ಕೋಮು ಪ್ರಚೋದನಾತ್ಮಕ ವೀಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪದ ಮೇಲೆ ಬೆಳ್ತಂಗಡಿಯ ಯುವಕನ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ನಿವಾಸಿ ಧನುಷ್ ಸಿ. ಪಕ್ಕಳ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.
ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಧನುಷ್ ಪ್ರಚೋದನಾಕಾರಿ ವಿಡಿಯೋ ಹರಿಬಿಟ್ಟಿದ್ಧಾನೆ. ಆತನ ವಿಡಿಯೋ, ಸಮುದಾಯಗಳ ನಡುವೆ ಕೋಮುದ್ವೇಷ ಉಂಟುಮಾಡುತ್ತದೆ, ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟುಮಾಡುತ್ತದೆ ಎಂದು ಆರೋಪಿಸಲಾಗಿದೆ.
ಧನುಷ್ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಬಿಎನ್‌ಎಸ್ ಸೆಕ್ಷನ್ 196(1) (A), 353(1)(C) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.