ಕ್ರೀಡಾ ಪ್ರಾಧಿಕಾರದಿಂದ ಕಾಣದ ಪ್ರಗತಿ, ಅಧಿಕಾರಿಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ

Date:

Advertisements

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಗಮನಿಸಿ ಸಿಎಂ ಸಿದ್ದರಾಮಯ್ಯ ಅವರು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು. 176 ತರಬೇತುದಾರರ ನೇಮಕಾತಿಗೆ ನಾನೇ ಸೂಚಿಸಿ ಒಂದು ವರ್ಷ ಆದರೂ ನೇಮಕಾತಿ ಆಗಿಲ್ಲ ಏಕೆ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

ಪ್ರಾಧಿಕಾರ ಮಾಡಿದ ಉದ್ದೇಶವೇ ಈಡೇರದಿದ್ದರೆ ಇದನ್ನು ಮಾಡಿ ಪ್ರಯೋಜನವೇನು? ನಿಗಧಿತವಾಗಿ ಪ್ರಾಧಿಕಾರದ ಸಭೆಗಳನ್ನು ನಡೆಸಬೇಕು. ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದ ಕಾರ್ಯ ಚಟುವಟಿಗಳನ್ನು ಸಮಗ್ರವಾಗಿ ಅಧ್ಯಯನ ಮಾಡಿ ಅದಕ್ಕಿಂತ ಉತ್ತಮ ರೀತಿಯಲ್ಲಿ ನಮ್ಮ ಮಿತಿಯೊಳಗೆ ಕ್ರೀಡಾ ಕಾರ್ಯ ಚಟುವಟಿಕೆಗಳನ್ನು ನಡೆಸುವ ಬಗ್ಗೆ ಕ್ರಮ ವಹಿಸಿ” ಎಂದು ಸೂಚಿಸಿದರು.

“ಮುಂದಿನ ಐದಾರು ತಿಂಗಳಲ್ಲಿ, ದಸರಾ ಕ್ರೀಡಾಕೂಟ ಆರಂಭವಾಗುವುದರೊಳಗೆ ಪ್ರಾಧಿಕಾರ ಕ್ರಿಯಾಶೀಲ ಆಗಬೇಕು. ಆರ್ಥಿಕ ಇಲಾಖೆ ಒಪ್ಪಿಗೆ ಕೊಟ್ಟರೂ ಅಗತ್ಯ ತರಬೇತುದಾರರ ನೇಮಕಾತಿ ಆಗಿಲ್ಲ. ಪ್ರತೀ ಜಿಲ್ಲೆಯಲ್ಲೂ ಉಪ ನಿರ್ದೇಶಕರು ಕಡ್ಡಾಯವಾಗಿ ಇರಬೇಕು” ಎನ್ನುವ ಸೂಚನೆ ನೀಡಿದರು.

Advertisements

“ಪ್ರತೀ ವರ್ಷ ಪ್ರಾಧಿಕಾರದ ಸಭೆ, ಪ್ರತೀ ವರ್ಷ ಆಡಿಟ್ ಆಗಬೇಕು. ಪ್ರತೀ ವರ್ಷ ನೇಮಕಾತಿ ನಡೆಯಬೇಕು. ತಪ್ಪಿದರೆ ಸಹಿಸಲ್ಲ. ರಾಷ್ಟ್ರೀಯ ಕ್ರೀಡಾಕೂಟ ಸಂಘಟಿಸಲು ಅನುಧಾನ ನಿಗಧಿ ಪಡಿಸಲು ಮತ್ತು ಅಂತಾರಾಷ್ಟ್ರೀಯ ಕ್ರೀಡಾಕೂಟ ಸಂಘಟಿಸುವ ಮೊದಲು ಕನಿಷ್ಠ 15 ರಾಷ್ಟ್ರಗಳು ಪಾಲ್ಗೊಳ್ಳುವಿಕೆಯನ್ನು ಖಚಿತಪಡಿಸಿಕೊಳ್ಳಬೇಕು. ಇದಕ್ಕೆ ಸರಿಯಾದ ಗೈಡ್ ಲೈನ್ಸ್ ಗಳನ್ನು ಸಿದ್ಧಪಡಿಸಿ” ಎಂದು ಹೇಳಿದರು.

