ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬೈಕೆರೆಯಲ್ಲಿ, ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.
“ಯಾರೇ ಕೊಲೆ, ಸುಲಿಗೆ, ದರೋಡೆಯಲ್ಲಿ ಭಾಗಿಯಾಗಿದ್ದರೂ ಅವರನ್ನು ಕ್ರಿಮಿನಲ್‌ಗಳೆಂದೇ ಪರಿಗಣಿಸಲಾಗುವುದು. ಇಂತಹ ದುಷ್ಕೃತ್ಯಗಳಿಗೆ ಯಾವುದೇ ಜಾತಿ, ಮತದ ಪ್ರಶ್ನೆ ಬರುವುದಿಲ್ಲ. ಅವರೆಲ್ಲೆ ಇದ್ದರೂ ಪೊಲೀಸರು ಹುಡುಕಿ, ಉಗ್ರ ಶಿಕ್ಷೆ ವಿಧಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತದೆ. ಗುಂಪು ಹಲ್ಲೆ ಸೇರಿದಂತೆ ಯಾವುದೇ ಅಪರಾಧದಲ್ಲಿ ಭಾಗಿಯಾದವರಿಗೂ ಕಾನೂನಿನ ಪ್ರಕಾರ ಕಠಿಣ ಶಿಕ್ಷೆ ಖಚಿತ,” ಕಾನೂನು ಎಲ್ಲರಿಗೂ ಸಮಾನವಾಗಿದ್ದು, ಅದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ಸಚಿವ ಖಂಡ್ರೆ ತಿಳಿಸಿದರು.
