ಕೊರಟಗೆರೆ | ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ತಹಶೀಲ್ದಾರ್ ಕೆ.ಮಂಜುನಾಥ್ ಚಾಲನೆ

Date:

Advertisements

 ಭಾರತದ ಸಂವಿಧಾನ ಆಶಯ, ಸಮಾನತೆಯ ತತ್ವ ಆಧಾರದ ಮೇಲೆ ಅವಕಾಶದಿಂದ ವಂಚಿತರಾದವರಿಗೆ ಸರ್ಕಾರದ ಪ್ರತಿ ಸೌಲಭ್ಯ ಪಡೆಯಲು ಅನುಕೂಲವಾಗುವಂತೆ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ್‌ದಾಸ್ ನೇತೃತ್ವದ ಏಕ ಸದಸ್ಯ ವಿಚಾರಣಾ ಆಯೋಗವು ಪ.ಜಾತಿಗಳ ಸಮಗ್ರ ಸಮೀಕ್ಷೆ-2025 ಮೊದಲ ಹಂತದ ಸಮೀಕ್ಷೆ ಮೇ.5ರಿಂದ 17 ರ ತನಕ ನಡೆಯಲಿದೆ ಎಂದು ತಹಶೀಲ್ದಾರ್ ಕೆ.ಮಂಜುನಾಥ್ ತಿಳಿಸಿದರು.

ಕೊರಟಗೆರೆ ಪಟ್ಟಣದ ಗುಂಡಾಂಜನೇಯ ಸ್ವಾಮಿ ದೇವಾಲಯದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯ್ತಿ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾದ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ದತ್ತಾಂಶಗಳ ಸಂಗ್ರಹಣೆ ಕಾರ್ಯಕ್ಕೆ ಸೋಮವಾರ ಬೆಳಗ್ಗೆ ಸಸಿಗೆ ನೀರು ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಕರ್ನಾಟಕ ಸರ್ಕಾರದ ಆದೇಶದ ಅನ್ವಯ ಪ.ಜಾತಿಗೆ ಒಳ ಮೀಸಲಾತಿ ಕಲ್ಪಿಸುವ ಉದ್ದೇಶದ ಪರಿಶಿಷ್ಟ ಜಾತಿ ಪ್ರತಿಯೊಂದು ಕುಟುಂಬದ ದತ್ತಾಂಶ ಸಂಗ್ರಹಣೆಯನ್ನು ಶಿಕ್ಷಕರಿಗೆ ಈಗಾಗಲೇ ನೀಡಿರುವ ತರಬೇತಿಯಂತೆ ನಡೆಸಬೇಕು. ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ , ಲಂಬಾಣಿ ಸೇರಿ 101 ಜಾತಿಗಳು ಪ.ಜಾತಿಗೆ ಒಳಪಡುತ್ತವೆ. ಪ.ಪಂ ವ್ಯಾಪ್ತಿ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಸಮೀಕ್ಷೆ ನಡೆಸಲು ಕ್ರಮವಹಿಸಲಾಗಿದೆ ಎಂದು ಹೇಳಿದರು.

Advertisements

ಗೃಹ ಸಚಿವರ ವಿಶೇಷ ಅಧಿಕಾರಿ ಡಾ.ಕೆ ನಾಗಣ್ಣ ಮಾತನಾಡಿ, ಗೃಹ ಸಚಿವ ಡಾ.ಜಿ ಪರಮೇಶ್ವರ್‌ರವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಪ.ಜಾತಿಯ ಒಳಮೀಸಲಾತಿ ದತ್ತಾಂಶ ಸಂಗ್ರಹಣೆ ಕಾರ್ಯವು ಒಳ ಮೀಸಲಾತಿ ಜಾರಿಗೆ ಬಹುಮುಖ್ಯ ಪಾತ್ರವಹಿಸುತ್ತದೆ. ಸಮುದಾಯದ ಪ್ರತಿಯೊಬ್ಬ ವ್ಯಕ್ತಿಯ ಸಂಪೂರ್ಣ ವಿವರವನ್ನು ಸಂಗ್ರಹಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಸೂಚನೆ ನೀಡಿದರು.

