ಭಾಲ್ಕಿ ತಾಲೂಕಿನಲ್ಲಿ ಮೇ 5 ರಿಂದ 17ರ ವರೆಗೆ ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಅವರ ಏಕಸದಸ್ಯ ವಿಚಾರಣಾ ಆಯೋಗದಿಂದ ದತ್ತಾಂಶ ಸಂಗ್ರಹಿಸುವ ಸಮೀಕ್ಷೆ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸತೀಶ್ ಸಂಗನ್ ಹೇಳಿದರು.
ಪಟ್ಟಣದ ಟೌನ್‌ಹಾಲ್ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗಿಕರಣ, ಸಮೀಕ್ಷೆ ಕುರಿತು ಮೇಲ್ವಿಚಾರಕರು ಮತ್ತು ಗಣತಿದಾರರಿಗೆ ನಡೆದ ಒಂದು ದಿನದ ತರಬೇತಿ ಕಾರ್ಯಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮೇಲ್ವಾಚರಕರು ಮತ್ತು ಗಣತಿದಾರರು ತರಬೇತಿಯಲ್ಲಿ ಸಂಪೂರ್ಣ ಮಾಹಿತಿ ಪಡೆದು ತಾಲೂಕಿನಲ್ಲಿ ಸಮೀಕ್ಷೆ ನಡೆಯುವ ಸಂದರ್ಭದಲ್ಲಿ ಯಾವುದೇ ಪರಿಶಿಷ್ಟ ಜಾತಿಯ ಕುಟುಂಬವು ಬಿಟ್ಟು ಹೋಗದಂತೆ ಎಚ್ಚರಿಕೆ ವಹಿಸಬೇಕು ಎಂದರು. ಕುಟುAಬದ ಉಪಜಾತಿ, ಆರ್ಥಿಕ ಮತ್ತು ಸಾಮಾಜಿಕ ಮಟ್ಟ ಸೇರಿದಂತೆ ಸಮೀಕ್ಷೆಯಲ್ಲಿ ನೀಡಲಾಗುವ ಎಲ್ಲ ಪ್ರಶ್ನೆಗಳಿಗೆ ನಿಖರ ಉತ್ತರ ಪಡೆದು ಅಪಲೋಡ್ ಮಾಡಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಕಾಂತ ಬಿರಾದಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಪ್ಪ ಹಳ್ಳದ, ಪುರಸಭೆ ಮುಖ್ಯಾಧಿಕಾರಿ ಸಂಗಮೇಶ ಕಾರಬಾರಿ, ಸಿಡಿಪಿಓ ಶ್ರೀನಿವಾಸ ಬಾಳವಾಲೆ ಸೇರಿದಂತೆ ಹಲವರು ಇದ್ದರು.