ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ: ಮೇ 10ರಂದು ಮತದಾನ, ಮೇ 13ಕ್ಕೆ ಫಲಿತಾಂಶ

Date:

Advertisements
  • ಮೇ 23ರಂದು ಪ್ರಸ್ತುತ ಸರ್ಕಾರದ ಅವಧಿ ಮುಕ್ತಾಯ
  • ರಾಜ್ಯದಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿ

ಭಾರೀ ಕುತೂಹಲ ಕೆರಳಿಸಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಅವರು ರಾಜ್ಯ ವಿಧಾನಸಭಾ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ್ದಾರೆ.

ರಾಜ್ಯದಲ್ಲಿ ಮುಕ್ತ, ನ್ಯಾಯಸಮ್ಮತ ಚುನಾವಣೆ ನಡೆಸಲು ಆಯೋಗ ಸಿದ್ಧವಿದ್ದು, ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 10ರಂದು ಚುನಾವಣೆ ನಡೆಯಲಿದ್ದು, ಮೇ 13ರಂದು ಫಲಿತಾಂಶ ಹೊರ ಬೀಳಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ವಿಜ್ಞಾನ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿ ಮಾತನಾಡಿದ ರಾಜೀವ್ ಕುಮಾರ್, “ನಾವೀಗ ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕ ಘೋಷಿಸಲು ಇಲ್ಲಿ ನೆರೆದಿದ್ದೇವೆ. ನಿಷ್ಪಕ್ಷಪಾತ ಮತ್ತು ವಿಶ್ವಾಸಾರ್ಹ ಪರೀಕ್ಷೆ ನಡೆಸುವುದು ನಮ್ಮ ಉದ್ದೇಶ. ವಿದ್ಯುನ್ಮಾನ ಯಂತ್ರಗಳ ಮೂಲಕ ಮತದಾನ ನಡೆಯಲಿದೆ” ಎಂದು ತಿಳಿಸಿದರು.

Advertisements

ಏಪ್ರಿಲ್ 20ನೇ ತಾರೀಕು ನಾಮಪತ್ರ ಸಲ್ಲಿಕೆಯ ಕೊನೆಯ ದಿನಾಂಕ, ಏ.13ರಂದು ಅಧಿಸೂಚನೆ ಪ್ರಕಟ, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭ. ನಾಮಪತ್ರ ಸಲ್ಲಿಸಲು ಕೊನೆಯ ದಿನ ಏ. 20, ನಾಮಪತ್ರ ಪರಿಶೀಲನೆ ಏ.21, ನಾಮಪತ್ರ ವಾಪಾಸು ಪಡೆಯಲು ಏ.24 ಕೊನೆಯ ದಿನವಾಗಿದೆ ಎಂದು ಹೇಳಿದರು.WhatsApp Image 2023 03 29 at 12.28.09 PM

“ಈ ಭಾರಿ ಒಟ್ಟು 5,21,73,579 ಮತದಾರರು ಮತ ಚಲಾಯಿಸಲಿದ್ದಾರೆ. ಆ ಪೈಕಿ 2,26,42,561 ಪುರುಷರಿದ್ದರೆ, 2,59,26,319 ಮಹಿಳೆಯರಿದ್ದಾರೆ ಹಾಗೂ 4,699 ಲಿಂಗತ್ವ ಅಲ್ಪಸಂಖ್ಯಾತ ಮತದಾರರಿದ್ದಾರೆ. 12.15 ಲಕ್ಷ ಯುವ ಮತದಾರರಿದ್ದಾರೆ” ಎಂದು ತಿಳಿಸಿದರು.

“ಒಟ್ಟು 9.17 ಲಕ್ಷ ಮತದಾರರು ಮೊದಲ ಬಾರಿಗೆ ಮತ ಚಲಾಯಿಸಲಿದ್ದಾರೆ. 80 ವರ್ಷ ಮೇಲ್ಪಟ್ಟವರು ಹಾಗೂ ವಿಕಲಚೇತನರಿಗೆ ದೇಶದಲ್ಲಿಯೇ ಮೊದಲ ಬಾರಿಗೆ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮನೆಯಿಂದಲೇ ಮತ ಚಲಾಯಿಸುವ ಅವಕಾಶ ಕಲ್ಪಿಸಲಾಗಿದೆ” ಎಂದು ರಾಜೀವ್ ಕುಮಾರ್ ತಿಳಿಸಿದರು.

“ರಾಜ್ಯದಲ್ಲಿ ಒಟ್ಟು 58,282 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗುವುದು. ಈ ಪೈಕಿ 24,063 ಮತಗಟ್ಟೆಗಳು ನಗರ ಪ್ರದೇಶಗಳಲ್ಲಿದ್ದು, ಗ್ರಾಮೀಣ ಭಾಗದಲ್ಲಿ 34,219 ಮತಗಟ್ಟೆಗಳು ಇರಲಿವೆ. ಜೇನು ಕುರುಬ, ಕಾಡು ಕುರುಬ ಮತ್ತು ಸೋಲಿಗ ಸಮುದಾಯಗಳು ತಮ್ಮ ಊರುಗಳಿಂದಲೇ ಮತ ಚಲಾಯಿಸುವಂತೆ ವ್ಯವಸ್ಥೆ ಮಾಡುತ್ತೇವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚುನಾವಣಾ ದಿನಾಂಕ ಪ್ರಕಟ ಹಿನ್ನೆಲೆ ಸಿಎಂ ಬೊಮ್ಮಾಯಿ ಸರ್ಕಾರಿ ಕಾರ್ಯಕ್ರಮಗಳು ರದ್ದು

