ಚಿಕ್ಕಬಳ್ಳಾಪುರ | ಪುತ್ಥಳಿ ವಿವಾದ; ಕೆಂಪೇಗೌಡರನ್ನು ಅಪಮಾನಿಸಿದರೆ ತಕ್ಕ ಪಾಠ: ನಿರ್ಮಾಪಕ ಉಮಾಪತಿ

Date:

Advertisements

ಕೆಂಪೇಗೌಡರನ್ನು ಅಪಮಾನಿಸುವ ಮೂಲಕ ಒಕ್ಕಲಿಗ ಸಮುದಾಯಕ್ಕೆ ಕಳಂಕ ತಂದರೆ ತಕ್ಕ ಪಾಠ ಕಲಿಸುತ್ತೇವೆ ಎಂದು ಒಕ್ಕಲಿಗ ಸಂಘದ ನಿರ್ದೇಶಕ ಹಾಗೂ ಚಿತ್ರ ನಿರ್ಮಾಪಕ ಉಮಾಪತಿ ಶ್ರೀನಿವಾಸಗೌಡ ಖಡಕ್‌ ಎಚ್ಚರಿಕೆ ನೀಡಿದರು.

ಚಿಕ್ಕಬಳ್ಳಾಪುರ ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗುಡಿಬಂಡೆ, ಚಿಕ್ಕಬಳ್ಳಾಪುರಕ್ಕೆ ತನ್ನದೇ ಆದ ಇತಿಹಾಸವಿದ್ದು, ಅದನ್ನು ಹಾಳು ಮಾಡುವುದು ಬೇಡ. ನಾಲ್ಕು ಗೋಡೆಗಳ ನಡುವೆ ಇರಬೇಕಾದ ವಿಚಾರವನ್ನು ಬೀದಿಗೆ ತಂದಿದ್ದೀರಿ ಎಂದು ಕಿಡಿಕಾರಿದರು.

ಗುಡಿಬಂಡೆಯಲ್ಲಿ ಪುತ್ಥಳಿ ನಿರ್ಮಾಣದ ವಿಚಾರದಲ್ಲಿ ಒಕ್ಕಲಿಗರು ಮತ್ತು ಬಲಿಜಿಗರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ವ್ಯಕ್ತಿಯೋರ್ವ ಕೆಂಪೇಗೌಡರಿಗೆ ಚಪ್ಪಲಿ ಹಾರ ಹಾಕುತ್ತೇವೆ ಎಂದು ಹೇಳುವ ಮೂಲಕ ಕೆಂಪೇಗೌಡರಿಗೆ ಮತ್ತು ಇಡೀ ಸಮುದಾಯಕ್ಕೆ ಅಪಮಾನ ಮಾಡಿದ್ದಾನೆ. ಇದಕ್ಕೆ ಸಂಬಂಧಿಸಿದ ವಿಡಿಯೋಗಳು ಇವೆ. ಈ ರೀತಿ ಹೇಳಿರುವ ವ್ಯಕ್ತಿ ಕ್ಷಮೆ ಕೇಳದಿದ್ದರೆ ರಾಜ್ಯದಾದ್ಯಂತ ಪ್ರತಿಭಟನೆಗೆ ಕರೆ ನೀಡಬೇಕಾಗುತ್ತದೆ ಎಂದು ಆಕ್ರೋಶ ಹೊರಹಾಕಿದರು.

Advertisements

ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಕೋನಪ್ಪರೆಡ್ಡಿ ಮಾತನಾಡಿ, ಒಕ್ಕಲಿಗ ಸಮುದಾಯ ಶಾಂತಿ ಸಾಮರಸ್ಯದಿಂದ ಎಲ್ಲರ ಜೊತೆ ಬದುಕುತ್ತಿದೆ. ಗುಡಿಬಂಡೆಯ ಅಂಬೇಡ್ಕರ್ ವೃತ್ತದಲ್ಲಿ ಎರಡು ಗುಂಟೆ ಸರ್ಕಾರಿ ಖರಾಬಿನಲ್ಲಿ ಆವಳಿ ಬೈರೇಗೌಡ ಅವರ ವಿಗ್ರಹ ಪ್ರತಿಷ್ಠಾಪಿಸಲು ಈ ಹಿಂದೆಯೇ ತೀರ್ಮಾನಿಸಲಾಗಿತ್ತು. ಆದರೆ, ಕೈವಾರ ತಾತಯ್ಯ ಅವರ ಪುತ್ಥಳಿ ಸ್ಥಾಪನೆಗೆ ಮುಂದಾಗಿದ್ದು, ಈ ವೇಳೆ ಎರಡೂ ಸಮುದಾಯಗಳ ನಡುವೆ ವಾಗ್ವಾದ ನಡೆದಿದೆ. ಆಗ ಕಿಡಿಗೇಡಿಯೊಬ್ಬ ಕೆಂಪೇಗೌಡರಿಗೆ ಅಪಮಾನ ಮಾಡಿದ್ದಾನೆ ಎಂದು ಗುಡುಗಿದರು.

