ಜೂನ್ ಅಂತ್ಯದೊಳಗೆ 3,614 ಕಂದಾಯ ಗ್ರಾಮಗಳಿಗೆ ಅಂತಿಮ ಅಧಿಸೂಚನೆ ಹೊರಡಿಸಲು ಸಚಿವ ಕೃಷ್ಣ ಬೈರೇಗೌಡ ಸೂಚನೆ

Date:

Advertisements

ಜೂನ್ ತಿಂಗಳ ಅಂತ್ಯದೊಳಗೆ ರಾಜ್ಯದ ಎಲ್ಲ 3,614 ಕಂದಾಯ ಗ್ರಾಮಗಳಿಗೂ ಅಂತಿಮ ಅಧಿಸೂಚನೆ ಹೊರಡಿಸಬೇಕು. ಡಿಸೆಂಬರ್ ಅಂತ್ಯದೊಳಗೆ ಎಲ್ಲರಿಗೂ ಹಕ್ಕುಪತ್ರ ನೀಡುವ ಮೂಲಕ ಬಡವರ ಕೆಲಸವನ್ನು ಈ ವರ್ಷದೊಳಗೆ ಮುಗಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಗಡುವು ನಿಗದಿಗೊಳಿಸಿದ್ದಾರೆ.

ಶನಿವಾರ ವಿಕಾಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಸಭೆ ನಡೆಸಿ ಸೂಚನೆ ನೀಡಿದ ಅವರು, “ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುವ ಕಡು ಬಡವರಿಗೆ ಕಂದಾಯ ಗ್ರಾಮಗಳನ್ನು ರಚಿಸಿ ಶಾಶ್ವತ ಪರಿಹಾರ ನೀಡಬೇಕು ಎಂಬ ಉದ್ದೇಶದಿಂದಲೇ 2017 ರಲ್ಲಿ ಕಾನೂನಿಗೆ ತಿದ್ದುಪಡಿ ತರಲಾಗಿತ್ತು. ಆದರೆ ಅನುಷ್ಠಾನ ಈವರೆಗೆ ಪೂರ್ಣಗೊಳ್ಳದಿರುವುದು ದುರಾದೃಷ್ಟ. ಈ ಹಿಂದೆ ಹಲವರಿಗೆ ಹಕ್ಕುಪತ್ರ ನೀಡಿದ್ದರೂ, ಇನ್ನೂ ಆಗಬೇಕಾದ ಕೆಲಸ ಸಾಕಷ್ಟು ಬಾಕಿ ಇದೆ” ಎಂದು ವಿಷಾದಿಸಿದರು.

“ಪ್ರಸ್ತುತ ಅಂಕಿ ಅಂಶಗಳ ಪ್ರಕಾರ ರಾಜ್ಯಾದ್ಯಂತ 3,614 ಕಂದಾಯ ಗ್ರಾಮಗಳಿದ್ದು, ಈವರೆಗೆ 2600 ಕಂದಾಯ ಗ್ರಾಮಗಳಿಗೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಕಳೆದ ಸರ್ಕಾರದ ಅವಧಿಯಲ್ಲಿ 1400 ಗ್ರಾಮಗಳ ರಚನೆ ಆಗಿದ್ದರೆ, ಕಳೆದ ಎರಡು ವರ್ಷದ ಅವಧಿಯಲ್ಲಿ 1,200 ಗ್ರಾಮಗಳಿಗೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಆದರೆ, ವಾಸ್ತವದಲ್ಲಿ ಇನ್ನೂ 1014 ಗ್ರಾಮಗಳಿಗೆ ಅಂತಿಮ ಅಧಿಸೂಚನೆ ಬಾಕಿ ಇದೆ” ಎಂದರು.

Advertisements

ಮುಂದುವರೆದು ”ಕೇಂದ್ರ ಸರ್ಕಾರ ದೇಶದಾದ್ಯಂತ ಜನಗಣತಿ ಆರಂಭಿಸುವುದಾಗಿ ಘೋಷಿಸಿದೆ. ಜನಗಣತಿ ಆರಂಭವಾದರೆ ಜುಲೈ ತಿಂಗಳಿನಿಂದ ಕೇಂದ್ರ ಸರ್ಕಾರ ಯಾವುದೇ ಅಧಿಸೂಚನೆ ಹೊರಡಿಸಲು ಅವಕಾಶ ನೀಡುವುದಿಲ್ಲ. ಪರಿಣಾಮ ಬಡವರ ಅತಿಮುಖ್ಯ ಕೆಲಸಕ್ಕೆ ತೊಡಕುಂಟಾಗುವ ಸಾಧ್ಯತೆ ಇದೆ. ಹೀಗಾಗಿ ಬಾಕಿ ಇರುವ 1014 ಗ್ರಾಮಗಳಿಗೂ ಇದೇ ವರ್ಷದ ಜೂನ್ ಅಂತ್ಯದೊಳಗೆ ಅಂತಿಮ ಅಧಿಸೂಚನೆ ಹೊರಡಿಸಿ ಜುಲೈ ನಂತರ ಹಕ್ಕುಪತ್ರ ವಿತರಿಸಿ. ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿದ ಮಾತಿನಂತೆ ಈ ಕೆಲಸವನ್ನು ಈ ವರ್ಷಾಂತ್ಯದೊಳಗೆ ಮುಗಿಸಿ” ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸಮಯದ ಗಡುವು ನಿಗದಿಪಡಿಸಿದರು.

“ಈ ತಿಂಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರೈಸುತ್ತಿದೆ. ನಾಗರೀಕ ಸಮಾಜದಲ್ಲಿ ಮೂಲಭೂತ ಸೌಲಭ್ಯಗಳಿಂದ ವಂಚಿತರಾದ ಹಾಗೂ ಹಿಂದುಳಿದ ಜನ ಸಮೂಹಕ್ಕೆ ಸಹಾಯವಾಗುವ ಕೆಲಸ ಮಾಡಿ ಆ ಮೂಲಕ ಎರಡು ವರ್ಷ ಪೂರೈಸಿದ ಹರ್ಷಾಚರಣೆ ನಡೆಸಿದರೆ ಮಾತ್ರ ಆ ಕಾರ್ಯಕ್ರಮ ಅರ್ಥಪೂರ್ಣ. ಆ ನಿಟ್ಟಿನಲ್ಲಿ ಮೇ. 20ಕ್ಕೆ ಹೊಸಪೇಟೆಯಲ್ಲಿ ಕಂದಾಯ ಗ್ರಾಮಗಳ 1 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಮೂಲಕ ದಶಕಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಲು ಸರ್ಕಾರ ಮುಂದಾಗಿದೆ” ಎಂದು ತಿಳಿಸಿದರು.

ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ, ಕಂದಾಯ ಆಯುಕ್ತರಾದ ಸುನೀಲ್ ಕುಮಾರ್ ಹಾಗೂ ಭೂ ಮಾಪನಾ ಇಲಾಖೆ ಆಯುಕ್ತರಾದ ಮಂಜುನಾಥ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X