ಕೃಷ್ಣಾ ನ್ಯಾಯಾಧಿಕರಣ-2 ಗೆಜೆಟ್ ಅಧಿಸೂಚನೆ | ಸದ್ಯದಲ್ಲೇ ಸರ್ವಪಕ್ಷ ಸಭೆ: ಸಿಎಂ ಸಿದ್ದರಾಮಯ್ಯ

Date:

Advertisements

ಕೃಷ್ಣಾ ನ್ಯಾಯಾಧಿಕರಣ-2 ಗೆಜೆಟ್ ಅಧಿಸೂಚನೆ ಕುರಿತು ಚರ್ಚಿಸಲು ಕೇಂದ್ರ ಜಲಶಕ್ತಿ ಸಚಿವರು ಕರೆದಿರುವ ಕಣಿವೆ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಭೆಗೆ ಪೂರ್ವಭಾವಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಕಾವೇರಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು.

ರಾಜ್ಯದ ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದ್ದು, ರಾಜ್ಯದ ಪಾಲಿನ ನೀರನ್ನು ಪಡೆದುಕೊಳ್ಳಲು ಕಾನೂನು ಕ್ರಮಗಳು ಸೇರಿದಂತೆ ಎಲ್ಲ ಪ್ರಯತ್ನ ನಡೆಸುತ್ತೇವೆ. ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಅನುಷ್ಠಾನ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸದ್ಯದಲ್ಲಿಯೇ ಸರ್ವಪಕ್ಷ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.

ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಗಜೆಟ್ ಅಧಿಸೂಚನೆ ಪ್ರಕಟಿಸಲು ಮತ್ತು ಈ ಕುರಿತಾಗಿ ದಿನಾಂಕ 16-09-2011ರ ಸುಪ್ರೀಂಕೋರ್ಟ್ ಆದೇಶವನ್ನು ಮಾರ್ಪಡಿಸಲು ಕೋರಿ ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಲು ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರಲು ಸಭೆಯಲ್ಲಿ ನಿರ್ಧರಿಸಲಾಯಿತು.

Advertisements

“ನ್ಯಾಯಾಧಿಕರಣದ ಅಂತಿಮ ತೀರ್ಪು ಕೇಂದ್ರ ಸರ್ಕಾರದ ಗಜೆಟ್ ಅಧಿಸೂಚನೆಗೆ ಒಳಪಟ್ಟಿದ್ದು, ಈ ಕುರಿತಾಗಿ ಹಲವು ಬಾರಿ ಮನವಿ ಸಲ್ಲಿಸಿದ್ದರೂ, ಇನ್ನೂ ಅಧಿಸೂಚನೆ ಆಗಿರುವುದಿಲ್ಲ. ನ್ಯಾಯಾಧಿಕರಣದ ಅಂತಿಮ ತೀರ್ಪು ನೀಡಿದ ದಿನಾಂಕದಿಂದ ಇದುವರೆಗೂ 15 ವರ್ಷಗಳೇ ಕಳೆದಿವೆ. ಉತ್ತರ ಕರ್ನಾಟಕದ ಯುಕೆಪಿ-3 ಯೋಜನೆಯ ಪ್ರದೇಶದಲ್ಲಿನ ರೈತರು ತಮ್ಮ ಹಕ್ಕಿನ ಪಾಲನ್ನು ಬಳಸಲು ಬಹಳ ವರ್ಷಗಳಿಂದ ಕಾಯುತ್ತಿದ್ದಾರೆ” ಎಂದು ಮುಖ್ಯಮಂತ್ರಿ ಹೇಳಿದರು.