IMG 20250502 WA0040

ಕೈವಾರ ತಾತಯ್ಯ ಅವರ ಬಗ್ಗೆ ನಮಗೆ ಗೌರವವಿದೆ. ಆದರೆ ಕೆಲವರು ಜಾತಿಗಳ ನಡುವೆ ಸಾಮರಸ್ಯ ಕೆಡಿಸುವ ಕೆಲಸ ಮಾಡುತ್ತಿದ್ದಾರೆ. ಬಲಿಜ ಸಮುದಾಯದ ಹಿರಿಯರು ಸಾಮರಸ್ಯ ಕೆಡಿಸುವವರಿಗೆ ಬುದ್ಧಿ ಹೇಳಬೇಕು. ಕೆಂಪೇಗೌಡರನ್ನು ಅವಮಾನಗೊಳಿಸಿದ ವ್ಯಕ್ತಿ ಕ್ಷಮೆ ಕೇಳಬೇಕು. ಪೊಲೀಸರು ಆತನನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯ ಒಕ್ಕಲಿಗರ ಸಂಘದ ಗೌರವಾಧ್ಯಕ್ಷ ಯಲುವಳ್ಳಿ ರಮೇಶ್ ಮಾತನಾಡಿ, ಗುಡಿಬಂಡೆಯ ಅಭಿವೃದ್ಧಿಗೆ ಕಾರಣರಾದವರು ಆವಳಿ ಬೈರೇಗೌಡರು. ಇಲ್ಲಿ ಅವರ ಪುತ್ಥಳಿ ಸ್ಥಾಪಿಸಲು ಕಾನೂನು ಅನುಮತಿಗಾಗಿ ಸಮುದಾಯದವರು ಕಾಯುತ್ತಿದ್ದರು ಎಂದರು.

ಒಕ್ಕಲಿಗರು ಜಾತಿ ತಾರತಮ್ಯ ಮಾಡಿಲ್ಲ. ಇತರೆ ಸಮುದಾಯಗಳ ಜೊತೆ ಅಣ್ಣ ತಮ್ಮಂದಿರ ರೀತಿ ಬದುಕುತ್ತಿದ್ದೇವೆ. ಆದರೆ ಕೆಲವು ಕಿಡಿಗೇಡಿಗಳು ಸಾರಮಸ್ಯ ಕೆಡಿಸುವ ಕೆಲಸ ಮಾಡುತ್ತಿದ್ದಾರೆ. ನಾವು ಯಾರ ತಂಟೆಗೂ ಹೋಗುವುದಿಲ್ಲ. ನಮ್ಮ ತಂಟೆಗೆ ಬಂದರೆ ಸುಮ್ಮನೆ ಬಿಡುವವರೂ ಅಲ್ಲ ಎಂದು ಆಕ್ರೋಶಗೊಂಡರು.

ಒಕ್ಕಲಿಗರ ಸಂಘದ ನಿರ್ದೇಶಕ ಡಾ.ರಮೇಶ್ ಮಾತನಾಡಿ, ಕೆಂಪೇಗೌಡರಿಗೆ ಈ ರೀತಿಯ ಹೇಳಿರುವುದನ್ನು ಸಂಘ ಖಂಡಿಸುತ್ತದೆ. ಸಮಾಜದಲ್ಲಿ ಸಾಮರಸ್ಯ ಕೆಡಿಸಲು ರಾಜಕೀಯ ಪ್ರೇರಿತ ಹೇಳಿಕೆ ನೀಡುತ್ತಿದ್ದಾರೆ. ಸಮುದಾಯ ಕಾನೂನಿನಡಿ ಹೋರಾಟ ನಡೆಸುತ್ತದೆ. ಕೈವಾರ ತಾತಯ್ಯ ಅವರು ಮಾನವ ಕುಲ ಒಂದೇ ಎಂದು ಸಾರಿದ್ದಾರೆ. ಅವರಿಗೆ ನಾವೆಲ್ಲರೂ ನಮಿಸುತ್ತೇವೆ ಎಂದರು. 

ಇದನ್ನೂ ಓದಿ : ಬೆಂ.ಗ್ರಾಮಾಂತರ | ಮೇ 4ರಂದು ನೀಟ್ ಪರೀಕ್ಷೆ, ನಾಲ್ಕು ಪರೀಕ್ಷಾ ಕೇಂದ್ರಗಳಲ್ಲಿ ಸಿದ್ಧತೆ: ಜಿಲ್ಲಾಧಿಕಾರಿ

ಗುಡಿಬಂಡೆ ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಮಂಜುನಾಥ ರೆಡ್ಡಿ ಮಾತನಾಡಿ, ಗುಡಿಬಂಡೆಯಲ್ಲಿ ಒಕ್ಕಲಿಗ ಸಮುದಾಯದ ಜನಸಂಖ್ಯೆ ಕಡಿಮೆಯಿದೆ. ಪಟ್ಟಣ ಪಂಚಾಯಿತಿ ಅಧ್ಯಕ್ಷರೂ ಸೇರಿದಂತೆ ಆರೇಳು ಮಂದಿ ಸದಸ್ಯರು ಬಲಿಜ‌ ಸಮುದಾಯದವರೇ ಇದ್ದಾರೆ. ಎಲ್ಲರೂ ಸೇರಿ ಇಲ್ಲಿ ಕೈವಾರ ತಾತಯ್ಯ ಪುತ್ಥಳಿ ನಿರ್ಮಾಣಕ್ಕೆ ಮುಂದಾಗಿದ್ದಾರೆ ಎಂದು ಆರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X