ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದ ವೇಳೆ ತೀವ್ರ ಗಾಯಗೊಂಡು ರಸ್ತೆ ಮಧ್ಯೆ ನರಳಾಡುತ್ತಿದ್ದ ಬೈಕ್ ಸವಾರನನ್ನು ಸಂಸದ ಜಗದೀಶ್ ಶೆಟ್ಟರ್ ಅವರು ತಮ್ಮ ಎಸ್ಕಾರ್ಟ್ ವಾಹನ ಮೂಲಕ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ ಆನಿಗೋಳ, ನಯಾನಗರ ಗ್ರಾಮಗಳ ನಡುವೆ ದ್ವಿಚಕ್ರ ವಾಹನ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ನಡು ರಸ್ತೆಯಲ್ಲಿ ಗಾಯಗೊಂಡು ತೀವ್ರ ರಕ್ತಸ್ರಾವದಿಂದ ನರಳಾಡುತ್ತಿದ್ದ ಬಸವರಾಜ ರಾಗಿ (48) ಹಾಗೂ ಶಾಂತ ವೀರಗೌಡ ಪಾಟೀಲ ಅವರನ್ನು ಸಂಸದ ಜಗದೀಶ್ ಶೆಟ್ಟರ್ ತಮ್ಮದೆ ವಾಹನದಲ್ಲಿ ಬೈಲಹೊಂಗಲ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ಸಾಗಿಸಿದ್ದಾರೆ. ಇದೇ ಮಾರ್ಗದಲ್ಲಿ ಬಿಜೆಪಿ ಕಾರ್ಯಕರ್ತರ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.
ಇದನ್ನೂ ಓದಿ: ಬೆಳಗಾವಿ | ಎಂಬಿಎ ಪದವೀಧರೆಯ ಆತ್ಮಹತ್ಯೆ: ಲವ್ ಬ್ರೇಕಪ್ ಶಂಕೆ