ಹಾವೇರಿ | ಹಿಂಸೆಯಿಂದ ದೇಶದ ಒಗ್ಗಟ್ಟು, ಶಾಂತಿ, ಸಾಮರಸ್ಯವನ್ನು ಒಡೆದು ಹಾಕಲು ಸಾಧ್ಯವಿಲ್ಲ : ನಿತೀಶ್ ನಾರಾಯಣ್

Date:

Advertisements

“ಭಾರತದಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯನ್ನು ಎಸ್ಎಫ್ಐ ತೀವ್ರವಾಗಿ ಖಂಡಿಸುತ್ತದೆ. ಹಿಂಸೆಯಿಂದ ಎಂದಿಗೂ ನಮ್ಮ ದೇಶದ ಒಗ್ಗಟ್ಟು, ಶಾಂತಿ, ಸಾಮರಸ್ಯವನ್ನು ಒಡೆದು ಹಾಕಲು ಸಾಧ್ಯವಿಲ್ಲ, ದೇಶದ ಐಕ್ಯತೆ, ಸೌಹಾರ್ದತೆಗೆ ಕಂಟಕವಾಗಿರುವ ಈ ಭಯೋತ್ಪಾದನೆ ಪಿಡುಗಿನ ವಿರುದ್ಧ ದೇಶದ ಜನತೆ ಒಟ್ಟಾಗಿ ನಿಲ್ಲುವುದು ಅಗತ್ಯವಿದೆ. ಭಯೋತ್ಪಾದನೆಯನ್ನು ನಿರ್ಮೂಲನೆಗೊಳಿಸಲು ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ” ಎಂದು ಎಸ್ಎಫ್ಐ ರಾಷ್ಟ್ರೀಯ ಉಪಾಧ್ಯಕ್ಷ ಡಾ. ನಿತೀಶ್ ನಾರಾಯಣ್ ಹೇಳಿದರು.

ಹಾವೇರಿ ಪಟ್ಟಣದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲಿನ  ಭಯೋತ್ಪಾದಕರ ಕ್ರೂರ ದಾಳಿಯನ್ನು ಖಂಡಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ನೇತೃತ್ವದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.

“ದೇಶ ದೇಶಗಳ ಮೇಲಿನ ದ್ವೇಷ ಸಾಧಿಸುವುದನ್ನು ಎಸ್ಎಫ್ಐ ಒಪ್ಪುವುದಿಲ್ಲ. ಇಂದು ಯುಎಸ್‌ಎ ಅಮೆರಿಕದಂತಹ ದೇಶಗಳು ಪಾಕಿಸ್ತಾನಕ್ಕೆ ಯುದ್ದ ಸಾಮಾಗ್ರಿಗಳನ್ನು ಸರಬರಾಜು ಮಾಡುತ್ತಿದೆ. ಭಯೋತ್ಪಾದಕ ಕೃತ್ಯಗಳಿಗೆ ಪ್ರಚೋದನೆ ನೀಡುತ್ತಿದೆ. ಇದನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಸರಿಪಡಿಸಿ ಮಟ್ಟಹಾಕಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

ಎಸ್ಎಫ್ಐ ರಾಜ್ಯಾಧ್ಯಕ್ಷ ಶಿವಪ್ಪ ಕೋಲಾರ ಮಾತನಾಡಿ, “ದೇಶದ ಭದ್ರತಾ ವೈಫಲ್ಯ ಸಂಭವಿಸಲು ಕಾರಣವೇನು? ಗಡಿಯನ್ನು ಭದ್ರಗೊಳಿಸದೇ ಈ ಚಟುವಟಿಕೆಗಳನ್ನು ನಡೆಯಲು ಅವಕಾಶ ಮಾಡಿಕೊಟ್ಟದ್ದು ಹೇಗೆ? ಎನ್ನುವ ಪ್ರಶ್ನೆಗಳನ್ನು ಜನರು ಕೇಳುತಿದ್ದಾರೆ ಇದಕ್ಕೆ ಸರ್ಕಾರ ಮತ್ತು ಗಡಿ ಭದ್ರತಾ ವ್ಯವಸ್ಥೆ ವೈಪಲ್ಯಕ್ಕೆ ಉತ್ತರಿಸಬೇಕು. ದೇಶ ದೇಶಗಳ, ಧರ್ಮ ಧರ್ಮದ ನಡುವೆ ಬಿರುಕನ್ನು ತರುತ್ತಿದ್ದಾರೆ. ಇದನ್ನು ಯಾರು ಒಪ್ಪಬಾರದು. ಕಾಶ್ಮೀರದಲ್ಲಿ ಹತರಾದ ಕುಟುಂಬದೊಂದಿಗೆ ನಾವಿದ್ದೇವೆ ಅವರಿಗೆ ನೈತಿಕ ಬೆಂಬಲವನ್ನು ನೀಡುತ್ತೇವೆ. ಅವರ ಕುಟುಂಬಕ್ಕೆ ಸರ್ಕಾರ ಎಲ್ಲ ರೀತಿಯ ಪರಿಹಾರ ಘೋಷಿಸಬೇಕು” ಎಂದು ಹೇಳಿದರು.