ಕೃಷ್ಣಾ ನ್ಯಾಯಾಧೀಕರಣ 1

ಕಾವೇರಿ ಜಲವಿವಾದ ನ್ಯಾಯಮಂಡಳಿ ತೀರ್ಪಿಗೆ ಸಂಬಂಧಿಸಿದಂತೆ ಸಿವಿಲ್ ಮೇಲ್ಮನವಿಗಳು ಬಾಕಿ ಇರುವಾಗಲೂ ಕಾವೇರಿ ನ್ಯಾಯಾಧಿಕರಣದ ತೀರ್ಪು ಪ್ರಕಟಿಸಲು ಸುಪ್ರೀಂಕೋರ್ಟ್ ನಿರ್ದೇಶಿಸಿರುತ್ತದೆ. ಇದೇ ರೀತಿ ಮಹದಾಯಿ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಪ್ರಕಟಣೆಗೆ ಸುಪ್ರೀಂಕೋರ್ಟ್ ದಿನಾಂಕ 20-02-2020ರ ತನ್ನ ಆದೇಶದಲ್ಲಿ ನಿರ್ದೇಶಿಸಿದೆ. ಅದರಂತೆ ಈ ಎರಡೂ ನ್ಯಾಯಾಧಿಕರಣಗಳ ತೀರ್ಪನ್ನು ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿರುತ್ತದೆ. ಇದೇ ರೀತಿಯಲ್ಲಿ ಕೃಷ್ಣಾ ನ್ಯಾಯಾಧಿಕರಣದ ತೀರ್ಪಿನ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ನಿರ್ಧರಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಹುಲ್ ಕಾರ್ಯಸೂಚಿಗೆ ಮೋದಿ ಮಣೆ ಹಾಕಿ ಶರಣಾದ ಗುಟ್ಟೇನು?

ಕೃಷ್ಣಾ ಜಲ ವಿವಾದ ನ್ಯಾಯಮಂಡಳಿ-II ದಿನಾಂಕ 30-12-2010 ರಂದು ಕೃಷ್ಣಾ ನ್ಯಾಯಾಧಿಕರಣ-2 ರ ತೀರ್ಪು ನೀಡಿದ್ದು, ದಿನಾಂಕ 29-11-2013ರಂದು further report ನೀಡಿರುತ್ತದೆ. ನ್ಯಾಯಾಧಿಕರಣದ ಅಂತಿಮ ತೀರ್ಪಿನಡಿ ಕರ್ನಾಟಕ ರಾಜ್ಯಕ್ಕೆ 173 ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗಿರುತ್ತದೆ. ಈ ಪೈಕಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಯೋಜನೆಗೆ 130 ಟಿಎಂಸಿ ಹಂಚಿಕೆ ನಿಗದಿಪಡಿಸಿರುತ್ತದೆ.

ಆದರೆ, ನ್ಯಾಯಮಂಡಳಿಯ ವರದಿ ಮತ್ತು ನ್ಯಾಯಾಧಿಕರಣದ ಅಂತಿಮ ಆದೇಶ ಪ್ರಶ್ನಿಸಿ ಆಂಧ್ರಪ್ರದೇಶ ಸುಪ್ರೀಂಕೋರ್ಟ್ನಲ್ಲಿ ಎಸ್ಎಲ್ಪಿ ದಾಖಲಿಸಿದೆ. ಈ ಕುರಿತು ಸುಪ್ರೀಂಕೋರ್ಟ್ ತನ್ನ ದಿನಾಂಕ 16-09-2011 ರ ಆದೇಶದಲ್ಲಿ ʻತನ್ನ ಮುಂದಿನ ಆದೇಶದವರೆಗೆ ನ್ಯಾಯಾಧಿಕರಣ ತೆಗೆದುಕೊಳ್ಳಬಹುದಾದ ಯಾವುದೇ ನಿರ್ಧಾರಗಳ ಅಧಿಸೂಚನೆ ಪ್ರಕಟಿಸದಂತೆ ಆದೇಶ ನೀಡಿದೆ.

ಸಭೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಆರ್.ಬಿ.ತಿಮ್ಮಾಪುರ್, ಶರಣಬಸಪ್ಪ ಗೌಡ ದರ್ಶನಾಪುರ, ಮಹಾದೇವಪ್ಪ, ಶಿವಾನಂದ ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ನ್ಯಾಯವಾದಿ ಮೋಹನ್ ಕಾತರ್ಕಿ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X