ನಿವೃತ್ತ ಐಎಎಸ್ ಅಧಿಕಾರಿ ಬಿ.ಎಚ್ ಅನಿಲ್‌ಕುಮಾರ್ ಮಾತನಾಡಿ ಕರ್ನಾಟಕದಲ್ಲಿನ ಪ.ಜಾತಿಯಲ್ಲಿನ ಉಪಜಾತಿಗಳ ಬಗ್ಗೆ ನಿಖರವಾದ ಮಾಹಿತಿ ಕೊರತೆಯಿಂದ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ್‌ದಾಸ್ ನೇತೃತ್ವದ ಏಕ ಸದಸ್ಯ ವಿಚಾರಣಾ ಆಯೋಗದಿಂದ ರಾಜ್ಯದಲ್ಲಿ ಪ.ಜಾತಿಗಳ ಜಾತಿ ಜನಗಣತಿ ನಡೆಯುತ್ತಿದೆ. ಪ್ರಮುಖವಾಗಿ ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂದ್ರ ಉಪಜಾತಿಗಳಲ್ಲಿನ ಗೊಂದಲ ನಿವಾರಣೆಗೆ ಮೊದಲ ಹಂತದ ಸಮೀಕ್ಷೆ ಅಗತ್ಯವಾಗಿದೆ ಎಂದರು.

ದಲಿತ ಮುಖಂಡ ದಾಡಿ ವೆಂಕಟೇಶ್ ಮಾತನಾಡಿ ಪ.ಜಾತಿಯಲ್ಲಿನ 101 ಜಾತಿಗಳಲ್ಲಿ ಒಳಮೀಸಲಾತಿ ವರ್ಗೀಕರಣಕ್ಕೆ ಒತ್ತು ನೀಡಿ ಶಿಕ್ಷಕರಿಗೆ ಈಗಾಗಲೇ ತರಬೇತಿಯನ್ನು ನೀಡಿದೆ. ಒಳ ಮೀಸಲಾತಿ ಜಾರಿಗೆ ಪ.ಜಾತಿಯ ಜನಾಂಗದ ಕೂಗು. ಆದಿ ಕರ್ನಾಟಕ, ಆದಿ ದ್ರಾವಿಡ ಜಾತಿಗಳಲ್ಲಿನ ಉಪಜಾತಿಗಳ ಬಗ್ಗೆ ೮ಜಿಲ್ಲೆಗಳಲ್ಲಿ ಗೊಂದಲವನ್ನು ಉಂಟುಮಾಡಿದೆ. ಅಪ್ಲಿಕೇಷನ್‌ನಲ್ಲಿ ಜಾತಿ ಮತ್ತು ಉಪಜಾತಿ ಹೆಸರನ್ನು ನಮೂದಿಸಿ ಗೊಂದಲಗಳಿಗೆ ತೆರೆ ಎಳೆಯಬೇಕಿದೆ ಎಂದರು.

ಇದೇ ಸಂದರ್ಭದಲ್ಲಿ ಬಿಇಓ ನಟರಾಜ್, ಪ.ಪಂ ಅಧ್ಯಕ್ಷೆ ಅನಿತಾ, ಸ್ಥಾಯಿ ಸಮಿತಿ ಅಧ್ಯಕ್ಷೆ ಹೇಮಲತಾ ಮಂಜುನಾಥ್, ಪ.ಪಂ ಮುಖ್ಯಾಧಿಕಾರಿ ಉಮೇಶ್, ಸದಸ್ಯರಾದ ಕೆ.ಆರ್ ಓಬಳರಾಜು, ಪ್ರದೀಪ್‌ಕುಮಾರ್, ಪುಟ್ಟನರಸಪ್ಪ, ಮಂಜುಳಾ ಗೋವಿಂದರಾಜು, ಮುಖಂಡರಾದ ದಾಡಿ ವೆಂಕಟೇಶ್, ಶಿವರಾಮ್, ಜಯರಾಮಣ್ಣ, ವೀರಕ್ಯಾತಯ್ಯ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

Download Eedina App Android / iOS

X