ಕಂಬಳವನ್ನು ಗ್ರಾಮೀಣ ಕ್ರೀಡೆ ಎಂದು ಮಾನ್ಯತೆ ನೀಡಿ ಪ್ರೋತ್ಸಾಹ ನೀಡುವ ಬಗ್ಗೆ ಚರ್ಚಿಸಲಾಯಿತು. ಕ್ರೀಡಾಕೂಟಗಳಿಗೆ ಅನುದಾನ ನೀಡುವುದು ಆನ್ ಲೈನ್ ನಲ್ಲಿ ದಾಖಲಾಗಬೇಕು. ಕ್ರೀಡಾಕೂಟ ಮುಗಿದ ಬರುವವರಿಗೆ ಅವಕಾಶ ಇರಬಾರದು ಎನ್ನುವ ಬಗ್ಗೆ ಚರ್ಚಿಸಲಾಯಿತು. ಹಾಗೆಯೇ ಕಂಠೀರವ ಕ್ರೀಡಾಂಗಣ ಹವಾ ನಿಯಂತ್ರಿತ ವ್ಯವಸ್ಥೆ ಶೀರ್ಘ್ರದಲ್ಲಿ ಜಾರಿಗೊಳಿಸುವಂತೆ ಸೂಚನೆ ನೀಡಿದರು.

ಕಂಠೀರವ ಕ್ರೀಡಾಂಗಣ ನಿರ್ಮಾಣವಾಗಿ 29 ವರ್ಷಗಳಾಗಿರುವುದರಿಂದ ಪ್ರೇಕ್ಷಕರ ಸುರಕ್ಷತೆಗೆ ಗ್ಯಾಲರಿಗಳ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸುವ ಬಗ್ಗೆ ಚರ್ಚೆ ನಡೆಸಲಾಯಿತು. ಕಂಠೀರವ ಕ್ರೀಡಾಂಗಣದ ಜಿಮ್, ಶೌಚಾಲಯ, ಟ್ರಾಕ್ ಗಳ ದುರಸ್ತಿಗೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಯಿತು.

ಕ್ರೀಡಾಪಟುಗಳಿಗೆ ಅಗತ್ಯವಾದಷ್ಟು ಪೌಷ್ಠಿಕಾಂಶ ಮತ್ತು ಪ್ರೋಟೀನ್ ಯುಕ್ತ ಆಹಾರ ಕೊಡಬೇಕು. ಪದೇ ಪದೇ ಪರಿಶೀಲನೆ ನಡೆಸಿ, ಲೋಪ ಕಂಡರೆ ವಾರ್ಡನ್ ಗಳ ವಿರುದ್ಧ ಕ್ರಮ ಕೈಗೊಂಡು ವರದಿ ನೀಡುವಂತೆ , ಕ್ರೀಡಾ ಹಾಸ್ಟೆಲ್ ಗಳಿಗೆ surprise visit ಮಾಡಿ , ಅಲ್ಲೇ ಊಟ ಮಾಡಿ ಆಹಾರದ ಗುಣಮಟ್ಟ ಪರಿಶೀಲನೆ ನಡೆಸಿ ವರದಿ ನೀಡಲು ಸಿಎಂ ಸೂಚನೆ ನೀಡಿದರು.

ಆನ್ ಲೈನ್ ಬಂದ DCM

ಕ್ರೀಡಾ ಇಲಾಖೆ ಪ್ರಗತಿ ಪರಿಶೀಲನೆ ನಡೆಯುವ ವೇಳೆ ಚನ್ನಪಟ್ಟಣದಿಂದ ಆನ್ ಲೈನ್ ಮೂಲಕ ವಿಡಿಯೊ ಕಾನ್ಪರೆನ್ಸ್ ಗೆ ಬಂದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಚನ್ನಪಟ್ಟಣ ಕ್ರೀಡಾಂಗಣಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಕೋರಿದರು. ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಅಗತ್ಯ ಕ್ರಮಕ್ಕಾಗಿ ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X