2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ಜಿಲ್ಲೆಗಳ ಪಟ್ಟಿಯಲ್ಲಿ ಬೀದರ್ ಜಿಲ್ಲೆ ಎರಡು ಸ್ಥಾನ ಮೇಲಕ್ಕೇರಿದೆ.
ಈ ಸಲದ ಫಲಿತಾಂಶದಲ್ಲಿ ರಾಜ್ಯದಲ್ಲಿ ಬೀದರ್ ಜಿಲ್ಲೆ 31ನೇ ಸ್ಥಾನ ಪಡೆದಿದೆ. ಕಳೆದ ವರ್ಷ 33ನೇ ಸ್ಥಾನದಲ್ಲಿತ್ತು. ಈ ವರ್ಷ ಎರಡು ಸ್ಥಾನ ಜಿಗಿದಿದೆ. 2023ನೇ ಸಾಲಿನಲ್ಲಿ ಬೀದರ್ ಜಿಲ್ಲೆ 34ನೇ ಸ್ಥಾನದಲ್ಲಿತ್ತು.
ಈ ಬಾರಿ ಪರೀಕ್ಷೆಗೆ ಒಟ್ಟು 23,754 ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪೈಕಿ 12,650 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಜಿಲ್ಲೆಗೆ ಒಟ್ಟು ಶೇ 53.25 ಫಲಿತಾಂಶ ಬಂದಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಫಲಿತಾಂಶ ಸುಧಾರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದರು. ಆದರೆ, ಒಟ್ಟಾರೆ ಫಲಿತಾಂಶ ಹೇಳಿಕೊಳ್ಳುವಂತಹ ರೀತಿಯಲ್ಲಿ ಬಂದಿಲ್ಲ.
ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಬೀದರ್ ಮೂರನೇ ಸ್ಥಾನದಲ್ಲಿ. ವಿಜಯನಗರ 19ನೇ ಸ್ಥಾನದಲ್ಲಿದ್ದರೆ, ಕಲಬುರಗಿ ಜಿಲ್ಲೆ 35ನೇ ಕೊನೆಯ ಸ್ಥಾನದಲ್ಲಿದೆ.
ಈ ಸುದ್ದಿ ಓದಿದ್ದೀರಾ? BREAKING NEWS | ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; 22 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