ಭಾರತದ ಬಹುತೇಕ ಕಡೆ ಮೇ ತಿಂಗಳಿನಲ್ಲಿ ಸಾಮಾನ್ಯಕ್ಕಿಂತ ಅಧಿಕ ತಾಪಮಾನ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಬುಧವಾರ ತಿಳಿಸಿದೆ.
‘ಉತ್ತರ ಕರ್ನಾಟಕ, ಗುಜರಾತ್, ಒಡಿಶಾ, ಛತ್ತೀಸಗಢ, ಮಹಾರಾಷ್ಟ್ರ ಹಾಗೂ ತೆಲಂಗಾಣದ ಹಲವು ಪ್ರದೇಶಗಳಲ್ಲಿ ಬಿಸಿಗಾಳಿಯ ದಿನಗಳು ಸಾಮಾನ್ಯಕ್ಕಿಂತ ಹೆಚ್ಚಿರಲಿದೆʼ ಎಂದು ಭಾರತೀಯ ಹವಾಮಾನ ಇಲಾಖೆ ಮಹಾನಿರ್ದೇಶಕ ಮೃತ್ಯಂಜಯ ಮಹಾಪಾತ್ರ ತಿಳಿಸಿದ್ದಾರೆ.
ಈ ನಡುವೆ ಬೆಳಗಿನ ಜಾವದಿಂದ ದೆಹಲಿಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಗಂಟೆಗೆ 80 ಕಿ.ಮೀ ವೇಗದಲ್ಲಿ ಗಾಳಿ ಬೀಸಿದ ಪರಿಣಾಮ ಈ ಮರ ಉರುಳಿ ಬಿದ್ದು, ಮನೆ ಕುಸಿದಿದು, ಓರ್ವ ಮಹಿಳೆ ಹಾಗೂ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ.
ದೆಹಲಿಯ ಪ್ರಮುಖ ರಸ್ತೆಗಳಲ್ಲಿ ಅಗಾಧ ಪ್ರಮಾಣದ ನೀರು ಸಂಗ್ರಹವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಸದ್ಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದು ಗಾಳಿಯ ತೀವ್ರತೆಯಿಂದಾಗಿ 100ಕ್ಕೂ ಅಧಿಕ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ.
ಈ ಸುದ್ದಿ ಓದಿದ್ದೀರಾ? ಕರ್ನಾಟಕ ಸೇರಿ 11 ರಾಜ್ಯಗಳ ಗ್ರಾಮೀಣ ಬ್ಯಾಂಕ್‌ಗಳ ವಿಲೀನ
40ಕ್ಕೂ ಹೆಚ್ಚು ವಿಮಾನಗಳು ಮಾರ್ಗ ಬದಲಿಸಿವೆ ಈ ಕುರಿತು ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಏರ್ ಇಂಡಿಯಾ ವಿಮಾನ ವಿಳಂಬ, ಮಾರ್ಗ ಬದಲಾವಣೆ ಬಗ್ಗೆ ಮಾಹಿತಿ ಹಂಚಿಕೊಂಡಿವೆ. ಮರಗಳು ಬಿದ್ದ ಪರಿಣಾಮ 20ಕ್ಕೂ ಹೆಚ್ಚು ರೈಲುಗಳು ಕೂಡ ತಡವಾಗಿವೆ.