ಚಿಕ್ಕಮಗಳೂರು ನಗರದ ನರಿಗುಡ್ಡನಹಳ್ಳಿ ವೃತ್ತದ ಬೈಪಾಸ್ ರಸ್ತೆಯಲ್ಲಿ, ಟಾಟಾ ಏಸ್ ವಾಹನವೊಂದು ಕಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿ ಅಂಗಡಿಗೆ ನುಗ್ಗಿದ ಘಟನೆ ಶುಕ್ರವಾರ ನಡೆದಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು : ರಸ್ತೆ ಅಪಘಾತ; ಇಬ್ಬರಿಗೆ ಗಾಯ
ಅತೀ ವೇಗ ಚಾಲನೆ ಮಾಡುತ್ತಿದ್ದ ಟಾಟಾ ಏಸ್ ವಾಹನವು, ಕಾರಿನ ಹಿಂಭಾಗಕ್ಕೆ ಗುದ್ದಿದ ಪರಿಣಾಮ ಕಾರು ಅಂಗಡಿಗೆ ನುಗ್ಗಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಟಾಟ್ ಏಸ್ ವಾಹನ ಚಾಲಕ ಭಯದಿಂದ ವಾಹನ ನಿಲ್ಲಿಸದೇ ಸ್ಥಳದಿಂದ ಹೊರಟು ಹೋಗಿದ್ದಾನೆ. ಘಟನೆ ಸ್ಥಳಕ್ಕೆ ಚಿಕ್ಕಮಗಳೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
