ಆಲಮಟ್ಟಿ ಅಣೆಕಟ್ಟು ಎತ್ತರ 524 ಮೀಟರ್‌ ಹೆಚ್ಚಳಕ್ಕೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

Date:

Advertisements

ಆಲಮಟ್ಟಿ ಅಣೆಕಟ್ಟು ಎತ್ತರವನ್ನು 524 ಮೀಟರ್ ಗಳಿಗೆ ಹೆಚ್ಚಿಸಿ, ನಮ್ಮ ಪಾಲಿನ ನೀರು ಬಳಸಿಕೊಳ್ಳಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಜಲ ಸಂಪನ್ಮೂಲ ಸಚಿವರೂ ಆದ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, “2010ರಲ್ಲಿ ಕೃಷ್ಣಾ ಜಲ ನ್ಯಾಯಾಧಿಕರಣ ತೀರ್ಪಿನ ಅನ್ವಯ ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಬೇಕಾಗಿದೆ. ಈ ಸಂಬಂಧ ಮೇ 7ರಂದು ಕೇಂದ್ರ ಜಲಶಕ್ತಿ ಸಚಿವಾಲಯವು ನಾಲ್ಕು ರಾಜ್ಯ ಸರಕಾರದ ಪ್ರತಿನಿಧಿಗಳ ಸಭೆ ಕರೆದಿದೆ. ಈ ವಿಚಾರವಾಗಿ ಸಂಬಂಧಪಟ್ಟ ಸಚಿವರನ್ನು ಕರೆಸಿ ಸಭೆ ಮಾಡಿ ಅಭಿಪ್ರಾಯ ಸಂಗ್ರಹಿಸಲಾಗಿದೆ. ಈ ವಿಚಾರವಾಗಿ ಕಾನೂನು ತಜ್ಞರ ಜತೆ ಚರ್ಚೆ ಮಾಡಿದ್ದು, 2 ದಿನಗಳಲ್ಲಿ ಅವರು ತಮ್ಮ ಅಭಿಪ್ರಾಯ ನೀಡಲಿದ್ದಾರೆ. ಇವುಗಳ ಆಧಾರದ ಮೇಲೆ ಕೇಂದ್ರ ಸಚಿವಾಲಯದ ಸಭೆಯಲ್ಲಿ ನಾವು ನಮ್ಮ ಬೇಡಿಕೆ ಪ್ರಸ್ತಾಪಿಸುತ್ತೇವೆ” ಎಂದು ಹೇಳಿದರು.

“ಈ ಯೋಜನೆ ಜಾರಿಗೆ ಸರ್ಕಾರ ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಿದ್ದು, ಇದಕ್ಕೆ ಅಗತ್ಯ ಹಣ ಮೀಸಲಿಡಲಾಗುವುದು. ಆಂಧ್ರ ಹಾಗೂ ತೆಲಂಗಾಣಕ್ಕೆ 13 ಟಿಎಂಸಿ ನೀರು ಲಾಭವಾಗಲಿ, ನಷ್ಟ ಆಗಲಿ. ನಾವು ಅಣೆಕಟ್ಟನ್ನು 524 ಮೀಟರ್ ಗಳಿಗೆ ಎತ್ತರಿಸಬೇಕು. ಅದಕ್ಕೆ ಎಷ್ಟು ಬೇಕೋ ಅಷ್ಟು ಪ್ರಯತ್ನ ನಾವು ಮಾಡುತ್ತೇವೆ” ಎಂದರು.

