ಶೂದ್ರರ, ದಲಿತರ ಮೀಸಲಾತಿಗೆ ಬಿಜೆಪಿ-ಆರ್‌ಎಸ್‌ಎಸ್‌ನಿಂದ ನಿರಂತರ ವಿರೋಧವಿದೆ: ಸಿದ್ದರಾಮಯ್ಯ

Date:

Advertisements

ಬಿಜೆಪಿ ಮತ್ತು ಆರ್.ಎಸ್.ಎಸ್‌ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ. ಈ ಬಗ್ಗೆ ಅವರಿಗೆ ಬದ್ಧತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಇಂದು (ಮೇ.2) ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ತೂಬಿನಕೆರೆ ಹೆಲಿಫ್ಯಾಡ್ ನಲ್ಲಿ ಮಾಧ್ಯಮದರೊಂದಿಗೆ ಮಾತನಾಡಿ, “ನೂರು ವರ್ಷಗಳ ಇತಿಹಾಸ ನೋಡಿದರೆ ಅವರು ಯಾವಾಗಲೂ ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತಲೇ ಬಂದವರು. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಮಿಲ್ಲರ್ ಆಯೋಗದಿಂದ ಹಿಡಿದು ಇಂದಿನವರೆಗೆ ವಿರೋಧ ಮಾಡುತ್ತಲೇ ಬಂದಿದ್ದಾರೆ. ಆರ್.ಎಸ್.ಎಸ್ 1925 ರಂದು ಪ್ರಾರಂಭವಾಗಿದ್ದು 2025 ಕ್ಕೆ ನೂರು ವರ್ಷಗಳಾಗುತ್ತಿದೆ. ಅವರು ಮೀಸಲಾತಿಯನ್ನು ಎಂದೂ ಒಪ್ಪಿಲ್ಲ” ಎಂದರು.

ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಆಗಬೇಕು

Advertisements

“ರಾಹುಲ್ ಗಾಂಧಿಯವರು ಎರಡು ವರ್ಷಗಳಿಂದ ಈ ಬಗ್ಗೆ ಬಹಳ ಗಂಭೀರವಾಗಿ ಒತ್ತಾಯ ಮಾಡುತ್ತಿದ್ದರು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಕೂಡ ಇದನ್ನು ಸೇರಿಸಲು ಅವರೇ ಕಾರಣಕರ್ತರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿಯವರಿಗೆ ಪತ್ರವನ್ನೂ ಬರೆದಿದ್ದರು. ಈ ಎಲ್ಲರ ಹೋರಾಟ ಮತ್ತು ಒತ್ತಡದ ನಂತರ ಜಾತಿಗಣತಿ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಆದರೆ ಯಾವಾಗ ಎಂದು ಸಮಯ ನಿಗದಿ ಮಾಡಿಲ್ಲ. ಜನಗಣತಿಯಲ್ಲಿಯೇ ಜಾತಿ ಗಣತಿಯನ್ನು ಮಾಡುವುದಾಗಿ ಹೇಳಿದ್ದಾರೆ. ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಆಗಬೇಕು. ಸಂವಿಧಾನಕ್ಕೆ ತಿದ್ದುಪಡಿ ತಂದು ಮೀಸಲಾತಿಯ ಗರಿಷ್ಠ ಪರಿಮಿತಿಯನ್ನು ಹೆಚ್ಚು ಮಾಡಬೇಕು” ಎಂದು ಒತ್ತಾಯಿಸಿದರು.

ಸರ್ವೋಚ್ಚ ನ್ಯಾಯಾಲಯದ ವಿಭಾಗೀಯ ಪೀಠವು ಶೇ.50% ಗಿಂತ ಹೆಚ್ಚಬಾರದು ಎಂದು ಹೇಳಿದೆ. ಮೀಸಲಾತಿ 50% ಆದರೆ, ಜನಸಂಖ್ಯೆಯ ಅನುಗುಣವಾಗಿ ಮೀಸಲಾತಿ ನೀಡಬೇಕು. ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕೊಡಬೇಕಾಗಿರುವುದು ಅತ್ಯಂತ ಅನಿವಾರ್ಯ ಮತ್ತು ಅಗತ್ಯ. ಸಮ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಆರ್ಥಿಕವಾಗಿ ಸಾಮಾಜಿಕವಾಗಿ ಸಬಲರಾಗಬೇಕು. ಆಗ ಮಾತ್ರ ಜಾತಿಯನ್ನು ಹೋಗಲಾಡಿಸಲು ಸಾಧ್ಯವಾಗುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ‘ಈ ಬಾರ್ ನಿನ್ನಪ್ಪನದಾ?, ಬ್ಯಾವರ್ಸಿ..’ ಕುಡಿದು ಮಾರಾಮಾರಿ ನಡೆಸಿದ್ದ ಸುಹಾಸ್ ಶೆಟ್ಟಿ!

