇಡಿಕೆಗಳು

  • ರಾಷ್ಟ್ರೀಯ ಶಿಕ್ಷಣ ನೀತಿ (ಎನ್ ಇ ಪಿ) 2020ಯನ್ನು ತಕ್ಷಣ ರದ್ದುಪಡಿಸಬೇಕು.
  • ಶೈಕ್ಷಣಿಕ ವಾತಾವರಣದಲ್ಲಿ ಕೋಮು ವಿಷ ಬಿತ್ತುವ ಪಠ್ಯವನ್ನು ಕೈ ಬಿಟ್ಟು, ತಕ್ಷಣ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಬೇಕು.
  • ಡೇರಾ ಕಮಿಟಿ ರಚಿಸಿ ಸಭೆ ಕರೆದು ಡೋಣೆಷನ್ ಹಾವಳಿ ತಡೆಗಟ್ಟಿ.
  • ವಿದ್ಯಾರ್ಥಿಗಳಿಗೆ ನೀಡಬೇಕಾದ ಪಠ್ಯ ಪುಸ್ತಕ, ಒಳ್ಳೆಯ ಸಮವಸ್ತ್ರ, ಶೂ, ಸ್ಕಾಲರ್ಶಿಪ್, ಸೈಕಲ್, ಬಸ್ ಪಾಸ್, ಇನ್ನೂ ಸರಿಯಾಗಿ ನೀಡಿಲ್ಲ ಅವುಗಳನ್ನು ನೀಡಬೇಕು ಮತ್ತು ಶಾಲಾ ಕಾಲೇಜುಗಳಲ್ಲಿ ಶೈಕ್ಷಣಿಕ ವಾತಾವರಣವನ್ನು ನಿರ್ಮಾಣ ಮಾಡಬೇಕು.
  • ಹಾಸ್ಟೆಲ್ ಗಳ ಅರ್ಜಿ ಕರೆಯಬೇಕು ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೂ ಹಾಸ್ಟೆಲ್ ನೀಡಬೇಕು. ಹಾಸ್ಟೆಲ್ ಇಲ್ಲದ ಕಡೆ ಹೊಸ ಹಾಸ್ಟೆಲ್ ಪ್ರಾರಂಭಿಸಬೇಕು.
  • ಖಾಲಿ ಇರುವ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿಗಳನ್ನು ಭರ್ತಿ ಮಾಡಿಕೊಳ್ಳಬೇಕು.
  • ಶಾಲಾ-ಕಾಲೇಜುಗಳಲ್ಲಿ ಸಮರ್ಪಕ ಕಟ್ಟಡ, ಶೌಚಾಲಯ, ಕುಡಿಯುವ ನೀರಿನ ಸೌಲಭ್ಯ ಒದಗಿಸಬೇಕು.
  • ಗ್ರಂಥಾಲಯದಲ್ಲಿ ಸರಿಯಾದಂತಹ ಪುಸ್ತಕಗಳು ಇಲ್ಲಾ ಹಾಗಾಗಿ ಹೆಚ್ಚಿನ ಪುಸ್ತಕಗಳನ್ನು ಒದಗಿಸಬೇಕು. ಗ್ರಂಥಾಲಯಕ್ಕೆ ಒಬ್ಬರನ್ನು ಖಾಯಂ ಗ್ರಂಥಪಾಲಕರನ್ನು ನೇಮಿಸಬೇಕು.
  • ಪ್ರಯೋಗಾಲಯಗಳಿಗೆ ಬೇಕಾಗುವಂತಹ ಮೂಲ ಸೌಕರ್ಯಗಳನ್ನು ಒದಗಿಸಬೇಕು. ಅಲ್ಲಿ ಸಿಬ್ಬಂದಿಗಳನ್ನು ನೇಮಿಸಬೇಕು.
  • ವೃತ್ತಿಪರ ಕೊರ್ಸಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ತಾಲೂಕಿಗೊಂದಂದು ಸರ್ಕಾರಿ ವೃತ್ತಿಪರ ಕೋರ್ಸುಗಳ ಕಾಲೇಜುಗಳನ್ನು ಸ್ಥಾಪಿಸಬೇಕು.
  • ಗ್ರಾಮೀಣ ಪ್ರದೇಶಗಳಿಂದ ಶಿಕ್ಷಣಕ್ಕಾಗಿ ನಗರಕ್ಕೆ ಬರುವ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು.
  • ಗಜೇಂದ್ರಗಡದಲ್ಲಿ ಸ್ನಾತಕೋತ್ತರ ಪದವಿ ಕೇಂದ್ರ ಪ್ರಾರಂಭಿಸಬೇಕು.

ಪ್ರತಿಭಟನೆ ಸ್ಥಳಕ್ಕೆ ಶಿರಸ್ತೇದಾರ ಪಿ.ಬಿ ಶಿಂಗ್ರಿ ಭೇಟಿ ನೀಡಿ, ಹಕ್ಕೊತ್ತಾಯ ಸ್ವೀಕರಿಸಿದರು. ಪ್ರತಿಭಟನೆಯಲ್ಲಿ ಎಸ್‌ಎಫ್‌ಐ ಮುಖಂಡ ಆನಂದ ಎಮ್, ಯೋಗೇಶ್ ಚಿಟಗಿ, ಆಂದಪ್ಪ ಹೋರಪೇಟೆ, ರೇಷ್ಮಾ ರಾಠೋಡ, ವಸಂತ ಉಪ್ಪಾರ, ಮಹಾಂತೇಶ ಪೂಜಾರಿ,ಬಸಮ್ಮ ತಳವಾರ, ರವಿ ಕೋಟಗಿ, ಸಾವಿತ್ರಿ ರಾಠೋಡ, ಅಂಬಿಕಾ ಚಿಟಗಿ, ಸಹನಾ ರಾಮಜಿ, ಮತ್ತು ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X