ಬೀದರ್ ತಾಲ್ಲೂಕಿನ ಬರೂರ ಗ್ರಾಮ ವ್ಯಾಪ್ತಿಯಲ್ಲಿ ಬರುವ ಬರೂರ ಗ್ರಾಮದಲ್ಲಿ ಅಧಿಕಾರಿಗಳು ಬಾಲ್ಯ ವಿವಾಹ ತಡೆ ಹಿಡಿಯಲಾಗಿದೆ.
ಪೊಲೀಸ್ ಇಲಾಖೆಯ 112 ನಂಬರ್‌ಗೆ ಬಂದ ಮಾಹಿತಿಯ ಮೇರೆಗೆ ಗ್ರಾಮ ಪಂಚಾಯಿತಿ ಪಿಡಿಒ ಗೀತಾ ಕೆ. ಅವರು ಬಾಲ್ಯ ವಿವಾಹ ತಡೆಗಟ್ಟುವ ಸಮಿತಿಯ ಸದಸ್ಯರಿಗೆ ದೂರವಾಣಿ ಮುಖಾಂತರ ಮಾಹಿತಿ ತಿಳಿಸಿದರು.
ಜಿಲ್ಲಾ ಮಕ್ಕಳ ರಕ್ಷಣೆ ಸಮಿತಿಯ ಅಧಿಕಾರಿಗಳಾದ ಸೂರ್ಯಕಾಂತ ಹಾಗೂ ಸುರೇಖಾ ಗ್ರಾಪಂ ಅಧ್ಯಕ್ಷರು ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಬಾಲಕಿಯ ಮನೆಗೆ ತೆರಳಿ ಬಾಲ್ಯ ವಿವಾಹದಿಂದ ಆಗುವ ದುಷ್ಪರಿಣಾಮ ಹಾಗೂ ಶಿಕ್ಷೆ ಕುರಿತು ಪಾಲಕರಿಗೆ ತಿಳಿಸಿದರು.
ಈ ಕುರಿತು ಪೋಷಕರಿಂದ ಮುಚ್ಚಳಿಕೆ ಪತ್ರ ಬರೆಸಿಕೊಂಡು ಮುಂದೆ ಹೀಗಾಗದಂತೆ ಎಚ್ಚರಿಕೆವಹಿಸಬೇಕು ಎಂದು ಸೂಚಿಸಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಜೂನ್‌ನಿಂದ ಕಮಲನಗರದಲ್ಲಿ ಸರ್ಕಾರಿ ಪ್ರೌಢ ಶಾಲೆ ಆರಂಭ : ಶಾಸಕ ಪ್ರಭು ಚವ್ಹಾಣ