ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಲಿಂಗಸುಗೂರು ತಾಲ್ಲೂಕು ಮುದಗಲ್ ಪಟ್ಟಣದ ವ್ಯಾಪ್ತಿಯ ಆಶಿಹಾಳ ಗ್ರಾಮದಲ್ಲಿ ನಡೆದಿದೆ.
ಅಯ್ಯಪ್ಪ ಬಳ್ಳಾರಿ (55) ಆತ್ಮಹತ್ಯೆ ಶರಣಾದ ರೈತ.ಸಹಕಾರಿ ಸಂಘದಲ್ಲಿ ಟ್ರ್ಯಾಕ್ಟರ್ ಖರೀದಿಗಾಗಿ ಆರೇಳು ಲಕ್ಷ್ಯ ಹಾಗೂ ಖಾಸಗಿ ಬ್ಯಾಂಕ್ ನಲ್ಲಿ ಎಂಟು ಲಕ್ಷ್ಯ ಸಾಲ ಮಾಡಿದ್ದ ಎನ್ನಲಾಗಿದೆ.ವರ್ಷದಿಂದ ವರ್ಷಕ್ಕೆ ಸಾಲದ ಬಡ್ಡಿ ಹೆಚ್ಚಾಗುತ್ತಿತ್ತು ಇದನ್ನು ಆತಂಕಗೊಂಡು ಗ್ರಾಮದ ಹೊರವಲಯದಲ್ಲಿ ಬೇವಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಸ್ಥಳೀಯ ಕಾಂಗ್ರೆಸ್ ಮುಖಂಡರಿಗೆ ಮಾಹಿತಿ ಇಲ್ಲದೆ ತಾಲ್ಲೂಕಿಗೆ ಆಗಮಿಸಿದ್ದಕ್ಕೆ ಉಸ್ತುವಾರಿ ಸಚಿವರಿಗೆ ಕಾರ್ಯಕರ್ತನಿಂದ ತರಾಟೆ
ಸ್ಥಳಕ್ಕೆ ಪೊಲೀಸರು ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ರೈತನನ್ನು ಕಳೆದುಕೊಂಡ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದ್ದು ಸೂಕ್ತ ಪರಿಹಾರ ಕಲ್ಪಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
