ಪೂಜೆ ವೇಳೆ ಬೆಂಕಿ ಹೊತ್ತಿಕೊಂಡು ಕಾಂಗ್ರೆಸ್‌ ನಾಯಕಿ, ಮಾಜಿ ಕೇಂದ್ರ ಸಚಿವೆ ಗಿರಿಜಾ ವ್ಯಾಸ್‌ ನಿಧನ

Date:

Advertisements

ಪೂಜೆ ಮಾಡುತ್ತಿದ್ದ ವೇಳೆ ಬಟ್ಟೆಗೆ ಬೆಂಕಿ ಹೊತ್ತಿಕೊಂಡು ಗಂಭೀರ ಸುಟ್ಟು ಗಾಯಗಳಾಗಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಕೇಂದ್ರ ಸಚಿವೆ ಗಿರಿಜಾ ವ್ಯಾಸ್‌, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ರಾಜಸ್ಥಾನದ ಉದಯಪಯದಲ್ಲಿ ಗಿರಿಜಾ ವ್ಯಾಸ್ ಅವರ ನಿವಾಸದಲ್ಲಿ ಮಾರ್ಚ್ 31ರಂದು ಘಟನೆ ನಡೆದಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಿ, ಕಳೆದ ಒಂದು ತಿಂಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೂ, ಚಿಕಿತ್ಸೆ ಫಲಿಸದೆ ಮೇ 1ರ ತಡರಾತ್ರಿ ಅವರು ಮೃತಪಟ್ಟಿದ್ದಾರೆ.

ಕಾಂಗ್ರೆಸ್‌ ನಾಯಕಿ ಗಿರಿಜಾ ಅವರು ಮಾರ್ಚ್‌ 31ರಂದು ತಮ್ಮ ನಿವಾಸದಲ್ಲಿ ಪೂಜಾ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ದೇವರಿಗೆ ಪೂಜೆ ಸಲ್ಲಿಸುತ್ತಿದ್ದ ವೇಳೆ, ನೆಲದ ಮೇಲೆ ಇರಿಸಲಾಗಿದ್ದ ದೀಪದಿಂದ ಬೆಂಕಿ ಗಿರಿಜಾ ಅವರ ದುಪ್ಪಟ್ಟಾಗೆ ತಗುಲಿತ್ತು. ಕ್ಷಣಾರ್ಧದಲ್ಲಿ ಇಡೀ ಬಟ್ಟೆಗೆ ಬೆಂಕಿ ಆವರಿಸಿಕೊಂಡು, ಗಿರಿಜಾ ಅವರಿಗೆ ಗಂಭೀರ ಸುಟ್ಟು ಗಾಯಗಳಾಗಿದ್ದವು. ಒಂದು ತಿಂಗಳು ಸುಟ್ಟ ಗಾಯಗಳಿಂದ ನೋವನನುಭವಿಸಿದ ಗಿರಿಜಾ ಅವರು ಕೊನೆಯುಸಿರೆಳೆದಿದ್ದಾರೆ.

Advertisements

ಗಿರಿಜಾ ವ್ಯಾಸ್‌ ಅವರು ರಾಜಸ್ಥಾನ ರಾಜಕಾರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ರಾಜಸ್ಥಾನ ರಾಜ್ಯ ಸರ್ಕಾರದಲ್ಲಿ ಮತ್ತು ಕೇಂದ್ರ ಸರ್ಕಾರದಲ್ಲಿ ಸಚಿವೆಯಾಗಿ ಕಾರ್ಯನಿರ್ವಹಿಸಿದ್ದರು. 1991ರಲ್ಲಿ ಪ್ರಧಾನಿ ನರಸಿಂಹ ರಾವ್ ನೇತೃತ್ವದ ಸರ್ಕಾರದಲ್ಲಿ ಅವರು ಕೇಂದ್ರ ಸಚಿವೆಯಾಗಿದ್ದರು. ರಾಜಸ್ಥಾನ ಕಾಂಗ್ರೆಸ್‌ನ ಅಧ್ಯಕ್ಷೆಯಾಗಿಯೂ ಪಕ್ಷವನ್ನು ಮುನ್ನಡೆಸಿದ್ದರು. ಅಲ್ಲದೆ, ರಾಷ್ಟ್ರೀಯ ಮಹಿಳಾ ಆಯೋಗದ (NCW) ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಈ ವರದಿ ಓದಿದ್ಧೀರಾ?: ಜಾತಿ ಗಣತಿ ವರದಿ ವಿರೋಧಿಸುತ್ತಿರುವ ಶಾಮನೂರು ಹುನ್ನಾರವೇನು? ಕಾಂಗ್ರೆಸ್‌ನಲ್ಲಿ ಕ್ರಮ ಯಾಕಿಲ್ಲ?

ಅವರ ಸಾವಿಗೆ ಕಾಂಗ್ರೆಸ್‌ ನಾಯಕರು ಸಂತಾಪ ಸೂಚಿಸಿದ್ದಾರೆ. ರಾಜಸ್ಥಾನ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ ಅವರು, ”ಮಾಜಿ ಕೇಂದ್ರ ಸಚಿವೆ, ಕಾಂಗ್ರೆಸ್ ನಾಯಕಿ ಡಾ. ಗಿರಿಜಾ ವ್ಯಾಸ್ ಅವರ ನಿಧನವು ತುಂಬಲಾರದ ನಷ್ಟ ಉಂಟುಮಾಡಿದೆ. ಗಿರಿಜಾ ವ್ಯಾಸ್ ಅವರು ಶಿಕ್ಷಣ, ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರಕ್ಕೆ ಬೃಹತ್ ಕೊಡುಗೆ ನೀಡಿದ್ದಾರೆ. ಅವರ ಅಕಾಲಿಕ ನಿಧನ ನಮಗೆಲ್ಲರಿಗೂ ದೊಡ್ಡ ಆಘಾತವಾಗಿದೆ. ಅವರ ಆತ್ಮಕ್ಕೆ ದೇವರ ಪಾದದಲ್ಲಿ ಸ್ಥಾನ ದೊರೆಯಲಿ” ಎಂದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

Download Eedina App Android / iOS

X