ಕಾರ್ ಮತ್ತು ಬೊಲೆರೋ ವಾಹನ ಓವರ್ ಟೇಕ್ ಮಾಡುವ ವೇಳೆ ವಾಹನ ಅಪಘಾತವಾಗಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ.
ಅಪಘಾತ ರಭಸಕ್ಕೆ ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿವೆ. ಮೂಡಿಗೆರೆ ಬಸ್ ನಿಲ್ದಾಣದಿಂದ ಹ್ಯಾಂಡ್ ಪೋಸ್ಟ್ ವರೆಗಿನ ರಸ್ತೆ ಕಿರಿದಾಗಿದ್ದು ಯಾವಾಗಲೂ ವಾಹನ ಹೆಚ್ಚಿನದಾಗಿ ಚಲಿಸುವುದರಿಂದ ಘಟನೆಗಳು ಸಂಭವಿಸುತ್ತಿದೆ ಎಂದು ಸ್ಥಳೀಯ ಜನರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ
ಈ ಸ್ಥಳದಲ್ಲಿ ಅಪಘಾತಗಳು ಸಂಭವಿಸುತ್ತಲೇ ಇರುತ್ತವೆ. ಘಟನೆಯಲ್ಲಿ ಬಣಕಲ್ ಮೂಲದ ಇಬ್ಬರಿಗೆ ಗಾಯಗಳಾಗಿವೆ. ಘಟನೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
