ಚಿಕ್ಕಬಳ್ಳಾಪುರ | ಕಾರ್ಮಿಕ ವಿರೋಧಿ ಕಾನೂನು ವಿರೋಧಿಸಿ ಮೇ 20ರಂದು ಸಾರ್ವತ್ರಿಕ ಮುಷ್ಕರ

Date:

Advertisements

ಕೇಂದ್ರ ನರೇಂದ್ರ ಮೋದಿ ಸರಕಾರವು ಕಾರ್ಪೊರೇಟ್‌ ಮತ್ತು ಬಂಡವಾಳಶಾಹಿಗಳ ಪರ ನಿಂತಿದ್ದು, ಭೂಸ್ವಾಧೀನದ ಮೂಲಕ ರೈತರನ್ನು ಕೂಲಿಕಾರ್ಮಿಕರನ್ನಾಗಿ ಮಾಡಲು ಹೊರಟಿದೆ. ಇದನ್ನು ವಿರೋಧಿಸಿ ಮೇ 20ರಂದು ಸಾರ್ವತ್ರಿಕ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮೀ ಹೇಳಿದರು.

ಚಿಕ್ಕಬಳ್ಳಾಪುರ ನಗರದ ಅಂಬೇಡ್ಕರ್‌ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದುಡಿಯುವ ವರ್ಗಕ್ಕೆ ಮಾರಕವಾಗಿರುವ ನಾಲ್ಕು ಕಾರ್ಮಿಕ ಕಾಯಿದೆಗಳನ್ನು ಜಾರಿಗೊಳಿಸಲು ಕೇಂದ್ರ ಸರಕಾರ ಮುಂದಾಗಿದೆ. ಕಾರ್ಮಿಕ ಸಂಘಟನೆಗಳ ಬೇಡಿಕೆಗಳನ್ನು ಗಾಳಿಗೆ ತೂರಿದೆ. ದಿನಕ್ಕೆ 600 ರೂಪಾಯಿ ಕನಿಷ್ಠ ವೇತನ ನಿಗದಿ ಮಾಡಬೇಕು, ಇದಕ್ಕಿಂದ ಕಡಿಮೆ ಹಣಕ್ಕೆ ದುಡಿಸಿಕೊಳ್ಳಬಾರದು ಎಂದು ಕೋರ್ಟ್‌ ಹೇಳಿದೆ ಎಂದರು.

1948ರ ಕನಿಷ್ಠ ವೇತನ ಕಾಯಿದೆಯ ಪ್ರಕಾರ ಪ್ರತಿಯೊಬ್ಬ ಕಾರ್ಮಿಕನ ವೇತನ ಹೆಚ್ಚಳ ಆಗುತ್ತದೆ. ಆದರೆ, ಕೇಂದ್ರ ಸರಕಾರ ವೇತನ ಸಂಹಿತೆಯಡಿ 4 ಕಾನೂನುಗಳನ್ನು ಜಾರಿಗೊಳಿಸಲು ಮುಂದಾಗಿದ್ದು, ಈ ಕಾರ್ಮಿಕ ವಿರೋಧಿ ಕಾನೂನಿಗಳಿಂದ ಇನ್ನು ಮುಂದೆ ಯಾವೊಬ್ಬ ಕಾರ್ಮಿಕನ ವೇತನವೂ ಹೆಚ್ಚಳ ಆಗುವುದಿಲ್ಲ. ಕೇವಲ 187 ರೂಪಾಯಿ ಫ್ಲೋರ್‌ ವೇಜ್‌ ನಿಗದಿ ಮಾಡಿದೆ ಎಂದು ಕಳವಳ ವ್ಯಕ್ತಪಡಿಸಿದರು.

Advertisements

ದೇಶದಲ್ಲಿರುವ ಅತೀ ಹೆಚ್ಚು ಅಸಂಘಟಿತ, ಅನೌಪಚಾರಿಕ ಕಾರ್ಮಿಕರನ್ನು ಕಾರ್ಮಿಕ ಕಾನೂನಡಿಯಲ್ಲಿ ತರಬೇಕೆಂಬ ಕಾರ್ಮಿಕ ಸಂಘಟನೆಗಳ ಬೇಡಿಕೆಯನ್ನು ತಿರಸ್ಕರಿಸಿದೆ. 40 ಜನ ಕಾರ್ಮಿಕರಿದ್ದು, ವಿದ್ಯುತ್‌ ರಹಿತ ಉದ್ಯಮಗಳಲ್ಲಿರುವ ಕಾರ್ಮಿಕರು ಮತ್ತು 50 ಕ್ಕಿಂತ ಕಡಿಮೆ ಗುತ್ತಿಗೆ ಕಾರ್ಮಿಕರನ್ನು ಹೊಂದಿರುವ ಗುತ್ತಿಗೆದಾರರು ಲೈಸೆನ್ಸ್‌ ಪಡೆಯುವಂತಿಲ್ಲ. ಇದರಿಂದಾಗಿ ದೇಶದ ಶೇ.70ರಷ್ಟು ಕಾರ್ಮಿಕರಿಗೆ ಕಾರ್ಮಿಕ ಕಾನೂನುಗಳು ಅನ್ವಯಿಸುವುದಿಲ್ಲ. ಇದರಿಂದ ಕಾರ್ಮಿಕರು ನಾನಾ ಸೌಲಭ್ಯ ವಂಚಿತರಾಗುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು.

