ಕೊಡಗು | ನಗರ, ಸ್ಥಳೀಯ, ಗ್ರಾಮೀಣ ಸಂಸ್ಥೆಗಳ ಬಲವರ್ಧನೆಗೆ ಮುಂದಾಗಿ : ಡಾ. ಸಿ. ನಾರಾಯಣ ಸ್ವಾಮಿ

Date:

Advertisements

ಮಡಿಕೇರಿ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಸಾಂಸ್ಥಿಕ ರಚನೆ, ಕಾರ್ಯ ಚಟುವಟಿಕೆಗಳು, ಆರ್ಥಿಕ ಸ್ಥಿತಿಗತಿ, ಮೂಲ ಸೌಕರ್ಯ ಹಾಗೂ ಸೇವೆ ಒದಗಿಸುವಲ್ಲಿ ತಾಂತ್ರಿಕ ಕೌಶಲ್ಯ ಮತ್ತಿತರ ಅಧ್ಯಾಯನ ಸಂಭಂದ ಸೋಮವಾರ ನಡೆದ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಕರ್ನಾಟಕ ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಡಾ. ಸಿ. ನಾರಾಯಣ ಸ್ವಾಮಿ ಮಾತನಾಡಿ ‘ ನಗರ, ಸ್ಥಳೀಯ, ಗ್ರಾಮೀಣ ಸಂಸ್ಥೆಗಳ ಬಲವರ್ಧನೆಗೆ ಮುಂದಾಗಿ ‘ ಎಂದು ಕರೆಕೊಟ್ಟರು.

” ನಗರ, ಸ್ಥಳೀಯ,ಗ್ರಾಮೀಣ ಸಂಸ್ಥೆಗಳು ಲಭ್ಯವಿರುವ ಸಂಪನ್ಮೂಲವನ್ನು ಕ್ರೂಢಿಕರಿಸಿ ಅಗತ್ಯ ಸೇವೆಗಳನ್ನು ಕಲ್ಪಿಸಬೇಕು. ಅಭಿವೃದ್ಧಿಯತ್ತ ಮುನ್ನಡೆಯಬೇಕು. ಆದಾಯ ತೆರಿಗೆ ಸಂಗ್ರಹ ಮೂಲ ಸೌಲಭ್ಯ ಸೌಕರ್ಯಕ್ಕೆ ಒತ್ತು ನೀಡುವುದು, ಕುಡಿಯುವ ನೀರು, ವಿದ್ಯುತ್ ಪೂರೈಕೆ, ಸ್ವ ಉದ್ಯೋಗಕ್ಕೆ ಉತ್ತೇಜನ ನೀಡುವುದು, ಗ್ರಾಮೀಣಾಭಿವೃದ್ಧಿ ಮತ್ತು ನಗರ ಪ್ರದೇಶಗಳಲ್ಲಿ ಅಭಿವೃದ್ಧಿ ಚಟುವಟಿಕೆಗೆ ಪೂರಕವಾಗಿ ಕಾರ್ಯಕ್ರಮ ರೂಪಿಸುವಂತಾಗಬೇಕು. ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಜವಾಬ್ದಾರಿಗಳಿದ್ದು, ಆ ನಿಟ್ಟಿನಲ್ಲಿ ಹೆಚ್ಚಿನ ಗಮನಹರಿಸಬೇಕು ” ಎಂದರು.

ರಾಜ್ಯ 5ನೇ ಹಣಕಾಸು ಆಯೋಗದ ಸದಸ್ಯರಾದ ಆರ್.ಎಸ್.ಪೋಂಡೆ ಮಾತನಾಡಿ ‘ ಗ್ರಾಮೀಣ, ನಗರ, ಸ್ಥಳೀಯ ಸಂಸ್ಥೆಗಳ ಕಾರ್ಯ ಚಟುವಟಿಕೆ, ಆರ್ಥಿಕ ಸ್ಥಿತಿಗತಿ, ಸಂಪನ್ಮೂಲ ಕ್ರೂಢೀಕರಣ, ಹಂಚಿಕೆ ಸಂಬಂಧ ಸಮರ್ಪಕ ಮಾಹಿತಿ ಒದಗಿಸುವಂತಾಗಬೇಕು. ಸ್ಥಳೀಯ ಸಂಸ್ಥೆಗಳನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಎಲ್ಲರೂ ಮುಂದಾಗಬೇಕು. ಆಗ ಮಾತ್ರ ಅಭಿವೃದ್ಧಿ ಸಾಧಿಸಲು ಸಾಧ್ಯ ‘ ಎಂದು ಅಭಿಪ್ರಾಯಪಟ್ಟರು.

Advertisements

ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ ಆದಾಯ ತೆರಿಗೆ ಸಂಗ್ರಹ ಸೇರಿದಂತೆ ಸ್ಥಳೀಯ ಸಂಸ್ಥೆ ವ್ಯಾಪ್ತಿಗಳಲ್ಲಿ ಸಮರ್ಪಕ ನಿರ್ವಹಣೆಗೆ ಖಾಯಂ ಸಿಬ್ಬಂದಿ ನೇಮಿಸುವಂತಾಗಬೇಕು. ಇದರಿಂದ, ಜವಾಬ್ದಾರಿ ಹೆಚ್ಚಾಗಲಿದೆ ಎಂದರು.

