ಮಂಡ್ಯ | ರಾಷ್ಟ್ರಮಟ್ಟದ ಬಾಲಕಿಯರ 39ನೇ ಹ್ಯಾಂಡ್ ಬಾಲ್ ಕ್ರೀಡಾಕೂಟ; ಕರ್ನಾಟಕಕ್ಕೆ ದ್ವಿತೀಯ ಸ್ಥಾನ

Date:

Advertisements

ಬಾಲಕಿಯರ ರಾಷ್ಟ್ರಮಟ್ಟದ 39ನೇ ಹ್ಯಾಂಡ್ ಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕ ದ್ವಿತೀಯ ಸ್ಥಾನ ಪಡೆದುಕೊಂಡಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಕಳೆದ ಐದು ದಿನಗಳಿಂದ ನಡೆದ ಬಾಲಕಿಯರ ರಾಷ್ಟ್ರಮಟ್ಟದ 39ನೇ ಹ್ಯಾಂಡ್ ಬಾಲ್ ಕ್ರೀಡಾಕೂಟದಲ್ಲಿ ಗುಜರಾತ್‌ಗೆ ಪ್ರಥಮ ಸ್ಥಾನ, ಕರ್ನಾಟಕಕ್ಕೆ ದ್ವಿತೀಯ ಸ್ಥಾನ ಹಾಗೂ ಉತ್ತರ ಪ್ರದೇಶ ಹಾಗೂ ಯಶಸ್ವಿ ಅಕಾಡೆಮಿ ತೃತೀಯ ಸ್ಥಾನ ಪಡೆದುಕೊಂಡಿವೆ.

ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಹ್ಯಾಂಡ್ ಬಾಲ್ ಅಸೋಸಿಯೇಷನ್ ಇಂಡಿಯಾದ ಪ್ರಧಾನ ಕಾರ್ಯದರ್ಶಿ ಆನಂದೇಶ್ವರ ಪಾಂಡೆ, ಕರ್ನಾಟಕ ಹ್ಯಾಂಡ್ ಬಾಲ್ ಅಸೋಸಿಯನ್ ಡಾ. ಮನೋಜ್ ಪಿ ಸಾಹುಕಾರ್, ಪ್ರಧಾನ ಕಾರ್ಯದರ್ಶಿ ಬಿ ಎಲ್ ಲೋಕೇಶ್, ಖಜಾಂಚಿ ಪ್ರಕಾಶ್ ನರಗಟ್ಟಿ, ಹಿರಿಯ ಗಾಂಧಿವಾದಿ ಡಾ. ಬಿ ಸುಜಯ್ ಕುಮಾರ್ ಶ್ರೀರಂಗಪಟ್ಟಣ, ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್‌ ಶಿವಲಿಂಗ ದಳವಾಯಿ, ಮಂಡ್ಯ ಹ್ಯಾಂಡ್ ಬಾಲ್ ಅಸೋಸಿಯೇಷನ್ ಅಧ್ಯಕ್ಷ ಮಂಜುರಾಮ್‌, ಪುಟ್ಟೇಗೌಡ, ಪ್ರಧಾನ ಕಾರ್ಯದರ್ಶಿ ಹಾಗೂ ಕ್ರೀಡಾ ಸಂಘಟನಾಕಾರ ಡಾ. ರಾಘವೇಂದ್ರ ಸೇರಿದಂತೆ ಹಲವಾರು ಗಣ್ಯರು ಸೇರಿ ಬಹುಮಾನ ವಿತರಣಾ ಕಾರ್ಯಕ್ರಮ ನೆರವೇರಿಸಿದರು.‌

Advertisements
ಹ್ಯಾಂಡ್‌ ಬಾಲ್‌ ಕ್ರೀಡಾಕೂಟ 1

ಈ ಕ್ರೀಡಾಕೂಟಕ್ಕೆ ದೇಶದ 24 ರಾಜ್ಯಗಳು ಭಾಗವಹಿಸಿದ್ದವು. ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಹ್ಯಾಂಡ್ ಬಾಲ್ ಅಸೋಸಿಯೇಷನ್‌ನ ಎಲ್ಲ ಪದಾಧಿಕಾರಿಗಳು, ಮಂಡ್ಯ ಜಿಲ್ಲಾ ಹ್ಯಾಂಡ್ ಬಾಲ್ ಅಸೋಸಿಯೇಷನ್ ಪದಾಧಿಕಾರಿಗಳು,
ಪರಿವರ್ತನಾ ಶಾಲಾ ಕಾಲೇಜಿನ ಸಿಬ್ಬಂದಿಗಳು, ಶೇಷಾದ್ರಿಪುರಂ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಅಚಿವ ಅಕಾಡೆಮಿ ವಿದ್ಯಾರ್ಥಿಗಳು ಭಾಗವಹಿಸಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಜಾತಿಗಣತಿಯಲ್ಲಿ ಪರಿಶಿಷ್ಟ ಜಾತಿಯೆಂದು ಸ್ಪಷ್ಟವಾಗಿ ದಾಖಲಿಸಬೇಕು: ಶಿವಕುಮಾರ್ ಮನವಿ

ಕ್ರೀಡಾಕೂಟದಲ್ಲಿ ಚಂದ್ರನಾಗ್, ರಾಜೇಶ್ ದೀಪಕ್, ದೇವರಾಜ್ ರುಕ್ಮಾಂದ, ನಾಗೇಂದ್ರ, ಅನನ್ಯ, ಗುರುಪ್ರಸಾದ್ ಸೇರಿದಂತೆ ಇನ್ನು ಮುಂತಾದವರು ಇದ್ದರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಭಾರತದಲ್ಲಿ ಪ್ರಜಾಪ್ರಭುತ್ವದ ಅಧಪತನ – ಶ್ಯಾಮರಾಜ್ ಬಿರ್ತಿ

ಭಾರತದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಲ್ಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ವೂ ಶ್ರೇಣಿಕೃತ ವ್ಯವಸ್ಥೆಯಲ್ಲಿದೆ....

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

Download Eedina App Android / iOS

X