ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಮೌಲಾನ ಎನ್.ಕೆ.ಮುಹಮ್ಮದ್ ಶಾಫಿ ಸಅದಿ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಸರ್ಕಾರವು ಜು.5ರಂದು ಅಂಗೀಕರಿಸಿರುವುದಾಗಿ ತಿಳಿದುಬಂದಿದೆ.
ಈ ಬಗ್ಗೆ ಈದಿನ.ಕಾಮ್ ವಕ್ಫ್ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಖಾನ್ ಪರ್ವೇಝ್ ಅವರನ್ನು ಸಂಪರ್ಕಿಸಿದಾಗ, “ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನಕ್ಕೆ ಶಾಫಿ ಸಅದಿ ಸಲ್ಲಿಸಿದ್ದ ರಾಜೀನಾಮೆಯನ್ನು ಜು.5ರಿಂದ ಕೂಡಲೇ ಜಾರಿಗೆ ಬರುವಂತೆ ಸರ್ಕಾರ ಅಂಗೀಕರಿಸಿದೆ. ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ಶೀಘ್ರದಲ್ಲೇ ವಕ್ಫ್ ಬೋರ್ಡಿನ ನಿಯಮದಂತೆ ನಡೆಯಲಿದೆ” ಎಂದು ತಿಳಿಸಿದ್ದಾರೆ.
ನೂತನ ಅಧ್ಯಕ್ಷರಾಗಿ ವಕ್ಫ್ ಬೋರ್ಡ್ ಮಂಡಳಿಯ ಸದಸ್ಯ ಅನ್ವರ್ ಚಿತ್ರದುರ್ಗ ನೇಮಕವಾಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. ಈ ಬಗ್ಗೆ ಪ್ರಶ್ನಿಸಿದಾಗ ಬಗ್ಗೆ ‘ದೃಢಪಟ್ಟಿಲ್ಲ’ ಎಂದು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಸ್ಪೀಕರ್ ಯು ಟಿ ಖಾದರ್ ಬಗ್ಗೆ ‘ಹಂದಿ’ ಪದ ಬಳಸಿ ನಿಂದನೆ : ಕ್ರಮ ಕೈಗೊಳ್ಳುವುದೇ ಸರ್ಕಾರ?
ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಡಳಿಗಳಿಗೆ ನಾಮನಿರ್ದೇಶನಗೊಂಡಿದ್ದ ಸದಸ್ಯರನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜೀನಾಮೆ ನೀಡಲು ಅಧಿಕಾರಕ್ಕೆ ಬಂದ ಹೊಸತರಲ್ಲಿ ಕಾಂಗ್ರೆಸ್ ಸರ್ಕಾರ ಸೂಚಿಸಿತ್ತು. ಆದರೆ, ವಕ್ಫ್ ಮಂಡಳಿಗೆ ಸಂಬಂಧಿಸಿ ಎರಡೇ ದಿನದಲ್ಲಿ ಈ ಆದೇಶವನ್ನು ಸರ್ಕಾರ ಹಿಂಪಡೆದಿತ್ತು.

ಮೊದಲು ಅಧ್ಯಕ್ಷ ಮೌಲಾನ ಎನ್.ಕೆ.ಮುಹಮ್ಮದ್ ಶಾಫಿ ಸಅದಿ ಸೇರಿದಂತೆ ನಾಲ್ವರು ಸದಸ್ಯರ ನಾಮನಿರ್ದೇಶನವನ್ನು ರದ್ದುಪಡಿಸಿ ಆದೇಶ ಹೊರಡಿಸಿತ್ತು. ಬಳಿಕ ಹಿಂಪಡೆದದ್ದು, ರಾಜ್ಯ ರಾಜಕಾರಣದಲ್ಲಿ ಸುದ್ದಿಯಾಗಿತ್ತು.