Advertisements

ಟನಲ್ ರಸ್ತೆ, ಮೆಟ್ರೋಗೆ ಅಗತ್ಯವಿರುವ ಜಾಗ ಪಡೆಯುತ್ತೇವೆ

ಟನಲ್ ರಸ್ತೆ ಹಾಗೂ ಮೆಟ್ರೋ ಕಾಮಗಾರಿಗೆ ಹೆಬ್ಬಾಳ ಬಳಿಯ ಜಾಗದ ವಿಚಾರವಾಗಿ ನಡೆದ ಸಭೆಯ ಬಗ್ಗೆ ಕೇಳಿದಾಗ, “ಹೆಬ್ಬಾಳ ಜಂಕ್ಷನ್ ಬಹಳ ಮುಖ್ಯವಾದ ಜಾಗ. ಇಲ್ಲಿ ಮೆಟ್ರೋ ಹಾಗೂ ಟನಲ್ ರಸ್ತೆ ಅವಶ್ಯವಿದೆ. ಹೀಗಾಗಿ ನಾವು ಅಗತ್ಯವಿರುವ ಜಾಗವನ್ನು ತೆಗೆದುಕೊಳ್ಳುತ್ತೇವೆ. ಯಾವುದೇ ಕಾರಣಕ್ಕೂ ನಾವು ಯೋಜನೆ ಹಿಂಪಡೆಯಲು ಸಾಧ್ಯವಿಲ್ಲ. ಮೆಟ್ರೋ ಹಾಗೂ ಟನಲ್ ರಸ್ತೆ ಅಧಿಕಾರಿಗಳು ಸೇರಿ ಇದರ ವಿನ್ಯಾಸ ಸಿದ್ಧಪಡಿಸುವಂತೆ ಸೂಚಿಸಿದ್ದೇವೆ. ಇದಕ್ಕೆ ಅಗತ್ಯವಿರುವ ಮಿಲಿಟರಿ ಜಾಗ ಹಾಗೂ ಖಾಸಗಿ ಜಾಗ ಎಷ್ಟು ಬೇಕು ಎಂದು ನಾವು ಚರ್ಚೆ ಮಾಡಿದ್ದೇವೆ. ಟಿಡಿಆರ್ ಅಥವಾ ಎಫ್ ಎ ಆರ್ ಮೂಲಕ ಪರಿಹಾರ ನೀಡಲು ನಾವು ಬದ್ಧವಾಗಿದ್ದೇವೆ. ನಾವು ಈ ಜಾಗ ಬಿಟ್ಟು ಕೊಡಲು ಸಿದ್ದವಿಲ್ಲ‌. ಟನಲ್ ನಿರ್ಮಾಣಕ್ಕೆ ಟೆಂಡರ್ ಕರೆಯಬೇಕಾಗಿದ್ದು, ಇದಕ್ಕೆ ಅಗತ್ಯವಿರುವ ಜಾಗದ ವಿಚಾರವಾಗಿ ನಾವು ಸಭೆ ಮಾಡಿದ್ದೇವೆ” ಎಂದು ಹೇಳಿದರು.

ಒಳಮೀಸಲಾತಿ | ಮುಕ್ತ ಅವಕಾಶ ನೀಡಿದ್ದೇವೆ

ಒಳ ಮೀಸಲಾತಿ ವಿಚಾರವಾಗಿ ಸಮೀಕ್ಷೆ ಆರಂಭವಾಗುತ್ತಿರುವ ಬಗ್ಗೆ ಕೇಳಿದಾಗ, “ಒಳ ಮೀಸಲಾತಿಗೆ ಸಮೀಕ್ಷೆ ಮಾಡಲು ಸಚಿವ ಸಂಪುಟ ತೀರ್ಮಾನ ಮಾಡಿದೆ. ಇದಕ್ಕಾಗಿ ಸಮಿತಿ ಮಾಡಿದ್ದು, ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಯಾವುದೇ ಗೊಂದಲ ಇಲ್ಲದಂತೆ ಜನರು ತಮ್ಮ ಜಾತಿಗಳನ್ನು ಸ್ಪಷ್ಟವಾಗಿ ಮಾಹಿತಿ ನೀಡಬೇಕು ಎಂದು ಮುಕ್ತ ಅವಕಾಶ ಮಾಡಿಕೊಡಲಾಗಿದೆ” ಎಂದು ತಿಳಿಸಿದರು.

ಒಳ ಮೀಸಲಾತಿ ಬಗ್ಗೆ ಗೊಂದಲಗಳಿವೆ ಎಂದು ಕೇಳಿದಾಗ, “ಯಾವುದೇ ಗೊಂದಲ ಇಲ್ಲ. ಈ ವಿಚಾರವಾಗಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ನಮ್ಮ ಪಕ್ಷ ಪ್ರಣಾಳಿಕೆಯಲ್ಲಿ ಮಾತು ಕೊಟ್ಟಿದೆ. ಈ ಸಮುದಾಯಗಳಲ್ಲಿ ಕೆಲವು ಪಂಗಡಗಳು ಸರಿಯಾಗಿ ಮಾಹಿತಿ ನೀಡಿಲ್ಲ, ನಮ್ಮ ಸಂಖ್ಯೆ ಹೆಚ್ಚಿದೆ, ನಗರ ಪ್ರದೇಶದಲ್ಲಿ ಇರುವವರು ತಮ್ಮ ಸಮುದಾಯವನ್ನು ಬಹಿರಂಗಪಡಿಸಿಲ್ಲ. ಹೀಗಾಗಿ ಅವರಿಗೆ ಮುಕ್ತ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X