12,000 ಸೂಕ್ಷ್ಮ ಮತಗಟ್ಟೆಗಳೆಂದು ನಿರ್ಧರಿಸಲಾಗಿದ್ದು, 1,320 ಮತಗಟ್ಟೆಗಳನ್ನು ಮಹಿಳಾ ಸಿಬ್ಬಂದಿವರ್ಗ ನಿರ್ವಹಣೆ ಮಾಡಿದರೆ, 226 ಮತಗಟ್ಟೆಗಳನ್ನು ಯುವಕರು ನಿರ್ವಹಿಸಲಿದ್ದಾರೆ. ಬೆಂಗಳೂರು ನಗರವನ್ನು ಸಿಲಿಕಾನ್ ಸಿಟಿ ಎಂದು ಕರೆಯಲಾಗುತ್ತದೆ. ಕಳೆದ ಬಾರಿ ಈ ನಗರದಲ್ಲಿ ಕಡಿಮೆ ಮತದಾತ- 53% ಆಗಿತ್ತು. ಈ ಬಾರಿ ಮತದಾನ ಉತ್ತೇಜಿಸಲು ಪ್ರಯತ್ನಿಸುತ್ತಿದ್ದೇವೆ. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಮಾಹಿತಿ, ಪ್ರಮಾಣಪತ್ರ ಚುನಾವಣಾ ವೆಬ್ ಸೈಟಿನಲ್ಲಿ ಲಭ್ಯವಾಗಲಿದೆ” ಎಂದು ಹೇಳಿದರು.

“ರಾಜ್ಯದ 19 ಜಿಲ್ಲೆಗಳಲ್ಲಿ 171 ಚೆಕ್‌ಪೋಸ್ಟ್‌ ನಿರ್ಮಿಸಲಾಗುವುದು. ಅಕ್ರಮಗಳ ಮೇಲೆ ಕಣ್ಣಿಡಲು ಪೊಲೀಸರು, ಅರಣ್ಯ, ಅಬಕಾರಿ ಅಧಿಕಾರಿಗಳು ಹಾಗೂ ಚುನಾವಣಾ ಆಯೋಗ ಸಿದ್ಧವಿದೆ. ಇಡಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಹಣದ ವರ್ಗಾವಣೆ ಮೇಲೆ ಕಣ್ಣಿಡಲಿದ್ದಾರೆ. ಚುನಾವಣಾ ಕೆಲಸಕ್ಕಾಗಿ 2,400 ವಿಶೇಷ ವೀಕ್ಷಕರನ್ನು ನೇಮಿಸಲಾಗುತ್ತದೆ. ಚುನಾವಣಾ ಅಕ್ರಮ ತಡೆಯಲು 2,016 ಫ್ಲೈಯಿಂಗ್ ಸ್ಕ್ವಾಡ್ ಗಳನ್ನು ರಚನೆ ಮಾಡಲಾಗುತ್ತದೆ” ಎಂದು ಹೇಳಿದರು.

ಈ ಬಗ್ಗೆ ತುರ್ತು ಆದೇಶ ಹೊರಡಿಸಿರುವ ಚುನಾವಣಾ ಆಯೋಗ ಎಲ್ಲ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಿಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸೂಚಿಸಿದೆ.

ಮೇ 23ರಂದು ಪ್ರಸ್ತುತ ಸರ್ಕಾರದ ಅವಧಿ ಮುಗಿಯುವುದರಿಂದ ಅದರೊಳಗೆ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುವಂತೆ ಚುನಾವಣೆ ನಡೆಸಬೇಕಾಗಿದ್ದು, ಅದಕ್ಕೆ ಅಗತ್ಯ ಸಿದ್ಧತೆಯನ್ನು ಚುನಾವಣಾ ಆಯೋಗ ನಡೆಸುತ್ತಿದೆ.

ಚುನಾವಣೆ ಘೋಷಣೆಯಾಗುತ್ತಿದ್ದಂತೆ ಇಂದಿನಿಂದಲೇ ನೀತಿಸಂಹಿತೆ ಜಾರಿಗೆ ತರುವ ಉದ್ದೇಶದಿಂದ ವಿಧಾನಸಭಾ ಕ್ಷೇತ್ರವಾರು ಮಾದರಿ ನೀತಿ ಸಂಹಿತೆ ಜಾರಿಗೊಳಿಸಲು ಹಾಗೂ ನೀತಿ ಸಂಹಿತೆ ಉಲ್ಲಂಘನೆಯ ಬಗ್ಗೆ ನಿಗಾವಹಿಸಲು ತಂಡವನ್ನು ರಚಿಸಲಾಗಿದೆ. ತಂಡಕ್ಕೆ ಅಗತ್ಯವಿರುವ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. ಇನ್ನು ಚುನಾವಣಾ ಕಾರ್ಯಗಳಿಗೆ ಈಗಾಗಲೇ ವಿಧಾನಸಭಾ ಕ್ಷೇತ್ರವಾರು ಚುನಾವಣಾಧಿಕಾರಿಗಳನ್ನು ಕೂಡ ನಿಯೋಜನೆ ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X