ಖಾಸಗಿ ಕ್ಷೇತ್ರದಲ್ಲಿಯೂ ಮೀಸಲಾತಿಯನ್ನು ತರಲು ಆಗ್ರಹ

“ಮೀಸಲಾತಿಯಲ್ಲಿ ಶೇ.50 ರಷ್ಟು ಗರಿಷ್ಠ ಪರಿಮಿತಿಯನ್ನು ತೆಗೆಯಬೇಕು, ಖಾಸಗಿ ಕ್ಷೇತ್ರದಲ್ಲಿಯೂ ಮೀಸಲಾತಿಯನ್ನು ತರಬೇಕು. ಸಮೀಕ್ಷೆಯ ಸಮಯವನ್ನು ನಿಗದಿ ಮಾಡಬೇಕು. ನ್ಯಾಯಮೂರ್ತಿ ರೋಹಿಣಿ ಸಮಿತಿಯ ಶಿಫಾರಸುಗಳನ್ನೂ ಜಾರಿಗೊಳಿಸುವ ಜೊತೆಗೆ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನೂ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಮಂಗಳೂರಿನಲ್ಲಿ ಕೊಲೆ, ಸಮಗ್ರ ತನಿಖೆಗೆ ಸೂಚನೆ

ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆಯಾಗಿದ್ದು, ಪದೇಪದೇ ಕೋಮು ಗಲಭೆಗಳಾಗುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, “ಕೊಲೆ ಗೀಡಾದ ವ್ಯಕ್ತಿ ರೌಡಿಶೀಟರ್ ಆಗಿದ್ದ ಎಂದು ಪೊಲೀಸರು ತಿಳಿಸಿದ್ದು, ಈ ಬಗ್ಗೆ ಎಡಿಜಿಪಿ (ಕಾನೂನು ಸುವ್ಯವಸ್ಥೆ) ವರೊಂದಿಗೆ ಮಾತನಾಡಿ ಅವರನ್ನು ಸ್ಥಳಕ್ಕೆ ಕಳುಹಿಸಿ ಪರಿಶೀಲನೆ ನಡೆಸಲು ಸೂಚಿಸಿದೆ. ಮನುಷ್ಯನ ಪ್ರಾಣ ಬಹಳ ಮುಖ್ಯ. ಕೂಡಲೇ ಅಪರಾಧಿಗಳು ಯಾರೇ ಆಗಿದ್ದರೂ ಅವರನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡಿ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕು” ಎಂದು ಸೂಚಿಸಲಾಗಿದೆ ಎಂದರು.

ಪಹಲ್ಗಾಮ್‌ಗೆ ಪ್ರಧಾನಿ ಮೋದಿ ಏಕೆ ಭೇಟಿ ನೀಡಲಿಲ್ಲ?

ರೌಡಿ ಶೀಟರ್ ಸುಹಾಸ್ ಶೆಟ್ಟಿ ಕೊಲೆಯಾದ ಸ್ಥಳಕ್ಕೆ ಬಿಜೆಪಿಯವರು ಭೇಟಿ ನೀಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ, “ಬಿಜೆಪಿಯವರು ಯಾವಾಗಲೂ ರಾಜಕೀಯವಾಗಿ ಇಂಥ ಪ್ರಕ್ರಣಗಳನ್ನೇ ಹುಡುಕುತ್ತಾರೆ. ಒಂದು ವಾರದಿಂದ ಪೆಹಲಗಾಂ ಪ್ರಕರಣದ ಬಗ್ಗೆ ಏನು ಹೇಳುತ್ತಾರೆ. ಉಗ್ರರ ದಾಳಿಗೆ 26 ಜನ ಸಾವನ್ನಪ್ಪಿದ್ದಾರೆ. ಪ್ರಧಾನಿಗಳು ಅಲ್ಲಿಗೆ ಭೇಟಿ ನೀಡಿದ್ದಾರೆಯೇ? ಬಿಜೆಪಿಯವರಿಗೆ ಪ್ರಧಾನಿ ಮೋದಿಯವರಿಗೆ ಇದು ಮುಖ್ಯ ಅನ್ನಿಸುತ್ತಿಲ್ಲವೇ” ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X