ಕೊಪ್ಪಳ | ಕಾರ್ಖಾನೆ ವಿಸ್ತರಣೆ ವಿರೋಧಿಸಿ ಮತ್ತೊಂದು ಹೋರಾಟಕ್ಕೆ ಸಜ್ಜಾದ ಜಿಲ್ಲಾ ಬಚಾವೋ ಆಂದೋಲನ

Date:

Advertisements

ಬಲ್ಡೋಟಾ, ಬಿಎಸ್‌ಪಿಎಲ್ ಕಾರ್ಖಾನೆ ವಿಸ್ತರಣೆ ಹಾಗೂ ಕೊಪ್ಪಳ ಜಿಲ್ಲೆಯ ಸುತ್ತ ನಿರ್ಮಿಸಿರುವ ಕಾರ್ಖಾನೆಗಳನ್ನು ವಿರೋಧಿಸಿ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಮತ್ತೊಂದು ಹಂತದ ಹೋರಾಟಕ್ಕೆ ಸಜ್ಜಾಗಿದೆ.

ಹೋರಾಟದ ರೂಪುರೇಷೆ ಕುರಿತ ಚರ್ಚೆಯಲ್ಲಿ ಭಾಗವಹಿಸಿದ್ದ ನಗರದ ವಾಣಿಜ್ಯೋದ್ಯಮಿಗಳು, ‌ಪರಿಸರಕ್ಕಾಗಿ ನಾವು ಸಂಘಟನೆ, ವಿವಿಧ ಹೋರಾಟ ನಿರತ ಸಂಘಗಳ ಪ್ರಮುಖರು ಬಲ್ಡೋಟ ಹಟಾವೋ, ಕೊಪ್ಪಳ ಬಚಾವೋ ಎನ್ನುವ ತೀರ್ಮಾನಕ್ಕೆ ಏಕಾಭಿಪ್ರಾಯ ವ್ಯಕ್ತಪಡಿಸಿದರು. ಬಹುತೇಕ ಪ್ರಮುಖರು ಗವಿ ಶ್ರೀಗಳ ಜೊತೆ ಚರ್ಚಿಸಿ ಅವರ ನೇತೃತ್ವದಲ್ಲಿ ಹೋರಾಟ ನಡೆಯಬೇಕು ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದರು.

ಜನಜಾಗೃತಿ ಮೂಡಿಸಲು ರೋಗ ಬಾಧಿತರ ಕಿರುಚಿತ್ರ ಪ್ರದರ್ಶನ ಮಾಡಬೇಕೆಂದು ನಿರ್ಣಯ ಕೈಗೊಳ್ಳಲಾಗಿದೆ. ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲು ಅತೀ ಶೀಘ್ರದಲ್ಲಿ ಕಾರ್ಯಯೋಜನೆ ತಯಾರಿಸಿಕೊಳ್ಳಲು, ಗವಿ ಶ್ರೀಗಳನ್ನು ನಗರದ ಪ್ರಮುಖರು, ಪರಿಸರ ಹಿತರಕ್ಷಣಾ ವೇದಿಕೆ ಮುಖಂಡರು ಮತ್ತು ಕೊಪ್ಪಳ ಬಚಾವೋ ಆಂದೋಲನ ಸಮಿತಿ ಒಳಗೊಂಡು ಸಾಮೂಹಿಕ ನಾಯಕತ್ವದ ತಂಡ ಭೇಟಿ ಮಾಡಲಾಗುವುದು ಎಂದು ನಿರ್ಣಯ ಕೈಗೊಳ್ಳಲಾಯಿತು.

Advertisements
WhatsApp Image 2025 05 05 at 10.00.54 AM

ಬಂಡಾಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಮಾತನಾಡಿ, “ಕೊಪ್ಪಳಕ್ಕೆ ಏನೂ ದಕ್ಕಿಲ್ಲ, ಹೊಗೆ, ಧೂಳು ದಕ್ಕಿದೆ. ಸಮಯಕ್ಕೆ ಸರಿಯಾಗಿ ನಾವು ಹೋರಾಟ ಮಾಡಬೇಕು. ಇಲ್ಲದಿದ್ದರೆ ನಮ್ಮ ಆರೋಗ್ಯವನ್ನ ನಾವೇ ಹಾಳು ಮಾಡಿಕೊಳ್ಳುತ್ತೇವೆ. ಈ ದೇಶಕ್ಕೆ ಸ್ವಾತಂತ್ರ್ಯ ಧೀರ್ಘ ಕಾಲದ ಹೋರಾಟದಿಂದ ಬಂದಿದೆ; ಹಾಗೆ ನಾವೂ ‘ಮಾಡು ಇಲ್ಲವೆ ಮಡಿ’ ಎಂಬ ಘೋಷ ವಾಕ್ಯದೊಂದಿಗೆ ಹೋರಾಟ ಮಾಡಬೇಕು. ಬಿಎಸ್‌ಪಿ‌ಎಲ್ ಸ್ಥಳಾಂತರ ಮಾಡಿ ಇಲ್ಲ ಕೊಪ್ಪಳವನ್ನಾದರೂ ಸ್ಥಳಾಂತರ ಮಾಡಿ” ಎಂದು ಅಗ್ರಹಿಸಿದರು.

ಇದನ್ನೂ ಓದಿ: ಕೊಪ್ಪಳ | ನಗರಸಭೆ ಚುನಾವಣೆ; ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಬಿಜೆಪಿ ತೆಕ್ಕೆಗೆ

ಸಭೆಯಲ್ಲಿ ಮಹಾಂತೇಶ ಕೊತಬಾಳ, ಅಂದಣ್ಣ ಅಗಡಿ, ಸಿದ್ದಣ್ಣ ನಾಲ್ವಾಡ, ಡಾ. ಚಂದ್ರಶೇಖರ ಕರಮುಡಿ, ಮಹಾಂತೇಶ ಮಲ್ಲನಗೌಡರ್, ಶರಣು ಡೊಳ್ಳಿನ, ಕಾಶಪ್ಪ ಛಲವಾದಿ, ಬಿ. ಜಿ. ಕರಿಗಾರ, ವೈ.ಬಿ. ಬಂಡಿ, ನಿವೃತ್ತ ಪ್ರಾಂಶುಪಾಲ ರಾಜೂರ, ವಿಪಿನ್ ತಾಲೇಡಾ, ಮುದುಕಪ್ಪ, ರವಿ ಕಾಂತನವರ, ಮೌನೇಶ ಬಡಿಗೇರ, ಬಸವರಾಜ ಸೇರಿ ಅನೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X