ಬೀದರ್‌ | ಸರ್ವಸ್ವವನ್ನೂ ತೊರೆದು ವಚನ ಸಾಹಿತ್ಯ ರಕ್ಷಿಸಿದವರು ಹಳಕಟ್ಟಿ: ಹಿರಿಯ ಸಾಹಿತಿ ನಾಗನಾಥ ಚಿಟ್ಮೆ

Date:

Advertisements

ಜಗತ್ತಿಗೆ ಸಮಾನತೆ ತತ್ವ, ಸಾಮರಸ್ಯದ ಸುಸ್ಥಿರ ಸಮಾಜವನ್ನು ನಿರ್ಮಿಸುವ ಮಾರ್ಗದರ್ಶನ ನೀಡುವ ವಚನ ಸಾಹಿತ್ಯವನ್ನು ರಕ್ಷಿಸಿ ಯುವ ಪೀಳಿಗೆಗೆ ನೀಡಿರುವ ಶ್ರೇಯಸ್ಸು ಡಾ.ಫ.ಗು.ಹಳಕಟ್ಟಿ ಅವರಿಗೆ ಸಲ್ಲುತ್ತದೆ ಎಂದು ಹಿರಿಯ ಸಾಹಿತಿ ನಾಗನಾಥ ಚಿಟ್ಮೆ ಅಭಿಪ್ರಾಯಪಟ್ಟರು.

ಕನ್ನಡ ಸಾಹಿತ್ಯ ಪರಿಷತ್ತು ಬೀದರ್‌ ಜಿಲ್ಲೆ ಔರಾದ್‌ ಘಟಕದ ವತಿಯಿಂದ ಪಟ್ಟಣದ ಆದರ್ಶ ವಿದ್ಯಾಲಯದಲ್ಲಿ ಡಾ. ಫ. ಗು.ಹಳಕಟ್ಟಿ ಅವರ ಜಯಂತಿಯ ಪ್ರಯುಕ್ತ ಆಯೋಜಿಸಿದ “ಕನ್ನಡದ ಕಂಪು” ಕಾರ್ಯಕ್ರಮದಲ್ಲಿ ಮಾತನಾಡಿದರು.

“ತನ್ನ ಬದುಕಿನ ಸರ್ವಸ್ವವನ್ನು ತ್ಯಾಗ ಮಾಡಿ ವಚನ ಸಾಹಿತ್ಯವನ್ನು ರಕ್ಷಿಸಿದರು. ಬಸವಾದಿ ಶರಣರ ವಚನಗಳು ಇಂದಿಗೂ ಜೀವಂತವಾಗಿರಲು ಹಳಕಟ್ಟಿ ಅವರ ಅವಿರತ ಶ್ರಮವೇ ಕಾರಣ” ಎಂದು ಹೇಳಿದರು.

Advertisements

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ತಾಲೂಕು ಕಸಾಪ  ಅಧ್ಯಕ್ಷ ಡಾ ಶಾಲಿವಾನ ಉದಗಿರೆ ಮಾತನಾಡಿ, “ವಚನ ಸಾಹಿತ್ಯ ಸಂಶೋಧನೆಗೆ ನೂರು ವರ್ಷಗಳು ಪೂರೈಸಿದ್ದು, ಸರ್ಕಾರದಿಂದಲೇ ಡಾ.ಫ.ಗು ಹಳಕಟ್ಟಿಯವರ ಜನ್ಮದಿನಾಚರಣೆ ವಚನ ಸಾಹಿತ್ಯ ಸಂರಕ್ಷಣಾ ದಿನವಾಗಿ ಆಚರಿಸುತ್ತಿರುವುದು ಅತ್ಯಂತ ಸ್ವಾಗತಾರ್ಹ” ಎಂದು ನುಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಒಳಮೀಸಲಾತಿ ಜಾರಿಗೆ ಕೇಂದ್ರಕ್ಕೆ ಶಿಫಾರಸು ಮಾಡಲು ಒತ್ತಾಯ

ಕಸಾಪ ಮಾಧ್ಯಮ ಪ್ರತಿನಿಧಿ ಮಲ್ಲಪ್ಪಗೌಡ, ಬಸವೇಶ್ವರ ಡಿ.ಇಡ್  ಕಾಲೇಜಿನ ಪ್ರಾಂಶುಪಾಲ ಶರಣಪ್ಪ ನೌಬಾದೆ, ಮಹದೇವ ಚಿಟಗಿರೆ, ಪ್ರವೀಣಕುಮಾರ ಕೋಳೆಕರ, ಪ್ರಕಾಶ ಬರದಾಪುರೆ, ಶಿವಕುಮಾರ ಪಾಟೀಲ, ಶಮಶೋದ್ದೀನ ಮುಲ್ಲಾ ಮತ್ತು ನೂರಾರು ವಿದ್ಯಾರ್ಥಿಗಳು, ಸಿಬ್ಬಂದಿಗಳು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X