ಬೆಂ.ಗ್ರಾಮಾಂತರ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ದೇವನಹಳ್ಳಿ ತಾಲ್ಲೂಕಿನ ವಿಜಯಪುರ ನಗರದ ನೀಲಗಿರೇಶ್ವರ ಪ್ರೌಢಶಾಲೆಯ ಸಿ.ಭಾವನ ಮತ್ತು ದೊಡ್ಡಬಳ್ಳಾಪುರ ನಗರದ ಮೆಳೆಕೋಟೆ ಕ್ರಾಸ್ ನಲ್ಲಿರುವ ಎಸ್.ಜೆ.ಸಿ.ಆರ್ ಶಾಲೆಯ ರಂಜಿತಾ ಎ.ಸಿ ಎಂಬ ವಿದ್ಯಾರ್ಥಿನಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಈ ಮೂಲಕ ಬೆಂ.ಗ್ರಾಮಾಂತರ ಜಿಲ್ಲೆಗೆ 74.02 ರಷ್ಟು ಫಲಿತಾಂಶ ಬಂದಿದ್ದು, ರಾಜ್ಯದಲ್ಲಿ ಜಿಲ್ಲೆ 9ನೇ ಸ್ಥಾನದಲ್ಲಿದೆ.