ತನ್ನೊಂದಿಗೆ ಮಾತನಾಡುವುದನ್ನು ನಿಲ್ಲಿಸಿದ ಕಾರಣಕ್ಕೆ 17 ವರ್ಷದ ಸಹಪಾಠಿ ಬಾಲಕಿಯನ್ನು ಬಾಲಕನೋರ್ವ ಕೊಂದ ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದಿದೆ.
ಧಾರ್ ಜಿಲ್ಲಾ ಕೇಂದ್ರದಿಂದ ಸುಮಾರು 70 ಕಿ.ಮೀ ದೂರದಲ್ಲಿರುವ ಉಮರ್ಬನ್ ಪೊಲೀಸ್ ಠಾಣೆ ವ್ಯಾಪ್ತಿಯ ಹೊಲದಲ್ಲಿ ಶನಿವಾರ 12ನೇ ತರಗತಿಯ (ದ್ವಿತೀಯ ಪಿಯುಸಿ) ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಜಗಳದ ವೇಳೆ 4ನೇ ತರಗತಿ ವಿದ್ಯಾರ್ಥಿಗೆ 108 ಬಾರಿ ಕೈವಾರದಿಂದ ಚುಚ್ಚಿದ ಸಹಪಾಠಿಗಳು
ಈ ಬಗ್ಗೆ ಮಾಹಿತಿ ನೀಡಿದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗೀತೇಶ್ ಗರ್ಗ್, ಬಾಲಕಿ ಕೊಲೆಯ ಬಗ್ಗೆ ಮಾಹಿತಿ ತಿಳಿದ ಬಳಿಕ ತನಿಖೆಯನ್ನು ಆರಂಭಿಸಲಾಗಿದೆ. ತನಿಖೆ ವೇಳೆ ಸಹಪಾಠಿಯೊಬ್ಬ ಬಾಲಕಿಗೆ ಕಿರುಕುಳ ನೀಡುತ್ತಿದ್ದ ಎಂಬ ಮಾಹಿತಿ ಸಿಕ್ಕಿದೆ ಎಂದು ಹೇಳಿದ್ದಾರೆ.
ವಿಚಾರಣೆಯ ವೇಳೆ ಆರೋಪಿ ಬಾಲಕ ಬಾಲಕಿಯನ್ನು ಕೊಂದಿದ್ದಾಗಿ ಒಪ್ಪಿಕೊಂಡಿದ್ದಾನೆ. ಅವಳು ತನ್ನೊಂದಿಗೆ ಮಾತನಾಡುವುದನ್ನು ನಿಲ್ಲಿಸಿದ ಕಾರಣ ನನಗೆ ಬೇಸರವಾಯಿತು, ಸಿಟ್ಟು ಬಂದಿತ್ತು. ಅದಕ್ಕೆ ಕೊಂದೆ ಎಂದು ಅವನು ಪೊಲೀಸರಿಗೆ ತಿಳಿಸಿದ್ದಾನೆ ಎಂದು ವರದಿಯಾಗಿದೆ.
ಶುಕ್ರವಾರ ರಾತ್ರಿ ಕೃಷಿ ಹೊಲದಲ್ಲಿ ತನ್ನನ್ನು ಭೇಟಿಯಾಗುವಂತೆ ಆರೋಪಿಯು ಬಾಲಕಿಗೆ ಹೇಳಿದ್ದಾನೆ. ಅಲ್ಲಿ ಹರಿತವಾದ ಆಯುಧದಿಂದ ಆಕೆಯನ್ನು ಕೊಂದಿದ್ದಾನೆ ಎಂದು ಹೇಳಲಾಗಿದೆ. ಸಾಕ್ಷ್ಯಗಳ ಆಧಾರದ ಮೇಲೆ ಮುಂದಿನ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇವನ ಕ್ರೂರತೆ ಉಗ್ರತೆಗೆೇನು ಹೊರತಲ್ಲ. ಇಂತಹವರಿಗೆ ಶೀಘ್ರವಾಗಿ ಉಗ್ರ ಶಿಕ್ಷೆಯನ್ನು ವಿಧಿಸುವವರಿಗೆ ನಮ್ಮ ಪ್ರಾರ್ಥನೆ