IMG20250503114340
oppo_2

ಮುಷ್ಕರ ಮಾಡುವವರಿಗೆ, ಬೆಂಬಲ ಸೂಚಿಸುವವರಿಗೆ ಜೈಲು, ದಂಡ, ಕೆಲಸದಿಂದ ತೆಗೆಯುವಂತ ಇತ್ಯಾದಿ ಕಾನೂನುಗಳನ್ನು ರೂಪಿಸಲಾಗುತ್ತಿದ್ದು, ಇದರಿಂದ ಇನ್ನು ಮುಂದೆ ಮುಷ್ಕರ ಮಾಡುವಂತಿಲ್ಲ. ಸಂಘಗಳನ್ನು ಕಟ್ಟುವಂತಿಲ್ಲ. ಇಂತಹ ಮಾರಕವಾದ ಅಂಶಗಳನ್ನು ಈ ಕಾಯಿದೆಯಲ್ಲಿ ಅಡಕಗೊಳಿಸಲಾಗಿದ್ದು, ಇದರಿಂದ ದೇಶದ 11 ಕಾರ್ಮಿಕ ಸಂಘಟನೆಗಳ ಹಕ್ಕನ್ನು ಕಸಿಯಲು ಮುಂದಾಗಿದ್ದಾರೆ ಎಂದು ಕಿಡಿಕಾರಿದರು.

ಕೆಸಲದ ಅವಧಿಯನ್ನು 8-12ಗಂಟೆವರೆಗೆ ಹೆಚ್ಚಿಸಲು ಮುಂದಾಗಿದ್ದು, 50 ಗಂಟೆ ಇದ್ದ ಓಟಿ ಸಮಯವನ್ನು 125 ಗಂಟೆಗೆ ಹೆಚ್ಚಿಸಲು ಅವಕಾಶ ನೀಡಲಾಗಿದೆ. ಇದರಿಂದ ಕಾರ್ಮಿಕದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಲಿದ್ದು, ಹೃದಯ ಸಂಬಂಧಿ ಕಾಯಿಲೆಗಳು, ಒತ್ತಡ, ಮಾನಸಿಕ ಖಿನ್ನತೆಗೆ ಒಳಗಾಗಲಿದ್ದಾರೆ. ಒಟ್ಟಾರೆಯಾಗಿ 4 ಕಾರ್ಮಿಕ ಕಾಯಿದೆಗಳ ಮೂಲಕ ಸುಮಾರು 29 ಕಾರ್ಮಿಕ ವಿರೋಧಿ ಕಾನೂನುಗಳನ್ನು ಜಾರಿಗೆ ತರಲು ಕೇಂದ್ರ ಸರಕಾರ ಮುಂದಾಗಿದ್ದು, ಇದನ್ನು ಕಾರ್ಮಿಕ ಸಂಘಟನೆಗಳು ಬಲವಾಗಿ ವಿರೋಧಿಸುತ್ತವೆ. ಅದಕ್ಕಾಗಿ ಮೇ 20 ರಂದು ಇಡೀ ದೇಶಾದ್ಯಂತ ಎಲ್ಲಾ ರಾಜ್ಯಗಳಲ್ಲಿ, ಜಿಲ್ಲೆಗಳಲ್ಲಿ, ತಾಲೂಕು ಮಟ್ಟದಲ್ಲೂ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಸಿಐಟಿಯು ಕರೆ ನೀಡಿದೆ. ಮುಷ್ಕರದಲ್ಲಿ ಲಕ್ಷಾಂತರ ಕಾರ್ಮಿಕರು ಭಾಗಿಯಾಗಲಿದ್ದಾರೆ. ಕೇಂದ್ರ ಸರಕಾರ ತಾಕತ್ತಿದ್ದರೆ ನಮ್ಮನ್ನ ಬಂಧಿಸಲಿ ಎಂದು ಸವಾಲೆಸೆದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಮಂಗಳೂರು ಹತ್ಯೆಗಳಲ್ಲಿ ಮಾಧ್ಯಮಗಳೂ ಆರೋಪಿಗಳಲ್ಲವೇ?

ಸುದ್ದಿಗೋಷ್ಠಿಯಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷೆ ಲಕ್ಷ್ಮೀದೇವಮ್ಮ, ಜಿಲ್ಲಾ ಕಾರ್ಯದರ್ಶಿ ಸಿದ್ದಗಂಗಪ್ಪ, ಸುಜಾತ, ಮಂಜುಳ, ವೆಂಕಟಲಕ್ಷ್ಮಮ್ಮ ಸೇರಿದಂತೆ ಇನ್ನಿತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X