ತುಮಕೂರು | ಮಳೆಗಾಲದಲ್ಲಿ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

Date:

Advertisements

ತುಮಕೂರು ಜಿಲ್ಲೆಯಲ್ಲಿ ವಿದ್ಯುತ್ ಶಾಕ್‌ನಿಂದಾಗಿ ನಾಲ್ವರ ಪ್ರಾಣ ಹಾನಿಯಾಗಿರುವ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ಅಗತ್ಯ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಇಂತಹ ಪ್ರಕರಣಗಳು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕೆಂದು ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. 

ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಿಕ ಸಭಾಂಗಣದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತೀವ್ರ ಗಾಳಿ-ಮಳೆಯಿಂದ ಜಿಲ್ಲೆಯಲ್ಲಿ ಸುಮಾರು 560 ವಿದ್ಯುತ್ ಕಂಬಗಳು ಬಿದ್ದಿದ್ದು, ತಕ್ಷಣವೇ ಹಾನಿಗೊಳಗಾದ ಕಂಬಗಳನ್ನು ಬದಲಾಯಿಸುವಂತೆ ಸೂಚನೆ ಬೆಸ್ಕಾಂ ಅಧಿಕಾರಿಗಳಿಗೆ ನೀಡಲಾಗಿದೆ. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ವಿದ್ಯುತ್ ಕಂಬಗಳು ಹಾನಿಯಾದಲ್ಲಿ ಬೆಸ್ಕಾಂಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ ಎಂದು ತಿಳಿಸಿದರು. 

ಜಿಲ್ಲೆಯಲ್ಲಿ 30 ರಿಂದ 40 ಮಿ.ಮೀ. ಮಳೆಯ ಸಾಧ್ಯತೆ ಇರುವುದರಿಂದ ಮುಂದಿನ 2 ದಿನಗಳ ಕಾಲ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆ ಸಂದರ್ಭದಲ್ಲಿ ಅತ್ಯಾವಶ್ಯಕ ಸಂದರ್ಭ ಹೊರತುಪಡಿಸಿ ದೂರ ಪ್ರಯಾಣ ಮಾಡದೆ ಮನೆಯಲ್ಲೇ ಇರುವಂತೆ ಜಿಲ್ಲಾಧಿಕಾರಿ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ. ಮುಖ್ಯವಾಗಿ ಮಕ್ಕಳ ಮತ್ತು ರೈತರ ಸುರಕ್ಷತೆಗೆ ವಿಶೇಷ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು. 

Advertisements

ಪ್ರಸಕ್ತ ಜನವರಿ 1 ರಿಂದ ಮೇ 1ರವರೆಗೆ 50 ಮಿ.ಮೀ. ಮಳೆಯ ನಿರೀಕ್ಷೆ ಹೊಂದಲಾಗಿತ್ತು. ಈಗಾಗಲೇ ಜಿಲ್ಲೆಯಲ್ಲಿ 100 ಮಿ.ಮೀ. ಮಳೆಯಾಗಿದ್ದು, ಕಳೆದ ಒಂದು ವಾರದಲ್ಲಿಯೇ 30 ಮಿ.ಮೀ. ಮಳೆಯಾಗಿರುವ ಬಗ್ಗೆ ದಾಖಲಾಗಿದೆ. ತಾಲೂಕುವಾರು ಮಳೆ ವಿವರಗಳ ವರದಿ ಪ್ರಕಾರ ಕೊರಟಗೆರೆ ತಾಲ್ಲೂಕು ಹೊರತುಪಡಿಸಿ ಜಿಲ್ಲೆಯ ಉಳಿದ ಎಲ್ಲಾ ತಾಲೂಕುಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ ಎಂದು ತಿಳಿಸಿದರು. 

ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ತಕ್ಷಣವೇ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ. ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ವರದಿಯನುಸಾರ ಮಳೆಯಿಂದ 6 ಎಕರೆ ಪ್ರದೇಶದಲ್ಲಿ ಅಡಿಕೆ, ತೆಂಗು ಬೆಳೆ ಹಾನಿ ಹಾಗೂ 2 ಜಾನುವಾರುಗಳ ಪ್ರಾಣ ಹಾನಿಯಾಗಿದ್ದು, ಸರ್ಕಾರ ನಿಗಧಿಪಡಿಸಿದಂತೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. 

ಮಳೆಯಿಂದ ಉಂಟಾಗಬಹುದಾದ ಹಾನಿಗಳಿಗೆ ಶೀಘ್ರವೇ ಪರಿಹಾರ ಒದಗಿಸುವ ಸಲುವಾಗಿ ಸ್ಥಳೀಯ ಕಂದಾಯ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿಯೇ ಇರಬೇಕು. ಮಳೆ ಹಾನಿ ವಿವರಗಳನ್ನು ತಕ್ಷಣವೇ ಅಂದಾಜಿಸಿ ಪರಿಹಾರ ಪೋರ್ಟಲ್‌ನಲ್ಲಿ ದಾಖಲಿಸಬೇಕು ಎಂದು ತಿಳಿಸಿದರು. 

ಜಿಲ್ಲೆಯಲ್ಲಿ ಮುಂದಿನ 2 ದಿನಗಳಲ್ಲಿ ಅಧಿಕ ಮಳೆಯಾಗುವ ಸಾಧ್ಯತೆಯಿದ್ದು, ಕೆರೆ ಸುತ್ತ-ಮುತ್ತ ಹಾಗೂ ತಗ್ಗು ಪ್ರದೇಶಗಳಲ್ಲಿ ವಾಸವಿರುವವರು ಸುರಕ್ಷಿತ ಸ್ಥಳಕ್ಕೆ ತೆರಳಬೇಕೆಂದು ಮನವಿ ಮಾಡಲಾಗಿದೆ ಎಂದು ತಿಳಿಸಿದರು. 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X