ಮಧ್ಯರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮುಂಡರಗಿ ಪಟ್ಟಣದ ನ್ಯೂ ಮಹಾಂತೇಶ ಬೇಕರಿ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ನಡೆದಿದೆ.
ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಮಹಾಂತೇಶ ಬೇಕರಿ ಸುಟ್ಟು ಕರಕಲಾಗಿದ್ದು, ಘಟನೆಗೆ ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡಕ್ಕೆ ನಡೆದಿದೆ ಎಂದು ಮಾಹಿತಿ ತಿಳಿದುಬಂದಿದೆ.
ಪಟ್ಟಣದ ಬಸ್ ನಿಲ್ದಾಣದ ಎದುರುಗಡೆಯಲ್ಲಿರುವ ಈ ಬೇಕರಿಯಲ್ಲಿ ರಾತ್ರಿ ಬೆಂಕಿ ಹೊತ್ತಿಕೊಂಡು ಬೆಂಕಿಯ ಕೆನ್ನಾಲಿಗೆ ಚಾಚಿದ್ದು, ಬೇಕರಿಯೊಳಗಿದ್ದ ಹಲವಾರು ತಿನಿಸು ಪದಾರ್ಥಗಳು, ಪರಿಕರಗಳು ಮತ್ತು ಇತರೆ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಹೋಗಿದ್ದು, 25 ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ.
ಈ ಸುದ್ದಿ ಓದಿದ್ದೀರಾ? ಹಾವೇರಿ | ಹಿಂಸೆಯಿಂದ ದೇಶದ ಒಗ್ಗಟ್ಟು, ಶಾಂತಿ, ಸಾಮರಸ್ಯವನ್ನು ಒಡೆದು ಹಾಕಲು ಸಾಧ್ಯವಿಲ್ಲ : ನಿತೀಶ್ ನಾರಾಯಣ್
ಸ್ಥಳಕ್ಕೆ ತಕ್ಷಣವೇ ಮುಂಡರಗಿ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾದ್ದಾರೆ. ಅವಘಡದ ಮಾಹಿತಿಯ ನಂತರ ತಹಶೀಲ್ದಾರ್ ಪಿ.ಎಸ್. ಯರ್ರಿಸ್ವಾಮಿ ಹಾಗೂ ಪುರಸಭೆ ಸದಸ್ಯರು ಸ್ಥಳಕ್ಕೆ ತಕ್ಷಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.
