ಮಂಗಳೂರಿನ ಬಜಪೆ ಬಳಿ ಹತ್ಯೆಯಾದ ಸುಹಾಸ್ ಶೆಟ್ಟಿ ಮೇಲೆ ಕೊಲೆ ಸೇರಿದಂತೆ ಐದು ಪ್ರಕರಣಗಳಿವೆ. ಹೀಗಾಗಿ, ನಾವು ಅವರ ಮನೆಗೆ ಭೇಟಿ ಕೊಟ್ಟಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ.
ಸುಹಾಸ್ ಶೆಟ್ಟಿ ಕುಟುಂಬಕ್ಕೆ ಸರ್ಕಾರದಿಂದ ಭೇಟಿ ನೀಡಿ ಯಾರೂ ಸಾಂತ್ವನ ಹೇಳದ ವಿಚಾರವಾಗಿ ಮಾತನಾಡಿದ ಅವರು, ಇದು ಒಂದು ಕೊಲೆ ಪ್ರಕರಣ. ಸುಹಾಸ್ ಶೆಟ್ಟಿ ಮೇಲೆ ಕೊಲೆ ಸೇರಿ ಐದು ಪ್ರಕರಣಗಳು ಅವರ ಮೇಲಿವೆ. ಹಾಗಾಗಿ, ನಾವು ಭೇಟಿ ಕೊಟ್ಟಿಲ್ಲ. ಆದರೆ, ಸುಹಾಸ್ ಶೆಟ್ಟಿ ಮನೆಗೆ ನ್ಯಾಯ ಕೊಡಿಸುವ ಕೆಲಸ ಸರ್ಕಾರ ಮಾಡಲಿದೆ ಎಂದು ಸ್ಪಷ್ಟಪಡಿಸಿದರು.
ಹಿಂದೂ ಕಾರ್ಯರ್ಕನ ಕೊಲೆ ಪ್ರಕರಣದಲ್ಲಿ ಬಂಧಿತರು ನಿಜವಾದ ಆರೋಪಿಗಳಾ ಎಂಬ ಅನುಮಾನ ವ್ಯಕ್ತವಾಗುತ್ತಿರುವ ಕುರಿತು ಪ್ರತಿಕ್ರಿಯಿಸಿ, ಯಾರನ್ನೋ ಆರೋಪಿ ಅಂತ ಹೇಳಲು ಆಗುತ್ತಾ? ಕೊಲೆ ಪ್ರಕರಣದಲ್ಲಿ ಯರ‍್ಯಾರನ್ನೋ ಬಂಧಿಸಲು ಆಗಲ್ಲ ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಂಗಳೂರು ಹತ್ಯೆಗಳಲ್ಲಿ ಮಾಧ್ಯಮಗಳೂ ಆರೋಪಿಗಳಲ್ಲವೇ?
ನಿನ್ನೆ ಮುಸ್ಲಿಂ ಸಮುದಾಯದ ಪ್ರಮುಖರು ಅವರಾಗಿಯೆ ಬಂದು ನನ್ನ ಭೇಟಿ ಮಾಡಿದರು. ಬರೋರಿಗೆ ಬೇಡ ಅನ್ನಲಿಕ್ಕೆ ಆಗುತ್ತದೆಯೆ? ಬೇರೆ ಸಮುದಾಯದವರೂ ಬರಬಹುದಿತ್ತು. ಯಾರೂ ಬರಲಿಲ್ಲ ಎಂದರು.
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್‌ಐಎ ತನಿಖೆಗೆ ವಹಿಸಲು ಬಿಜೆಪಿ ಒತ್ತಾಯದ ಬಗ್ಗೆ ಮಾತನಾಡಿ, ಅದು ಬಿಜೆಪಿಯವರ ಅಭಿಪ್ರಾಯ. ನಮ್ಮ ಪೊಲೀಸ್ ಇಲಾಖೆ ಸಮರ್ಥವಾಗಿ ಕೆಲಸ ಮಾಡುತ್ತಿದೆ. ಎಂಟು ಮಂದಿಯನ್ನು ಪ್ರಕರಣದಲ್ಲಿ ಬಂಧಿಸಲಾಗಿದೆ. ತನಿಖೆ ಚೆನ್ನಾಗಿ ನಡೆಯುತ್ತಿದೆ ಎಂಬುದು ನಮ್ಮ ಅಭಿಪ್ರಾಯ. ಹಾಗಾಗಿ, ಈ ಪ್ರಕರಣ ಎನ್‌ಐಎಗೆ ಕೊಟ್ಟಿಲ್ಲ. ಆ ಕುಟುಂಬಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡ್ತೇವೆ. ಬಿಜೆಪಿ ಆರೋಪ ಸರಿಯಲ್ಲ, ಬಿಜೆಪಿಯವರ ಕಾಲದಲ್ಲೂ ಕೊಲೆಗಳು ಆಗಿವೆ ಎಂದು ಹೇಳಿದರು.
ನಾವು ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಕೊಲೆ ಆಗುತ್ತೆ ಎಂದು ಸುಳಿವು ದೊರೆತರೂ ಎಚ್ಚರಿಸಿ ತಡೆಯುವ ಕೆಲಸ ಆಗುತ್ತಿದೆ. ಕೊಲೆ ನಂತರವೂ ಆರೋಪಿಗಳನ್ನು ಬಂಧಿಸಲಾಗುತ್ತಿದೆ. ಎಲ್ಲ ಎಚ್ಚರಿಕೆಗಳನ್ನೂ, ಸೂಚನೆಗಳನ್ನು ಎಸ್ಪಿಗಳಿಗೆ ಕೊಟ್ಟಿದ್ದೇವೆ ಎಂದರು.
It is a shame for the people of karnataka that we have such HM.
ಸಂಟ ಬಿಳಿಮಗ್ನೇ ನಿನ್ನ್ ದೂಡ್ ಬೇವರ್ಸಿ.. ಇದೇಲ್ಲೆ ನಿಂದ್ ಭೋಜ್ಜದ್ ಅಧಿಕ ಪ್ರಸಂಗ