ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದು ಬೆಳಿಗ್ಗೆಯಿಂದ ಸುರಿಯುತ್ತಿರುವ ಭಾರೀ ಮಳೆಗೆ ಮನೆ ಮೇಲೆ ಮರ ಉರುಳಿ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಓರ್ವ ಗಾಯಗೊಂಡಿರುವ ಘಟನೆ ದ್ವಾರಕಾದ ನಜಾಫ್‌ಗಢ ಪ್ರದೇಶದಲ್ಲಿ ನಡೆದಿದೆ.
ಬೆಳಗಿನ ಜಾವದಿಂದ ಭಾರೀ ಮಳೆ ಸುರಿಯುತ್ತಿದ್ದು, ಗಂಟೆಗೆ 80 ಕಿ.ಮೀ ವೇಗದಲ್ಲಿ ಗಾಳಿ ಬೀಸಿದ್ದು, ಪರಿಣಾಮ ಈ ಅವಘಡ ಸಂಭವಿಸಿದೆ. ಮರ ಉರುಳಿ ಬಿದ್ದ ಪರಿಣಾಮ ಮನೆ ಕುಸಿದಿದ್ದು, ಓರ್ವ ಮಹಿಳೆ ಹಾಗೂ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ.
ಮೃತ ಮಹಿಳೆಯನ್ನು ಜ್ಯೋತಿ (26) ಎಂದು ಗುರುತಿಸಲಾಗಿದ್ದು, ಆಕೆಯ ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ದ್ವಾರಕಾ, ಗುರುಗ್ರಾಮ್ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಹಲವು ಮರಗಳು ನೆಲಕ್ಕುರುಳಿವೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕರ್ನಾಟಕಕ್ಕೂ ಕಾಲಿಟ್ಟ ಮಾಬ್ ಲಿಂಚಿಂಗ್; ಇಲ್ಲಿ ಸರ್ಕಾರ ಜೀವಂತವಿದೆಯೇ?
ದೆಹಲಿಯ ಪ್ರಮುಖ ರಸ್ತೆಗಳಲ್ಲಿ ಅಗಾಧ ಪ್ರಮಾಣದ ನೀರು ನಿಂತಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಸದ್ಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದು, ಗಾಳಿಯ ತೀವ್ರತೆಯಿಂದಾಗಿ 100ಕ್ಕೂ ಅಧಿಕ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ.
40ಕ್ಕೂ ಹೆಚ್ಚು ವಿಮಾನಗಳು ಮಾರ್ಗ ಬದಲಿಸಿವೆ ಈ ಕುರಿತು ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಏರ್ ಇಂಡಿಯಾ ವಿಮಾನ ವಿಳಂಬ, ಮಾರ್ಗ ಬದಲಾವಣೆ ಬಗ್ಗೆ ಮಾಹಿತಿ ಹಂಚಿಕೊಂಡಿವೆ. ಮರಗಳು ಬಿದ್ದ ಪರಿಣಾಮ 20ಕ್ಕೂ ಹೆಚ್ಚು ರೈಲುಗಳ ಸಂಚಾರದಲ್ಲಿ ವಿಳಂಬವಾಗಿದೆ.
#WATCH | Delhi-NCR witnesses traffic congestion as several trees were uprooted, and vehicles broke down amid heavy waterlogging, due to a rainstorm earlier today.
— ANI (@ANI) May 2, 2025
Visuals from Gurugram. pic.twitter.com/ABy5a2MZrM