ಬಾಬಾ ಸಾಹೇಬ್ ಅಂಬೇಡ್ಕರ್ ಭಾಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಅಪಮಾನಗೊಳಿಸಿರುವ ಘಟನೆ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಕವಳಕೇರಿ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ. ಘಟನೆ ಸಂಬಂಧ ಇಬ್ಬರು ದುಷ್ಕರ್ಮಿಗಳನ್ನು ಬಂಧಿಸಲಾಗಿದೆ.
ಶಿವಕುಮಾರ್ ಮುದ್ಲಾಪೂರ ಹಾಗೂ ಈರಣ್ಣ ಮುದ್ಲಾಪೂರ ಬಂಧಿತರು. ಘಟನೆ ಇಬ್ಬರಿಂದಷ್ಟೇ ನಡೆದಿಲ್ಲ. ಇದರಲ್ಲಿ ಹಲವರು ಭಾಗಿಯಾಗಿದ್ದು, ಎಲ್ಲರನ್ನೂ ಬಂಧಿಸಲು ಪೊಲೀಸರು ಮೀನಾಮೇಷ ಎಣಿಸುತ್ತಿದ್ದಾರೆ ಎಂದು ದಲಿತ ಸಮುದಾಯ ಆರೋಪಿಸಿದೆ.
ಕಿಡಿಗೇಡಿಗಳು ಅಂಬೇಡ್ಕರ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ್ದನ್ನ ಬಡಾವಣೆಯ ಶಿವು ನೋಡಿ, ಸಮುದಾಯದ ಮುಖಂಡರಿಗೆ ಸುದ್ಧಿ ತಿಳಿಸಿ ನಂತರ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ರಸ್ತೆಯಲ್ಲೇ ಕುಳಿತು ಪ್ರತಿಭಟಿಸಿದ್ದಾರೆ.
ಬಳಿಕ ಗ್ರಾಮಕ್ಕೆ ಪೊಲೀಸ್ ಮೇಲಧಿಕಾರಿಗಳು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗ್ರಾಮದ ಇನ್ನೂ 8 ಮಂದಿ ವಿರುದ್ಧ ಆರೋಪ ಕೇಳಿ ಬಂದಿದ್ದು, ಮುಂದಿನ ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ: ಕೊಪ್ಪಳ | ನಗರಸಭೆ ಚುನಾವಣೆ; ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಬಿಜೆಪಿ ತೆಕ್ಕೆಗೆ