ಜಿಪಂ.ಸಿಇಓ ಆನಂದ್ ಪ್ರಕಾಶ್ ಮೀನಾ ಮಾತನಾಡಿ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಶೇ.50ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದ್ದು, ಇವುಗಳನ್ನು ಭರ್ತಿ ಮಾಡುವಂತಾಗಬೇಕು. ಜೊತೆಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು. ಹಾಗೆಯೇ, ಸ್ಥಳೀಯವಾಗಿ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸುವಂತಾಗಬೇಕು ಎಂದು ಮನವಿ ಮಾಡಿದರು.

ಜಿಪಂ.ಮುಖ್ಯ ಲೆಕ್ಕಾಧಿಕಾರಿ ಜೀವಲ್ ಕಾನ್ ಮಾತನಾಡಿ ” ಕೊಡಗು ಜಿಲ್ಲಾ ಪಂಚಾಯಿತಿಯಲ್ಲಿ ಮಂಜೂರಾದ 108 ಹುದ್ದೆಗಳಲ್ಲಿ 12 ಭರ್ತಿಯಾಗಿದ್ದು, 97 ಹುದ್ದೆಗಳು ಖಾಲಿಯಿದೆ. ತಾಪಂ ಗೆ ಮಡಿಕೇರಿ ತಾಲ್ಲೂಕಿನಲ್ಲಿ ಮಂಜೂರಾದ 23 ಹುದ್ದೆಗಳಲ್ಲಿ ಒಂದು ಹುದ್ದೆ ಭರ್ತಿಯಾಗಿದೆ. ಉಳಿದಂತೆ 22 ಹುದ್ದೆಗಳು ಖಾಲಿಯಿದೆ. ಸೋಮವಾರಪೇಟೆ ತಾಲ್ಲೂಕಿನಲ್ಲಿ 23 ಹುದ್ದೆಗಳಲ್ಲಿ 4 ಹುದ್ದೆಗಳು ಭರ್ತಿಯಾಗಿದ್ದು, 19 ಹುದ್ದೆಗಳು ಖಾಲಿ ಉಳಿದಿವೆ. ಕುಶಾಲನಗರ ತಾಲ್ಲೂಕಿನಲ್ಲಿ ಮಂಜೂರಾದ 12 ಹುದ್ದೆಗಳಲ್ಲಿ 12 ಹುದ್ದೆಗಳು ಖಾಲಿಯಿವೆ. ವಿರಾಜಪೇಟೆ ತಾಲ್ಲೂಕಿನಲ್ಲಿ ಮಂಜೂರಾದ 26 ಹುದ್ದೆಗಳಲ್ಲಿ 3 ಹುದ್ದೆಗಳು ಭರ್ತಿಯಾಗಿದ್ದು, 23 ಹುದ್ದೆಗಳು ಖಾಲಿಯಿವೆ. ಪೊನ್ನಂಪೇಟೆ ತಾಲ್ಲೂಕಿನಲ್ಲಿ 12 ಮಂಜೂರಾತಿ ಹುದ್ದೆಗಳಲ್ಲಿ 12 ಹುದ್ದೆಗಳು ಖಾಲಿಯಿವೆ. ಒಟ್ಟಾರೆ 96 ಹುದ್ದೆಗಳಲ್ಲಿ 8 ಹುದ್ದೆಗಳು ಭರ್ತಿಯಾಗಿದ್ದು, 88 ಹುದ್ದೆಗಳು ಖಾಲಿಯಿವೆ ” ಎಂದು ಮಾಹಿತಿ ನೀಡಿದರು.

‘ಆಡಳಿತ ಸುಧಾರಣೆ ಮತ್ತು ಮಾಹಿತಿ ತಂತ್ರಜ್ಞಾನ ಉಪ ಕ್ರಮಗಳು ಸೇರಿದಂತೆ ಪಂಚತಂತ್ರ 2.0, ಇ-ಸ್ವತ್ತು, 15ನೇ ಹಣಕಾಸು, ನರೇಗಾ, ವಸತಿ, ಸ್ವಚ್ಛ ಭಾರತ ಮಿಷನ್, ಇ-ಕಚೇರಿ, ಐಪಿಜಿಆರ್‍ಎಸ್, ಮತ್ತಿತರ ಒಳಗೊಂಡಿವೆ ‘ ಎಂದು ಜೀವಲ್ ಖಾನ್ ತಿಳಿಸಿದರು.’

ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ.ಬಸಪ್ಪ ಮಾತನಾಡಿ ‘ ಖಾಯಂ ನೌಕರರನ್ನು ನೇಮಕ ಮಾಡುವಂತಾಗಬೇಕು. ಡಾಟಾ ಆಪರೇಟರ್‍ ಗಳು ಅರ್ಧದಲ್ಲಿಯೇ ಕೆಲಸ ಬಿಡಲಿದ್ದು, ಸ್ಥಳೀಯ ಖಾಯಂ ಸಿಬ್ಬಂದಿಗಳನ್ನು ನಿಯೋಜಿಸುವಂತಾಗಬೇಕು. ವೇತನ ಹೆಚ್ಚಿಸಬೇಕು ‘ ಎಂದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ 10 ಕೋಟಿ ಅನುದಾನ : ಜಿ. ಪಲ್ಲವಿ

ಮಹಮ್ಮದ್ ಸನಾವುಲ್ಲಾ, ಕೆಂಪೇಗೌಡ, ಕೆ. ಯಾಲಕ್ಕಿ ಗೌಡ, ಪ್ರಸನ್ನ, ನಗರಸಭೆ ಅಧ್ಯಕ್ಷೆ ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ವಿವಿಧ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು, ಪೌರಾಯುಕ್ತರು, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು, ವಿವಿಧ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X