ಈ ಸಂದರ್ಭದಲ್ಲಿ ಡಿವೈಎಫ್‌ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಮಾತನಾಡಿ, ಕಾಶ್ಮೀರದ ಪಹಲ್ಯಾಮ್ ಸಮೀಪದಲ್ಲಿರುವ ಪ್ರಖ್ಯಾತ ಪ್ರವಾಸಿ ತಾಣವಾದ ಬೈಸರನ್ ಕಣಿವೆಯಲ್ಲಿ ಪ್ರವಾಸಿಗರ ಮೇಲೆ ದಾಳಿ ಮಾಡಿ 28 ಜನರನ್ನು ಬಲಿ ಪಡೆದ ಭಯೋತ್ಪಾದಕರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದರು.

“ನಮ್ಮ ರಾಜ್ಯದ ಮಂಜುನಾಥ್ ಹಾಗೂ ಭರತ್ ಭೂಷಣ್ ಸೇರಿದಂತೆ 28 ಜನ ಪ್ರವಾಸಿಗರನ್ನು ಬಲಿ ಪಡೆದಿರುವ ಭಯೋತ್ಪಾದಕರ ಪೈಶಾಚಿಕ ಕ್ರೌರ್ಯವನ್ನು ತೀವ್ರವಾಗಿ ಖಂಡಿಸುತ್ತೇವೆ. ಇದರ ವಿರುದ್ಧ ಜನತೆ ಐಕ್ಯತೆಯಿಂದ ಪ್ರತಿರೋಧಿಸಬೇಕು” ಎಂದರು.

“ರಾಷ್ಟ್ರಕ್ಕೆ ಭದ್ರತೆ ಪ್ರಮುಖವಾಗಿದೆ. ಕೇಂದ್ರ ಸರ್ಕಾರ ಜಮ್ಮು ಕಾಶ್ಮೀರದಲ್ಲಿ ಸಹಜ ಸ್ಥಿತಿಯಿದೆ ಎಂದು ಹೇಳುತ್ತಿರುವಾಗಲೇ ವಾಸ್ತವ ಪರಿಸ್ಥಿತಿಯಲ್ಲಿ ಅಲ್ಲಿನ ನಿವಾಸಿಗಳು, ವಲಸೆ ಕಾರ್ಮಿಕರು ಹಾಗೂ ಪ್ರವಾಸಿಗರ ಮೇಲೆ ದಾಳಿಗಳು ನಡೆಯುತ್ತಲೇ ಇವೆ. ಅಮೂಲ್ಯ ಜೀವಗಳನ್ನು ಕೊಲೆಗೈದ ಅಪರಾಧಿಗಳಿಗೆ ತಕ್ಕ ಶಿಕ್ಷೆಯಾಗಬೇಕು. ಜಮ್ಮು ಕಾಶ್ಮೀರದಲ್ಲಿ ಸಹಜಸ್ಥಿತಿ ನೆಲೆಸಲು ಸೂಕ್ತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಭಯೋತ್ಪಾದನೆಯನ್ನು ನಿರ್ಮೂಲನೆಗೊಳಿಸಲು ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಬಸವರಾಜ ಪೂಜಾರ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು : ರಸ್ತೆ ಅಪಘಾತ; ಇಬ್ಬರಿಗೆ ಗಾಯ

ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ಸತೀಶ್ ಕುಲಕರ್ಣಿ, ಎಸ್ಎಫ್ಐ ರಾಜ್ಯ ಕಾರ್ಯದರ್ಶಿ ವಿಜಯಕುಮಾರ್ ಟಿ ಎಸ್ , ಜಿಲ್ಲಾಧ್ಯಕ್ಷ ಬಸವರಾಜ ಎಸ್, ರಾಜ್ಯ ಉಪಾಧ್ಯಕ್ಷ ಗಣೇಶ ರಾಠೋಡ್, ಡಾ. ದೊಡ್ಡಬಸವರಾಜ ಗುಳೆದಾಳು, ಗ್ಯಾನೇಶ್ ಕಡಗದ, ಪದಾಧಿಕಾರಿ ಸುಜಾತ ಕಲಬುರಗಿ, ಚಂದ್ರು ರಾಠೋಡ್, ಅನಂತರಾಜ್ ಬಿ ಎಮ್, ರಜಿಯಾ ಯಸ್ಮೀನ್ ಇಂಜಿನಿಯರಿಂಗ್ ಕಾಲೇಜ್ ಘಟಕ ಅಧ್ಯಕ್ಷ ರೇವಣ್ಣಸಿದ್ದು ವಿ, ಮುಖಂಡರಾದ ಬಾಲಾಜಿ ಗಂಗಾವತಿ, ಇಮಾಮ್ ಸಾಬ್ ಯಾದಗಿರಿ, ಶಶಿಕುಮಾರ್, ಪವನ್ ವಿಜಯನಗರ, ಕೃಷ್ಣ ನಾಯಕ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X